Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಈ ನೆಲದಲ್ಲಿರುವವರು ಈ ಭೂಮಿಗೆ ಗೌರವ ನೀಡಬೇಕು: ಡಿಕೆಶಿ
  • Bangalore
  • Front news
  • Politics
  • State

ಈ ನೆಲದಲ್ಲಿರುವವರು ಈ ಭೂಮಿಗೆ ಗೌರವ ನೀಡಬೇಕು: ಡಿಕೆಶಿ

Praja Vahini November 1, 2026 1 minute read
689e82cd-01ea-4b8f-8245-11b3c61a7d5f
Spread the love

ಬೆಂಗಳೂರು: “ಈ ನೆಲದಲ್ಲಿ ವಾಸಿಸುವ ಪ್ರತಿಯೊಬ್ಬರೂ ಇಲ್ಲಿನ ಕಾನೂನು ಮತ್ತು ನೆಲದ ಗೌರವವನ್ನು ಕಾಪಾಡಬೇಕು. ನಮ್ಮ ಭೂಮಿಯಲ್ಲಿ ಇದ್ದ ಮೇಲೆ ನಮ್ಮ ಭೂಮಿಗೆ ಗೌರವ ಕೊಡಬೇಕು. ಕಾನೂನು ಎಲ್ಲರಿಗೂ ಒಂದೇ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ನಗರದ ವಿವಿಧ ಕಡೆ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು.

ಕನ್ನಡಿಗರು, ಮರಾಠಿಗರು ಕಾನೂನು ಕೈಗೆತ್ತಿಕೊಳ್ಳಬಾರದು

ಬೆಳಗಾವಿಯಲ್ಲಿ ಎಂಇಎಸ್ ಸಂಘಟನೆ ಕರಾಳ ದಿನಾಚರಣೆ ಆಚರಿಸಿರುವ ಕುರಿತು ಕೇಳಿದಾಗ, “ಕನ್ನಡಿಗರು ಹಾಗೂ ಮರಾಠಿಗರು ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಈ ನೆಲದಲ್ಲಿ ವಾಸಿಸುವ ಪ್ರತಿಯೊಬ್ಬರೂ ಇಲ್ಲಿನ ಗೌರವವನ್ನು ಕಾಪಾಡಬೇಕು” ಎಂದರು.

ನೈತಿಕ ಪೊಲೀಸ್ ಗಿರಿ ಮಾಡಬೇಡಿ

“ಯಾವುದೇ ಕನ್ನಡಪರ ಸಂಘಟನೆಗಳು, ಐಟಿ ಸಂಸ್ಥೆಗಳ ಮೇಲೆ ದಾಳಿ ಮಾಡಲು ಹೋಗಬಾರದು. ಕಾನೂನನ್ನು ಕೈಗೆತ್ತಿಕೊಳ್ಳುವುದು ಸರಿಯಲ್ಲ. ನೈತಿಕ ಪೊಲೀಸ್ ಗಿರಿ ನಡೆಸಲು ಅವಕಾಶವಿಲ್ಲ. ಸರ್ಕಾರ ಮತ್ತು ಪೊಲೀಸ್ ಇಲಾಖೆ ಇದೆ. ಯಾವುದೇ ದೂರು ಅಥವಾ ಸಮಸ್ಯೆಗಳಿದ್ದರೆ ಸರ್ಕಾರದ ಗಮನಕ್ಕೆ ತನ್ನಿ. ಪೊಲೀಸರು ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತಾರೆ” ಎಂದು ತಿಳಿಸಿದರು.

ಕನ್ನಡ ಹೋರಾಟಗಾರರ ಮೇಲಿನ ಪ್ರಕರಣ ವಾಪಸ್ ಪಡೆಯಲು ಸೂಚನೆ

ಕನ್ನಡ ಹೋರಾಟಗಾರರ ಮೇಲಿನ ಪ್ರಕರಣಗಳನ್ನು ಹಿಂಪಡೆಯುವ ಕುರಿತು ಈಗಾಗಲೇ ಸೂಚನೆ ನೀಡಲಾಗಿದೆ ಎಂದು ತಿಳಿಸಿದ ಅವರು, “ನಿಮ್ಮ ಮೇಲಿರುವ ಪ್ರಕರಣಗಳನ್ನೆಲ್ಲ ವಾಪಸ್ ಪಡೆಯಬೇಕು ಎಂದು ಈಗಾಗಲೇ ಸೂಚನೆ ನೀಡಿದ್ದೇನೆ. ಈ ಸಂಬಂಧ ಕಡತಗಳು ಸಿದ್ಧವಾಗುತ್ತಿವೆ. ಇಂತಹ ಪ್ರಕರಣಗಳಿಂದ ಹೋರಾಟಗಾರರಿಗೆ ಮುಕ್ತಿ ನೀಡಬೇಕು ಎಂಬ ತೀರ್ಮಾನಕ್ಕೆ ಸರ್ಕಾರ ಬಂದಿದೆ. ಇಂತಹ ಸಂದರ್ಭದಲ್ಲಿ ನೀವು ಮತ್ತೆ ಈ ರೀತಿ ಮಾಡಿದರೆ ಪೊಲೀಸರು ಪ್ರಕರಣ ವಾಪಸ್ ಪಡೆಯಲು ಆಕ್ಷೇಪ ವ್ಯಕ್ತಪಡಿಸುತ್ತಾರೆ. ಹೀಗಾಗಿ ದಯವಿಟ್ಟು ಕಾನೂನು ಕೈಗೆತ್ತಿಕೊಳ್ಳದೆ ಸರ್ಕಾರಕ್ಕೆ ಸಹಕಾರ ನೀಡಿ” ಎಂದು ಮನವಿ ಮಾಡಿದರು.

“ಕನ್ನಡ ಭಾಷೆ, ಕರ್ನಾಟಕದ ಜನರ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಈ ಜವಾಬ್ದಾರಿಯನ್ನು ಸರ್ಕಾರವೇ ನಿರ್ವಹಿಸಲಿದೆ. ಹೀಗಾಗಿ ಯಾರೂ ಕಾನೂನು ಉಲ್ಲಂಘಿಸುವ ಮೂಲಕ ಸಮಸ್ಯೆ ಸೃಷ್ಟಿಸಬಾರದು” ಎಂದು ಹೇಳಿದರು.

 

About the Author

Praja Vahini

Editor

View All Posts

Spread the love

Post navigation

Previous: ಕನ್ನಡ ಬಾವುಟಕ್ಕೆ ಅಧಿಕೃತ ನಾಡಧ್ವಜದ ಸ್ಥಾನಮಾನ ನೀಡಲು ಚಿಂತನೆ: ಸಿಎಂ ಡಿ ಕೆ ಶಿವಕುಮಾರ್
Next: ಕ್ರಾಂತಿ ಆಗುವ ಮೊದಲು ಕಾಂಗ್ರೆಸ್ಸಿನವರು ಅಧಿಕಾರ ಬಿಟ್ಟು ತೊಲಗಲಿ

Views:

9

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.