Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅಧಿಕಾರಕ್ಕೆ ಬಂದ ಮೇಲೆ ಕಿರುಕುಳ ನೀಡಿದ ಅಧಿಕಾರಿಗಳ ಲೆಕ್ಕ ಚುಕ್ತಾ: ಹೆಚ್.ಡಿ. ಕೆ
  • Bangalore
  • Front news
  • Politics
  • State

ಅಧಿಕಾರಕ್ಕೆ ಬಂದ ಮೇಲೆ ಕಿರುಕುಳ ನೀಡಿದ ಅಧಿಕಾರಿಗಳ ಲೆಕ್ಕ ಚುಕ್ತಾ: ಹೆಚ್.ಡಿ. ಕೆ

Praja Vahini October 28, 2026 1 minute read
WhatsApp Image 2026-06-17 at 11.32.10
Spread the love

ನವದೆಹಲಿ: ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆಯ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೆಡಿಎಸ್ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿರುವ ಅಧಿಕಾರಿಗಳಿಗೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಲಾಗುವುದು ಎಂದು ಎಚ್ಚರಿಸಿದ್ದಾರೆ.

ರಾಜಕೀಯ ಒತ್ತಡಕ್ಕೆ ಮಣಿದು ಕಾನೂನುಬಾಹಿರವಾಗಿ ನಡೆದುಕೊಳ್ಳುವ ಅಧಿಕಾರಿಗಳ ಹೆಸರುಗಳನ್ನು ಕಾರ್ಯಕರ್ತರು ನೆನಪಿಟ್ಟುಕೊಳ್ಳಬೇಕು ಎಂದು ಕರೆ ನೀಡಿರುವ ಕುಮಾರಸ್ವಾಮಿ, ಜೆಡಿಎಸ್‌ಗೂ ಒಳ್ಳೆಯ ಕಾಲ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಗರಿಷ್ಠ ಒಂದು ವರ್ಷದೊಳಗೆ ತಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಹೇಳಿರುವ ಅವರು, ಆಗ ಅನ್ಯಾಯ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಪ್ರಸ್ತುತ ನಡೆಯುತ್ತಿರುವ ತನಿಖೆಗಳು ಪೂರ್ವನಿಯೋಜಿತವಾಗಿವೆ ಎಂದು ಆರೋಪಿಸಿರುವ ಅವರು, ತನಿಖಾ ತಂಡದಲ್ಲಿದ್ದ ಇಬ್ಬರು-ಮೂವರು ಪ್ರಾಮಾಣಿಕ ಅಧಿಕಾರಿಗಳು ಈಗಾಗಲೇ ಹೊರಬಂದಿದ್ದಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸೋಲಿಗೆ ಗೃಹ ಸಚಿವರ ವೈಫಲ್ಯ ಕಾರಣವೆಂದು ಆರೋಪ

ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅನುಭವಿಸಿದ ಸೋಲಿಗೆ ಗೃಹ ಸಚಿವರ ಆಡಳಿತ ವೈಫಲ್ಯವೇ ಕಾರಣ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಅವರ ಉದ್ದೇಶ ತಮ್ಮನ್ನು ರಾಜಕೀಯವಾಗಿ ಮುಗಿಸುವುದಲ್ಲ, ಬದಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಮಸಿ ಬಳಿಯುವುದಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ತಮ್ಮ ತಂದೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮುಖ್ಯಮಂತ್ರಿ ಹುದ್ದೆ ಸಿಗದಂತೆ ಹಿಂದೆ ಸಿದ್ದರಾಮಯ್ಯ ಅಡ್ಡಿಯಾಗಿದ್ದರು ಎಂಬ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಖರ್ಗೆ ಕುಟುಂಬ ಈ ಬೆಳವಣಿಗೆಗಳಿಗೆ ಕಾರಣವಾಗಿದೆ ಎಂದು ಅವರು ದೂರಿದ್ದಾರೆ. 2015ರಲ್ಲಿ ಕಾಂಗ್ರೆಸ್‌ನಿಂದ ಮಹಿಳಾ ಮತ್ತು ಮಕ್ಕಳ ಹಕ್ಕುಗಳ ರಕ್ಷಣಾ ಸಮಿತಿಯ ಅಧ್ಯಕ್ಷೆಯಾಗಿದ್ದ ಮಹಿಳಾ ನಾಯಕಿಯೊಬ್ಬರು ಈ ಬೆಳವಣಿಗೆಗಳ ಹಿಂದೆ ಇದ್ದಾರೆ ಎಂದೂ ಆರೋಪಿಸಿದ್ದಾರೆ.

ಜೆಡಿಎಸ್ ಕಾರ್ಯಕರ್ತನ ಮನೆಗೆ ಪೊಲೀಸರ ಅಕ್ರಮ ಪ್ರವೇಶ ಆರೋಪ

ಜೆಡಿಎಸ್ ವಾರ್ ರೂಂ ಸದಸ್ಯ ಮೋಹನ್ ಗೌಡ ಅವರ ಮನೆಗೆ ಪೊಲೀಸರು ಅಕ್ರಮವಾಗಿ ಪ್ರವೇಶಿಸಿ, ಅವರ ಪತ್ನಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

ಘಟನೆಯ ವೇಳೆ ಬಿದ್ದಿದ್ದ ಚಿನ್ನದ ಸರವನ್ನು ಜೆಡಿಎಸ್ ಕಾರ್ಯಕರ್ತರೇ ಪೊಲೀಸ್ ಠಾಣೆಗೆ ಹಿಂದಿರುಗಿಸಿದ್ದರೂ, ಪೊಲೀಸರು ಬ್ರಾಸ್ ಲೈಟ್ ಕಳವು ಮತ್ತು ಸರ ಕಳ್ಳತನಕ್ಕೆ ಸಂಬಂಧಿಸಿದಂತೆ ಸುಳ್ಳು ಪ್ರಕರಣ ದಾಖಲಿಸಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಸ್ವಪಕ್ಷದವರ ವಿರುದ್ಧ ಕೆಎನ್ ರಾಜಣ್ಣ ಅಸಮಾಧಾನ
Next: ಪರಿಷತ್ ಚುನಾವಣೆಯಲ್ಲಿ ಸೋಲು: ಜನರ ಸಂದೇಶವನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಡಿಕೆಶಿ

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.