ಪೊಲೀಸರ ಬಂಧನಕ್ಕೆ ಸಂಕೀನ್ ಆಗ್ರಹ
ಶಹಪುರ್/ ಯಾದಗಿರಿ: ದೆಹಲಿಯಲ್ಲಿ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಪೊಲೀಸರನ್ನು ಕೂಡಲೇ ಬಂಧಿಸುವ ಜೊತೆಗೆ ಅವರನ್ನು ಹುದ್ದೆಯಿಂದ ತಕ್ಷಣವೇ ವಜಾಗೊಳಿಸಬೇಕು ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ಅವರು ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ದೆಹಲಿಯ ಜಂತರ್ ಮಂತರ್ನಲ್ಲಿ ಮುಖ್ಯ ಚುನಾವಣಾಧಿಕಾರಿ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ವರದಿಗೆ ತೆರಳಿದ್ದ ಮೂವರು ಪತ್ರಕರ್ತೆಯರಿಗೆ ಪೊಲೀಸರು ಲೈಂಗಿಕ ಕಿರುಕುಳ ನೀಡಿರುವುದು ಆಘಾತಕಾರಿ ಸಂಗತಿಯಾಗಿದೆ ಎಂದರು.
ಮಹಿಳಾ ಪತ್ರಕರ್ತೆಯರನ್ನು ಎಳೆದಾಡಿ, ಅವರೊಂದಿಗೆ ಅನುಚಿತವಾಗಿ ವರ್ತನೆ ಮಾಡಿ ಲೈಂಗಿಕ ಕಿರುಕುಳ ನೀಡಿರುವುದು ಅಕ್ಷಮ್ಯ ಅಪರಾಧವಾಗಿದೆ. ಪೊಲೀಸರ ಮೇಲೆ ದೂರು ದಾಖಲಿಸಲು ಹೋದ ಪತ್ರಕರ್ತೆಯರನ್ನು ಗಂಟೆಗಟ್ಟಲೇ ಠಾಣೆಯಲ್ಲಿ ಕಾಯಿಸಲಾಗಿದೆ ಎಂದು ಹೇಳಿದರು.
ಪತ್ರಿಕಾ ರಂಗದ ಮೇಲೆ ನಿರಂತರವಾಗಿ ದಬ್ಬಾಳಿಕೆ ನಡೆಯುತ್ತಿದೆ. ಪತ್ರಿಕಾ ಸ್ವಾತಂತ್ರ್ಯಕ್ಕೆ ಧಕೆಯಾಗುತ್ತಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾರಕವಾದ ಬೆಳವಣಿಗೆಯಾಗಿದೆ. ಮುಕ್ತವಾಗಿ ಕೆಲಸ ಮಾಡಲು ಆಗದಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿದರು.
ಲೈಂಗಿಕ ಕಿರುಕುಳ ನೀಡಿದ ಪೊಲೀಸರನ್ನು ಕೂಡಲೇ ಬಂಧನ ಮಾಡಬೇಕು. ಯಾವುದೇ ಕಾರಣಕ್ಕೂ ದೆಹಲಿ ಸರಕಾರ ನಿರ್ಲಕ್ಷ್ಯತನ ತೋರಿಸಬಾರದು. ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿರುವುದು ಇಡೀ ಸಮಾಜವೇ ತಲೆ ತಗ್ಗಿಸುವಂತಹ ವಿಚಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಭದ್ರತೆಯನ್ನು ನೀಡಬೇಕಾದ ಪೊಲೀಸರಿಂದಲೇ ಇಂತಹ ನೀಚ ಕೃತ್ಯ ನಡೆದಿರುವುದು ನಿಜಕ್ಕೂ ಸಹ ಇದು ಬೆದರಿಸುವಂತಹ ತಂತ್ರವಾಗಿದೆ. ಪೊಲೀಸರ ಮೇಲೆ ಕಠಿಣವಾದ ಕ್ರಮಕೈಗೊಳ್ಳುವುದು ತುಂಬ ಅಗತ್ಯವಿದೆ ಎಂದು ಹೇಳಿದರು.
ದೆಹಲಿ ಸರಕಾರ ಈ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ಮೂಲಕ ತನಿಖೆ ದೆಹಲಿಯಲ್ಲಿ ಪೊಲೀಸರಿಂದಲೇ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ, ಇದೊಂದು ಆಘಾತಕಾರಿ ಸಂಗತಿಯಾಗಿದೆ.
