ಶಹಾಪುರ; ಕಲಬುರಗಿ ನಗರದ ಹೈಕೋರ್ಟ್ ಕ್ರಾಸ್ ಬಳಿ ಸ್ಥಾಪಿಸಲಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ ತಾಲೂಕ ಕುರುಬ ಸಂಘ ಹಾಗೂ ಸಂಗೂಳ್ಳಿ ರಾಯಣ್ಣ ಯುವಕರ ಸಂಘದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಲು ಕುರುಬ ಸಮಾಜದ ಮುಖಂಡರಿAದ ಪಿಐ ಎಸ್.ಎಂ ಪಾಟೀಲ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ನಗರದ ಸಿ.ಬಿ ಕಮಾನ್ನಿಂದ ಚರಬಸವೇಶ್ವರ ವೃತ್ತದ ವರೆಗೆ ನಾಳೆ (ಮಂಗಳವಾರ ) ಬೆಳÀಗ್ಗೆ ೧೦ ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಇತ್ತೀಚೆಗೆ ಕಲಬುರಗಿ ನಗರದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಹಿನ್ನಲೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ೯ ಅಡಿ ಎತ್ತರದ ಪ್ರತಿಮೆಯನ್ನು ಪ್ರತಿಷ್ಠಾಪನೆ ಮಾಡಲಾಗಿತ್ತು. ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರಿಗಳು ಕೂಡಲೇ ತೆರವುಗೊಳಿಸಿದ್ದು ಇದು ಖಂಡನೀಯ. ಕೂಡಲೇ ತೆರವುಗೊಳಿಸಿದ ಸ್ಥಳದಲ್ಲೇ ಪ್ರತಿಮೆ ಮರು ನಿರ್ಮಿಸಲು ಆಗ್ರಹಿಸಿ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಯಲಿದ್ದು ಕುರುಬ ಸಮಾಜದ ಮುಖಂಡರು, ಅಹಿಂದ ವರ್ಗಗಳ ಸಂಘಟನೆ ಮುಖಂಡರು, ಯುವಕರು, ಸಿದ್ದರಾಮಯ್ಯ ಅವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕುರುಬ ಸಮಾಜದ ಮುಖಂಡರು ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಕುರುಬ ಸಮಾಜದ ತಾಲೂಕ ಅಧ್ಯಕ್ಷ ಯಲ್ಲಪ್ಪ ನರಿ, ಪ್ರಚಾರ ಸಮಿತಿ ಸದಸ್ಯ ಮಲ್ಲಣಗೌಡ ತಿಪ್ಪನಹಳ್ಳಿ, ರಾಯಪ್ಪ ಚಲುವಾದಿ, ರವಿ ರಾಜಾಪುರ, ಬಲಭೀಮ ಮಡ್ನಾಳ ಸೇರಿದಂತೆ ಇತರರು ಇದ್ದರು.
