Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • 5 ಸಾವಿರ ಕಾರ್ಯಕರ್ತರೊಂದಿಗೆ ದೇವಾಲಯ ಮುತ್ತಿಗೆಗೆ ರೇವಣ್ಣ ಎಚ್ಚರಿಕೆ
  • Bangalore
  • Front news
  • Politics
  • State

5 ಸಾವಿರ ಕಾರ್ಯಕರ್ತರೊಂದಿಗೆ ದೇವಾಲಯ ಮುತ್ತಿಗೆಗೆ ರೇವಣ್ಣ ಎಚ್ಚರಿಕೆ

Praja Vahini November 2, 2026
IMG_2836
Spread the love

ಹಾಸನ: ಹಾಸನಾಂಬೆ ಜಾತ್ರೋತ್ಸವದ ದರ್ಶನದ ಗೋಲ್ಡ್ ಪಾಸ್ ವಿತರಣೆ ವಿಚಾರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಪಾಸ್ ಹಂಚಿಕೆಯಲ್ಲಿ ಜೆಡಿಎಸ್ ಶಾಸಕರನ್ನು ಕಡೆಗಣಿಸಿ ಆಡಳಿತಾರೂಢ ಪಕ್ಷದವರಿಗೆ ಮಾತ್ರ ಆದ್ಯತೆ ನೀಡಲಾಗುತ್ತಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಎಚ್.ಡಿ. ರೇವಣ್ಣ ಆರೋಪಿಸಿದ್ದಾರೆ. ಎರಡು ದಿನಗಳೊಳಗೆ ಈ ತಾರತಮ್ಯ ಸರಿಪಡಿಸದಿದ್ದರೆ ನವೆಂಬರ್ 4ರಂದು ಐದು ಸಾವಿರ ಜೆಡಿಎಸ್ ಕಾರ್ಯಕರ್ತರೊಂದಿಗೆ ಹಾಸನಾಂಬೆ ದೇವಾಲಯಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿದ ರೇವಣ್ಣ, ಆರಂಭದಲ್ಲಿ ಈ ಬಾರಿ ಹಾಸನಾಂಬೆ ದರ್ಶನಕ್ಕೆ ಪಾಸ್ ವ್ಯವಸ್ಥೆ ಇರುವುದಿಲ್ಲ ಎಂದು ತಿಳಿಸಲಾಗಿತ್ತು. ಆದರೆ, ಬಳಿಕ ಗೋಲ್ಡ್ ಪಾಸ್‌ಗಳನ್ನು ಮುದ್ರಿಸಲಾಗಿದೆ. ಎಷ್ಟು ಪಾಸ್‌ಗಳನ್ನು ಸಿದ್ಧಪಡಿಸಲಾಗಿದೆ ಮತ್ತು ಯಾರಿಗೆ ಎಷ್ಟು ಪಾಸ್‌ಗಳನ್ನು ವಿತರಿಸಲಾಗಿದೆ ಎಂಬ ಮಾಹಿತಿಯನ್ನು ಜಿಲ್ಲಾಡಳಿತ ನೀಡುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಪಾಸ್ ವಿತರಣೆಯ ಸಂದರ್ಭದಲ್ಲಿ ಜಿಲ್ಲೆಯ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು. ಆದರೆ, ಜನಪ್ರತಿನಿಧಿಗಳನ್ನು ಕಡೆಗಣಿಸಿ ಒಂದೇ ಪಕ್ಷದವರಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ ಎಂದು ದೂರಿದರು. ಈ ವಿಚಾರವಾಗಿ ಜಿಲ್ಲಾಧಿಕಾರಿ ಅಥವಾ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮೊಂದಿಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದರು.

ದೇವಿಯ ದರ್ಶನಕ್ಕೆ ಹೋಗುವುದಿಲ್ಲ

ಪಾಸ್ ಹಂಚಿಕೆ ವಿಚಾರದಲ್ಲಿ ತಮ್ಮನ್ನು ದೂರವಿಟ್ಟಿರುವುದಕ್ಕೆ ಬೇಸರ ವ್ಯಕ್ತಪಡಿಸಿದ ರೇವಣ್ಣ, ಈ ಬಾರಿ ಹಾಸನಾಂಬೆ ದೇವಿಯ ದರ್ಶನಕ್ಕೆ ತೆರಳುವುದಿಲ್ಲ ಎಂದು ಘೋಷಿಸಿದರು. ಜಿಲ್ಲಾಧಿಕಾರಿಯವರೇ ಗೋಲ್ಡ್ ಪಾಸ್ ಇಟ್ಟುಕೊಂಡು ಪೂಜೆ ಮಾಡಲಿ. ತಾವು ಇಲ್ಲಿಂದಲೇ ದೇವಿಗೆ ಕೈಮುಗಿಯುವುದಾಗಿ ಹೇಳಿದರು.

ಇನ್ನು ನಗರದ ವಿವಿಧೆಡೆ ಅಳವಡಿಸಿರುವ ಸ್ವಾಗತ ಕಮಾನುಗಳಲ್ಲಿ ಶಾಸಕರ ಭಾವಚಿತ್ರ ಅಳವಡಿಸದಿರುವುದಕ್ಕೂ ಆಕ್ಷೇಪ ವ್ಯಕ್ತಪಡಿಸಿದರು. ಶಿಷ್ಟಾಚಾರ ಪಾಲನೆಯಲ್ಲಿ ಪಕ್ಷಪಾತ ಮಾಡಬಾರದು ಎಂದು ಆಗ್ರಹಿಸಿದರು. ಇದೀಗ ರೇವಣ್ಣ ಅವರ ಎಚ್ಚರಿಕೆಗೆ ಜಿಲ್ಲಾಡಳಿತ ಯಾವ ರೀತಿ ಪ್ರತಿಕ್ರಿಯಿಸಲಿದೆ ಎಂಬ ಕುತೂಹಲ ಮೂಡಿದೆ.

About the Author

Praja Vahini

Editor

View All Posts

Spread the love

Post navigation

Previous: ಪೊಲೀಸ್ ಕಮಿಷನರ್ ಹೇಳಿಕೆಗೆ ಎಚ್‌ಡಿಕೆ ಆಕ್ರೋಶ
Next: ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಪ್ರಿಯಾಂಕ್ ಖರ್ಗೆ ಪರೋಕ್ಷ ವಾಗ್ದಾಳಿ

Views:

10

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.