Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕಾಂಗ್ರೆಸ್ ಸರ್ಕಾರದ ಪತನದ ಆರಂಭವಾಗಿದೆ; ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ: ಟಿ.ಎ. ಶರವಣ
  • Bangalore
  • Front news
  • Politics
  • State

ಕಾಂಗ್ರೆಸ್ ಸರ್ಕಾರದ ಪತನದ ಆರಂಭವಾಗಿದೆ; ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ: ಟಿ.ಎ. ಶರವಣ

Praja Vahini October 29, 2026 1 minute read
c036084c-7a0d-414d-96f1-88231695a069
Spread the love

ಬೆಂಗಳೂರು: ವಿಧಾನಪರಿಷತ್‌ನ ಶಿಕ್ಷಕರ ಕ್ಷೇತ್ರದಿಂದ ನಡೆದ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಎ.ಪಿ. ರಂಗನಾಥ್ ಅವರು ಪ್ರಬಲ ಅಭ್ಯರ್ಥಿ ಎಂದು ಬಿಂಬಿಸಲ್ಪಟ್ಟ ಪುಟ್ಟಣ್ಣ ಅವರನ್ನು ಸೋಲಿಸಿ ಭರ್ಜರಿ ಗೆಲುವು ಸಾಧಿಸಿರುವುದು ಜೆಡಿಎಸ್ ಪಾಳಯದಲ್ಲಿ ಸಂಭ್ರಮದ ವಾತಾವರಣ ನಿರ್ಮಿಸಿದೆ. ವಿಧಾನಪರಿಷತ್‌ನ ನಾಲ್ಕೂ ಸ್ಥಾನಗಳನ್ನು ಎನ್‌ಡಿಎ ಮೈತ್ರಿಕೂಟ ಗೆದ್ದುಕೊಂಡಿರುವುದು ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದೆ.

ಈ ಹಿನ್ನೆಲೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ವತಿಯಿಂದ ಇಂದು ವಿಧಾನಸೌಧದಲ್ಲಿ ಅಭಿನಂದನಾ ಸಭೆ ಆಯೋಜಿಸಲಾಗಿತ್ತು. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಶಾಸಕ ಸುರೇಶ್ ಬಾಬು ಮತ್ತು ವಿಧಾನಪರಿಷತ್‌ನ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ ಟಿ.ಎ. ಶರವಣ ಅವರು, ಚುನಾವಣೆಯಲ್ಲಿ ದಿಗ್ವಿಜಯ ಸಾಧಿಸಿದ ಎ.ಪಿ. ರಂಗನಾಥ್ ಅವರನ್ನು ಹೃತ್ಪೂರ್ವಕವಾಗಿ ಸನ್ಮಾನಿಸಿ ಅಭಿನಂದಿಸಿದರು. ಈ ಕಾರ್ಯಕ್ರಮವು ವಿಜಯೋತ್ಸವದ ಸಂಭ್ರಮಕ್ಕೆ ಸಾಕ್ಷಿಯಾಯಿತು. ಪಕ್ಷದ ಶಾಸಕರು ಹಾಗೂ ಮುಖಂಡರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ ಟಿ.ಎ. ಶರವಣ ಅವರು, “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಪತನದ ಆರಂಭವಾಗಿದೆ. ಬಿಜೆಪಿ–ಜೆಡಿಎಸ್ ಮೈತ್ರಿಕೂಟವು ಎನ್‌ಡಿಎ ಹೆಸರಿನಲ್ಲಿ ರಾಜ್ಯದಲ್ಲಿ ಹೊಸ ರಾಜಕೀಯ ಶಕ್ತಿಯಾಗಿ ಹೊರಹೊಮ್ಮಿದೆ” ಎಂದು ಹೇಳಿದರು.

ರಾಜ್ಯ ರಾಜಕೀಯದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯ ಸೋಲು ಅನುಭವಿಸಲಿದೆ ಎಂಬುದಕ್ಕೆ ವಿಧಾನಪರಿಷತ್ ಚುನಾವಣೆಯಲ್ಲಿ ಮೈತ್ರಿಕೂಟ ಸಾಧಿಸಿರುವ ಪ್ರಚಂಡ ಗೆಲುವೇ ಸಾಕ್ಷಿಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ವಿಧಾನಪರಿಷತ್ ಚುನಾವಣೆಯ ಫಲಿತಾಂಶ ಕೇವಲ ಗೆಲುವು–ಸೋಲಿನ ಲೆಕ್ಕಾಚಾರವಲ್ಲ; ಅದು ರಾಜ್ಯದ ಜನರ ಜನಾದೇಶವಾಗಿದೆ. ಕಾಂಗ್ರೆಸ್ ಪಕ್ಷ ಮತ್ತು ಅದರ ಸರ್ಕಾರದ ಆಡಳಿತದಿಂದ ಜನರು ಭ್ರಮನಿರಸನಗೊಂಡಿದ್ದಾರೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷದ ವಿರುದ್ಧ ಜನರ ಅಸಮಾಧಾನ ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಜನರು ತಿರಸ್ಕರಿಸಲಿರುವುದು ನಿಶ್ಚಿತ ಎಂದು ಶರವಣ ಅವರು ವಾಗ್ದಾಳಿ ನಡೆಸಿದರು.

ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಒಗ್ಗಟ್ಟು, ಕಾರ್ಯಕರ್ತರ ಪರಿಶ್ರಮ ಮತ್ತು ಜನರ ಬೆಂಬಲದಿಂದ ಈ ಐತಿಹಾಸಿಕ ಗೆಲುವು ಸಾಧ್ಯವಾಗಿದೆ. ವಿಧಾನಪರಿಷತ್‌ನ ನಾಲ್ಕೂ ಸ್ಥಾನಗಳಲ್ಲಿ ಮೈತ್ರಿಕೂಟ ಜಯಗಳಿಸಿರುವುದು ರಾಜ್ಯದ ರಾಜಕೀಯ ಭವಿಷ್ಯದ ದಿಕ್ಕನ್ನು ಸೂಚಿಸುವ ಮಹತ್ವದ ಬೆಳವಣಿಗೆಯಾಗಿದೆ ಎಂದು ಅವರು ತಿಳಿಸಿದರು.

 

About the Author

Praja Vahini

Editor

View All Posts

Spread the love

Post navigation

Previous: ಜವಳಿ ಪಿಎಲ್‌ಐ ಯೋಜನೆ: ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಎರಡನೇ ಸ್ಥಾನ
Next: ಜಾಗತಿಕ ಟೆಲಿಕಾಂ ವಲಯದಲ್ಲಿ ಜಿಯೋ ಪ್ಲಾಟ್‌ಫಾರ್ಮ್ಸ್‌ಗೆ 6ನೇ ಸ್ಥಾನ

Views:

15

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.