Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಲಿಬರ್ಟಿ, ಬಾಟಾ ಕಂಪನಿಗಳ ಸಾಲಿನಲ್ಲಿ ಲಿಡ್ಕರ್ ಹೆಸರು ಪ್ರಸಿದ್ಧಿಯಾಗಬೇಕು: ಸಚಿವ ಕೆ.ಎಚ್. ಮುನಿಯಪ್ಪ
  • Bangalore
  • Front news
  • Politics
  • State

ಲಿಬರ್ಟಿ, ಬಾಟಾ ಕಂಪನಿಗಳ ಸಾಲಿನಲ್ಲಿ ಲಿಡ್ಕರ್ ಹೆಸರು ಪ್ರಸಿದ್ಧಿಯಾಗಬೇಕು: ಸಚಿವ ಕೆ.ಎಚ್. ಮುನಿಯಪ್ಪ

Praja Vahini October 28, 2026
6334b162-1ccd-4c0c-9335-5fe79c03f5a1
Spread the love

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್) 50 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ವಸಂತನಗರದ ಲಿಡ್ಕರ್ ಭವನದಲ್ಲಿ ಆಯೋಜಿಸಿದ್ದ ಸಾಂಕೇತಿಕ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಉದ್ಘಾಟಿಸಿದರು.

ನಂತರ ಮಾತನಾಡಿದ ಸಚಿವರು, 1976ರಲ್ಲಿ ಅಂದಿನ ಮುಖ್ಯಮಂತ್ರಿ ದೇವರಾಜ ಅರಸು ಅವರ ಆಡಳಿತಾವಧಿಯಲ್ಲಿ ಸ್ಥಾಪನೆಯಾದ ಈ ನಿಗಮವು ಐದು ದಶಕಗಳ ಸೇವೆಯನ್ನು ಪೂರ್ಣಗೊಳಿಸಿರುವುದು ಹೆಮ್ಮೆಯ ಸಂಗತಿ ಎಂದರು. ನಿಗಮದ ಮೊದಲ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಕಾರ್ಯನಿರ್ವಹಿಸಿದ್ದು, ಇಂದು ಅವರು ರಾಷ್ಟ್ರೀಯ ಮಟ್ಟದಲ್ಲಿ ಪ್ರಮುಖ ನಾಯಕನಾಗಿ ಗುರುತಿಸಿಕೊಂಡಿದ್ದಾರೆ. ಈ ನಿಗಮದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಹಲವರು ಸಚಿವರು ಹಾಗೂ ಸಂಸದರಾಗಿಯೂ ಸೇವೆ ಸಲ್ಲಿಸಿರುವುದು ಸಂಸ್ಥೆಯ ಮಹತ್ವವನ್ನು ತೋರಿಸುತ್ತದೆ ಎಂದು ಹೇಳಿದರು.

ಪರಿಶಿಷ್ಟ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ನಿಗಮವು ವಿವಿಧ ಯೋಜನೆಗಳ ಮೂಲಕ ಕಾರ್ಯನಿರ್ವಹಿಸುತ್ತಿದೆ. ಪರಿಶಿಷ್ಟ ಜಾತಿಯ 101 ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸುವ ಮಹತ್ವದ ನಿರ್ಧಾರವನ್ನು ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜಾರಿಗೊಳಿಸಲಾಗಿದೆ. ಮೀಸಲಾತಿ ಪ್ರಮಾಣ ಶೇ. 50ರ ಮಿತಿಯನ್ನು ಮೀರಬಾರದು ಎಂಬ ನ್ಯಾಯಾಲಯದ ತೀರ್ಪಿನ ಹಿನ್ನೆಲೆಯಲ್ಲಿ, ಪ್ರಸ್ತುತ ಶೇ. 15ರಷ್ಟು ಮೀಸಲಾತಿಯನ್ನು ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರಗಳಲ್ಲಿ ಅನುಷ್ಠಾನಗೊಳಿಸಲಾಗಿದೆ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣ ಹೆಚ್ಚಿಸುವ ಕುರಿತು ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದ್ದು, ಈ ಸಂಬಂಧ ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಲಿಡ್ಕರ್ ಉತ್ಪನ್ನಗಳಿಗೆ ಮಾರುಕಟ್ಟೆ ವಿಸ್ತರಣೆ

ಲಿಡ್ಕರ್ ಸಂಸ್ಥೆಯು ಲಿಬರ್ಟಿ ಮತ್ತು ಬಾಟಾ ಕಂಪನಿಗಳ ಸಾಲಿನಲ್ಲಿ ಮಾರುಕಟ್ಟೆಯಲ್ಲಿ ಹೆಚ್ಚಿನ ಪ್ರಸಿದ್ಧಿ ಪಡೆಯಬೇಕು. ಚರ್ಮಕುಶಲಕರ್ಮಿಗಳು ತಯಾರಿಸುವ ಚರ್ಮದ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸಲು ಆಯಾ ಜಿಲ್ಲೆಗಳಲ್ಲಿ ಶೋರೂಂಗಳನ್ನು ತೆರೆಯುವ ಮೂಲಕ ಮಾರಾಟಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಸೂಚಿಸಿದರು.

ಖಾಸಗಿ ಕಂಪನಿಗಳೊಂದಿಗೆ ಸ್ಪರ್ಧಿಸುವ ಮಟ್ಟಕ್ಕೆ ಲಿಡ್ಕರ್ ಬೆಳೆದರೆ, ಸಂಸ್ಥೆಯ ಚರ್ಮೋತ್ಪನ್ನಗಳಿಗೆ ಬೇಡಿಕೆ ಹೆಚ್ಚುವುದರ ಜೊತೆಗೆ ಉತ್ಪಾದನೆಯೂ ವಿಸ್ತರಣೆಯಾಗಲಿದೆ. ಇದರಿಂದ ಚರ್ಮಕುಶಲಕರ್ಮಿಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಲಿದೆ ಎಂದು ಹೇಳಿದರು.

ಡಿಸೆಂಬರ್‌ನಲ್ಲಿ ಚರ್ಮಕುಶಲಕರ್ಮಿಗಳ ವಸ್ತುಪ್ರದರ್ಶನ

ಲಿಡ್ಕರ್ ನಿಗಮದ ವತಿಯಿಂದ ಚರ್ಮಕುಶಲಕರ್ಮಿಗಳು ತಯಾರಿಸಿದ ಉತ್ಪನ್ನಗಳ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳವನ್ನು ಮುಂದಿನ ಡಿಸೆಂಬರ್‌ನಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ. ಕಾರ್ಯಕ್ರಮವನ್ನು ಉತ್ತಮ ಮಟ್ಟದಲ್ಲಿ ಆಯೋಜಿಸುವ ಕುರಿತು ಯೋಜನೆ ರೂಪಿಸಲಾಗುವುದು. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಭಾಗವಹಿಸುವ ಹಿನ್ನೆಲೆಯಲ್ಲಿ ಅವರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಚ್. ಆಂಜನೇಯ, ಮಾಜಿ ಸಂಸದ ಬಿ.ಎನ್. ಚಂದ್ರಪ್ಪ, ಸರ್ಕಾರದ ಕಾರ್ಯದರ್ಶಿ ಕೆ.ಪಿ. ಮೋಹನ್‌ರಾಜ್, ಸರ್ಕಾರದ ಆಯುಕ್ತ ಎನ್.ಎಂ. ನಾಗರಾಜ್, ಲಿಡ್ಕರ್ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ್, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ನರೇಂದ್ರ, ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ, ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಅಶೋಕ್ ಸಾಲಪ್ಪ, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ್, ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ರಸಾದ್, ಲಿಡ್ಕರ್ ವ್ಯವಸ್ಥಾಪಕ ನಿರ್ದೇಶಕ ಡಾ. ಎಚ್. ನಟರಾಜ್ ಸೇರಿದಂತೆ ನಿಗಮದ ಮಾಜಿ ಅಧ್ಯಕ್ಷರು, ಮಾಜಿ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು

About the Author

Praja Vahini

Editor

View All Posts

Spread the love

Post navigation

Previous: ಮಂಡ್ಯ ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ಸಿಎಂಗೆ ಆಹ್ವಾನ
Next: ಮೂರು ಬಾರಿ ಪ್ಯಾರಾ ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ನೀರಜ್ ಯಾದವ್ ಆತ್ಮಹತ್ಯೆ

Views:

11

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.