Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸ್ನಾತಕೋತ್ತರ ಅಧ್ಯಯನ ಮತ್ತು ಅತ್ಯಾಧುನಿಕ ಸಂಶೋಧನಾ ಕೇಂದ್ರದ ಕಟ್ಟಡ ಪರಿಶೀಲಿಸಿದ ಡಿಸಿಎಂ
  • Bangalore
  • Front news
  • Politics
  • State

ಸ್ನಾತಕೋತ್ತರ ಅಧ್ಯಯನ ಮತ್ತು ಅತ್ಯಾಧುನಿಕ ಸಂಶೋಧನಾ ಕೇಂದ್ರದ ಕಟ್ಟಡ ಪರಿಶೀಲಿಸಿದ ಡಿಸಿಎಂ

Praja Vahini September 18, 2026 1 minute read
4156377d-c913-4be1-b170-9e2c6f5dfe13
Spread the love

ಉಡುಪಿ: ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ ಅವರು ಇಂದು ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಬೆಳಪು ಗ್ರಾಮದಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ‘ಸ್ನಾತಕೋತ್ತರ ಅಧ್ಯಯನ ಮತ್ತು ಅತ್ಯಾಧುನಿಕ ಸಂಶೋಧನಾ ಕೇಂದ್ರ’ದ ಕಟ್ಟಡವನ್ನು ಪರಿಶೀಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ಸುಮಾರು ರೂ. 53.85 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಈ ಬೃಹತ್ ಕಟ್ಟಡವು ಕೆಲ ವರ್ಷಗಳಿಂದ ಬಳಕೆಯಾಗದೆ ಖಾಲಿ ಬಿದ್ದಿದ್ದು, ದುರಾವಸ್ಥೆಗೆ ತಲುಪುವ ಭೀತಿಯಲ್ಲಿದೆ. ಕಟ್ಟಡ ಹಾಗೂ ಕ್ಯಾಂಪಸ್ ಅನ್ನು ಸೂಕ್ತ ಮತ್ತು ಸದ್ಬಳಕೆಯ ಉದ್ದೇಶಕ್ಕಾಗಿ ಬಳಸಿಕೊಳ್ಳುವ ಕುರಿತು ಸರ್ಕಾರದ ಹಂತದಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

2014-15ನೇ ಸಾಲಿನ ಬಜೆಟ್‌ನಲ್ಲಿ ವಿಜ್ಞಾನ ಕೇಂದ್ರ ಸ್ಥಾಪಿಸುವ ಕುರಿತು ಘೋಷಣೆ ಮಾಡಲಾಗಿತ್ತು. ಕೇಂದ್ರ ಸರ್ಕಾರದ ರೂಸಾ (RUSA) ಯೋಜನೆಯಡಿ, ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ರೂಸಾ ಅನುದಾನದ ಮೂಲಕ ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿತ್ತು ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಎರಡು ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸುವ ಪ್ರಸ್ತಾವನೆ ಇದ್ದು, ಅದರಲ್ಲಿ ಒಂದನ್ನು ಮಂಗಳೂರಿನಲ್ಲಿ ಸ್ಥಾಪಿಸಲು ಆಯ್ಕೆ ಮಾಡಲಾಗಿತ್ತು. ವಿಜ್ಞಾನ ಕೇಂದ್ರಕ್ಕೆ ಅಗತ್ಯವಿರುವ ಮೂಲಸೌಕರ್ಯಗಳ ಕುರಿತು ನಕ್ಷೆ ತಯಾರಿಸಿ, ಅಗತ್ಯತೆಗಳ ಬಗ್ಗೆ ಚರ್ಚಿಸಿ, ಅನುಮೋದನೆ ಪಡೆದುಕೊಂಡ ಬಳಿಕ ಕಾಮಗಾರಿ ಆರಂಭಿಸಲಾಗಿತ್ತು. ಸುಮಾರು ರೂ. 50ರಿಂದ ರೂ. 60 ಕೋಟಿ ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ನಿರ್ಮಿಸಲಾಗಿದೆ ಎಂದರು.

ಕಾರಣಾಂತರಗಳಿಂದ ರೂಸಾ ಕಾರ್ಯಕ್ರಮ ಸ್ಥಗಿತಗೊಂಡಿದ್ದು, ಮಂಗಳೂರು ವಿಶ್ವವಿದ್ಯಾನಿಲಯದಿಂದಲೂ ಅನುದಾನ ದೊರೆಯದ ಹಿನ್ನೆಲೆಯಲ್ಲಿ ವಿಜ್ಞಾನ ಕೇಂದ್ರದ ಕಾಮಗಾರಿ ಅರ್ಧಕ್ಕೆ ನಿಂತಿದೆ. ಇದೀಗ ವಿಜ್ಞಾನ ಕೇಂದ್ರಕ್ಕೆ ಚಾಲನೆ ನೀಡುವ ಕುರಿತು ಪ್ರಸ್ತಾಪ ಮಾಡಲಾಗಿದ್ದು, ಈ ವಿಚಾರ ಉನ್ನತ ಶಿಕ್ಷಣ ಸಚಿವರ ಗಮನಕ್ಕೂ ಬಂದಿದೆ ಎಂದು ತಿಳಿಸಿದರು.

ತಾವು ಇಲ್ಲಿ ಭೇಟಿ ನೀಡಿರುವ ಉದ್ದೇಶಗಳ ಕುರಿತು ಮಾತನಾಡಿದ ಡಿಸಿಎಂ, ರಾಜ್ಯದಲ್ಲಿ ಸ್ಪೋರ್ಟ್ಸ್ ಯುನಿವರ್ಸಿಟಿ ಮಾಡಬೇಕು ಎಂಬ ಚಿಂತನೆ ಇದೆ. ಅದು ಇಲ್ಲಿ ಸಾಧ್ಯವಾಗಬಹುದೇ ಎಂಬುದನ್ನು ಪರಿಶೀಲಿಸಲು ಬಂದಿದ್ದೇನೆ. ಉಡುಪಿ ಜಿಲ್ಲೆಗೆ ಮೆಡಿಕಲ್ ಕಾಲೇಜು ಇಲ್ಲ. ಅದಕ್ಕೂ ಸಾಧ್ಯತೆ ಇರಬಹುದೇ ಎಂಬುದನ್ನು ಪರಿಶೀಲಿಸಲು ಬಂದಿದ್ದೇನೆ ಎಂದು ಹೇಳಿದರು.

ಈ ಎಲ್ಲಾ ವಿಚಾರಗಳ ಕುರಿತು ಮಾಹಿತಿ ಪಡೆದು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಒಟ್ಟಾರೆ, ಇಲ್ಲಿ ನಿರ್ಮಿಸಿರುವ ಕಟ್ಟಡಗಳು ಹಾಗೂ ಅಭಿವೃದ್ಧಿಪಡಿಸಿರುವ ಕ್ಯಾಂಪಸ್ ಅನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಸರ್ಕಾರದ ಹಂತದಲ್ಲಿ ಅಗತ್ಯ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಕರಾವಳಿ ಭಾಗದ ಅಭಿವೃದ್ಧಿ ಹಾಗೂ ಪ್ರವಾಸೋದ್ಯಮಕ್ಕೆ ಆದ್ಯತೆ
ಕರಾವಳಿಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯ ಕುರಿತು ಮಾತನಾಡಿದ ಉಪ ಮುಖ್ಯಮಂತ್ರಿಗಳು, ಈ ಭಾಗದಲ್ಲಿ ಹಲವು ಜ್ವಲಂತ ಸಮಸ್ಯೆಗಳಿದ್ದು, ಅವುಗಳಿಗೆ ಪರಿಹಾರ ಕಂಡುಕೊಳ್ಳುವುದು ಸಭೆಯ ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ. ಈಗಾಗಲೇ ಸರ್ಕಾರದ ಗಮನಕ್ಕೆ ಬಂದಿರುವ ಕೆಲವು ಸಮಸ್ಯೆಗಳಿಗೆ ತೀರ್ಮಾನ ಕೈಗೊಳ್ಳಲಾಗಿದೆ. ಆದರೆ ಇನ್ನೂ ಹಲವು ಸಣ್ಣಪುಟ್ಟ ಸಮಸ್ಯೆಗಳು ಹಾಗೂ ವಿವಿಧ ವಿಚಾರಗಳು ಸರ್ಕಾರದ ಗಮನಕ್ಕೆ ಬಂದಿಲ್ಲ. ಈ ಬಗ್ಗೆ ಚರ್ಚಿಸಿ ಅಗತ್ಯ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

ಕರಾವಳಿ ಭಾಗವನ್ನು ಕೇರಳ ಹಾಗೂ ಗೋವಾ ರಾಜ್ಯಗಳು ಪರಿಣಾಮಕಾರಿಯಾಗಿ ಬಳಸಿಕೊಂಡಿವೆ. ಕರ್ನಾಟಕದ ಕರಾವಳಿ ಭಾಗವನ್ನೂ ಇನ್ನಷ್ಟು ಪರಿಣಾಮಕಾರಿಯಾಗಿ ಅಭಿವೃದ್ಧಿಪಡಿಸುವ ಉದ್ದೇಶ ಸರ್ಕಾರಕ್ಕಿದೆ. ಉಡುಪಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸರ್ಫಿಂಗ್ ನಡೆಯುತ್ತಿದೆ. ಇಂತಹ ಕಾರ್ಯಕ್ರಮಗಳನ್ನು ಪ್ರೋತ್ಸಾಹಿಸುವ ಮೂಲಕ ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮವನ್ನು ಇನ್ನಷ್ಟು ಬೆಳೆಸಿದರೆ ಉದ್ಯೋಗ ಸೃಷ್ಟಿಯಾಗುವುದರ ಜೊತೆಗೆ ಆರ್ಥಿಕ ಚಟುವಟಿಕೆಗಳೂ ಹೆಚ್ಚಾಗಲಿವೆ. ಈ ಹಿನ್ನೆಲೆಯಲ್ಲಿ ಟೂರಿಸಂ ಪಾಲಿಸಿಯ ಬಗ್ಗೆಯೂ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು.

ದೊಡ್ಡ ದೊಡ್ಡ ಕೈಗಾರಿಕೆಗಳನ್ನು ಈ ಭಾಗಕ್ಕೆ ತರುವುದು ಕಷ್ಟವಾಗಬಹುದು. ಆದರೆ ಸಾಫ್ಟ್ ಇಂಡಸ್ಟ್ರಿಗಳನ್ನು ಕರಾವಳಿ ಭಾಗಕ್ಕೆ ತರಲು ಪ್ರಯತ್ನಿಸಲಾಗುವುದು ಎಂದರು.

ಕ್ರೀಡಾಂಗಣಗಳ ಅಭಿವೃದ್ಧಿಗೆ ತೀರ್ಮಾನ : ಕರಾವಳಿ ಭಾಗದಲ್ಲಿ ಉತ್ತಮ ಕ್ರೀಡಾಂಗಣ ವ್ಯವಸ್ಥೆ ಕಲ್ಪಿಸುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು. ಉಡುಪಿ ಸ್ಟೇಡಿಯಂ, ಮಂಗಳೂರಿನ ಮಂಗಳ ಸ್ಟೇಡಿಯಂ ಸೇರಿದಂತೆ ಕ್ರೀಡಾಂಗಣಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಗತ್ಯ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಡಿಸಿಎಂ ತಿಳಿಸಿದರು.

ಸಚಿವ ಸಂಪುಟದಲ್ಲಿ ತೆಗೆದುಕೊಳ್ಳುವ ತೀರ್ಮಾನಗಳು ಅನುಷ್ಠಾನಕ್ಕೆ ಬರುತ್ತವೆ. ಸಚಿವ ಸಂಪುಟದ ತೀರ್ಮಾನವೆಂದರೆ ಅದು ಇಡೀ ಸರ್ಕಾರದ ತೀರ್ಮಾನವಾಗಿದೆ. ಸರ್ಕಾರ ಕೈಗೊಳ್ಳುವ ನಿರ್ಣಯಗಳನ್ನು ಅನುಷ್ಠಾನಗೊಳಿಸಲಾಗುವುದು. ಇಲ್ಲವಾದರೆ ಸಚಿವ ಸಂಪುಟಕ್ಕೆ ಯಾವುದೇ ವಿಚಾರಗಳನ್ನು ತರುವ ಅವಶ್ಯಕತೆಯೇ ಇರುವುದಿಲ್ಲ. ಟೀಕೆ ಮಾಡುವವರು ಇದ್ದೇ ಇರುತ್ತಾರೆ. ಅದನ್ನೆಲ್ಲ ನಾವು ಸಕಾರಾತ್ಮಕವಾಗಿ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

 

About the Author

Praja Vahini

Editor

View All Posts

Spread the love

Post navigation

Previous: ರೈತರ ಸಮಸ್ಯೆ ಅರ್ಥಮಾಡಿಕೊಳ್ಳಲು ಕಾಂಗ್ರೆಸ್ ಸರ್ಕಾರಕ್ಕೆ ವ್ಯವಧಾನವೇ ಇಲ್ಲ: ಬಿವೈವಿ
Next: ಮಂಗಳೂರಿನಲ್ಲಿ ಮೊದಲ ಬಾರಿಗೆ ಸಚಿವ ಸಂಪುಟ ಸಭೆ: 32,611 ಕೋಟಿ ರೂ. ಯೋಜನೆಗಳಿಗೆ ಅನುಮೋದನೆ: ಸಿಎಂ ಡಿಕೆಶಿ

Views:

32

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.