Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮೇಕೆದಾಟು ಯೋಜನೆಗೆ ರಾಜ್ಯ ಸರ್ಕಾರದ ವೇಗ:
  • Bangalore
  • Front news
  • Politics
  • State

ಮೇಕೆದಾಟು ಯೋಜನೆಗೆ ರಾಜ್ಯ ಸರ್ಕಾರದ ವೇಗ:

Praja Vahini October 31, 2026
WhatsApp Image 2026-08-19 at 18.27.21
Spread the love

ಮಂಡ್ಯ: ಬಹುನಿರೀಕ್ಷಿತ ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಡಲು ಸಜ್ಜಾಗಿದೆ. ಮುಂದಿನ ರಾಜ್ಯ ಬಜೆಟ್‌ನಲ್ಲಿ ಯೋಜನೆಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡಲಾಗುವುದು. ಅಲ್ಲದೆ, ಯೋಜನೆಗೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯನ್ನೂ ಆರಂಭಿಸಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ಕೇವಲ ಒಂದು ನೀರಾವರಿ ಯೋಜನೆಯಲ್ಲ. ಇದು ಮಂಡ್ಯ ಸೇರಿದಂತೆ ಇಡೀ ರಾಜ್ಯದ ಜನರ ಜೀವನ ಮತ್ತು ರೈತರ ಹಿತಾಸಕ್ತಿಗೆ ಸಂಬಂಧಿಸಿದ ಮಹತ್ವದ ಯೋಜನೆಯಾಗಿದೆ ಎಂದು ಹೇಳಿದರು.

ಮಂಡ್ಯದ ರೈತರ ಕೃಷಿ ಚಟುವಟಿಕೆಗಳಿಗೆ ಹಾಗೂ ಜನರ ಅನ್ನದ ತಟ್ಟೆಗೆ ನೀರು ಒದಗಿಸುವ ಉದ್ದೇಶದಿಂದಲೇ ಮೇಕೆದಾಟು ಯೋಜನೆಗಾಗಿ ಹೋರಾಟ ನಡೆಸಿದ್ದೇನೆ. ಆ ಹೋರಾಟಕ್ಕೆ ಫಲ ಸಿಕ್ಕಿದ್ದು, ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ದೊರೆತಿದೆ ಎಂದು ತಿಳಿಸಿದರು.

ಈಗಾಗಲೇ ಅರಣ್ಯ ಇಲಾಖೆಗೆ ಪರ್ಯಾಯ ಭೂಮಿ ನೀಡುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಬರಗಾಲದ ಸಂದರ್ಭಗಳಲ್ಲಿ ತಮಿಳುನಾಡಿಗೆ ಅಗತ್ಯ ಪ್ರಮಾಣದ ನೀರು ಹರಿಸಲು ಕೂಡ ಈ ಯೋಜನೆ ಸಹಕಾರಿಯಾಗಲಿದೆ. ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದೊಂದಿಗೂ ಮಾತುಕತೆ ನಡೆಸಲಾಗುವುದು ಎಂದು ಹೇಳಿದರು.

ಮುಂದಿನ ಬಜೆಟ್‌ನಲ್ಲಿ ಯೋಜನೆಯ ಬಗ್ಗೆ ಸ್ಪಷ್ಟ ಘೋಷಣೆ ಮಾಡುವುದರ ಜೊತೆಗೆ, ಅಗತ್ಯ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಗೂ ಚಾಲನೆ ನೀಡಲಾಗುವುದು ಎಂದು ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.

About the Author

Praja Vahini

Editor

View All Posts

Spread the love

Post navigation

Previous: ಕೆಎಸ್‌ಆರ್‌ಟಿಸಿಯಿಂದ 2,600 ವಿಶೇಷ ಬಸ್‌ಗಳ ವ್ಯವಸ್ಥೆ: ಪ್ರಯಾಣಿಕರಿಗೆ ಶೇ.10ರವರೆಗೆ ರಿಯಾಯಿತಿ
Next: ARAI ಘಟಕಕ್ಕೆ ಭೂಮಿ ನೀಡುವ ವಿಚಾರ: ಎಚ್.ಡಿ.ಕೆ ಆರೋಪಕ್ಕೆ ಡಿಕೆಶಿ ತಿರುಗೇಟು

Views:

14

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.