ಬೆಂಗಳೂರು: ನಗರದ ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಹೋಟೆಲ್ವೊಂದರಲ್ಲಿ ಇಬ್ಬರು ವಿದೇಶಿ ಪ್ರಜೆಗಳು ಈಜುಕೊಳದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಓರಿಯಾಟ್ (45) ಹಾಗೂ ಅಲೆಕ್ಸಾಂಡರ್ ಮ್ಯಾಕ್ಸಿಲನ್ (59) ಎಂದು ಗುರುತಿಸಲಾಗಿದೆ.
ಈಜುಕೊಳದಲ್ಲಿ ಈಜುತ್ತಿದ್ದ ವೇಳೆ ವಿದ್ಯುತ್ ಆಘಾತ ತಗುಲಿ ಇಬ್ಬರೂ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಈ ಘಟನೆ ಹೋಟೆಲ್ ವಲಯದಲ್ಲಿ ಆತಂಕ ಮೂಡಿಸಿದೆ.
ಹೋಟೆಲ್ ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಮೃತ ಅಲೆಕ್ಸಾಂಡರ್ ಅವರ ಪತ್ನಿ ಹೋಟೆಲ್ ವಿರುದ್ಧ ಹಲಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೋಟೆಲ್ ಸಿಬ್ಬಂದಿ ಹಾಗೂ ಆಡಳಿತ ಮಂಡಳಿಯ ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ಪ್ರಯೋಗಾಲಯದ (FSL) ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಾವಿನ ನಿಖರ ಕಾರಣ ಪತ್ತೆಹಚ್ಚಲು ತನಿಖೆ ಮುಂದುವರಿದಿದೆ.
