Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮಹಿಳೆಯರ ಸಬಲೀಕರಣವೇ ಸಮಾಜದ ಸಬಲೀಕರಣ: ರೋಶ್ನಿ ಗೌಡ
  • Bangalore
  • Front news
  • Politics
  • State

ಮಹಿಳೆಯರ ಸಬಲೀಕರಣವೇ ಸಮಾಜದ ಸಬಲೀಕರಣ: ರೋಶ್ನಿ ಗೌಡ

Praja Vahini November 2, 2026 1 minute read
2496279a-03eb-416b-8bc9-76cb5d27dcfe
Spread the love

ಬೆಂಗಳೂರು: ಮಹಿಳೆಯರ ಸಬಲೀಕರಣ, ನಾಯಕತ್ವ ಅಭಿವೃದ್ಧಿ ಹಾಗೂ ಸರ್ವಾಂಗೀಣ ಪ್ರಗತಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘವು ಮಹತ್ವದ ಹೆಜ್ಜೆಯನ್ನಿಟ್ಟಿದೆ. ಸ್ವೀಡನ್‌ನ ಜನಪ್ರಿಯ ಇನ್ಫ್ಲುಯೆನ್ಸರ್ ಅನಿಕಾ ಸನ್‌ಬೋಮ್ ಅವರೊಂದಿಗೆ ಅಂತಾರಾಷ್ಟ್ರೀಯ ಸಹಯೋಗಕ್ಕೆ ಮುಂದಾಗಿರುವುದು ಮಹಿಳಾ ಅಭಿವೃದ್ಧಿಗೆ ಹೊಸ ಅವಕಾಶಗಳನ್ನು ತೆರೆದಿದೆ.

ಸಂಘದ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲು ಕರ್ನಾಟಕಕ್ಕೆ ಭೇಟಿ ನೀಡಿದ ಅನಿಕಾ ಅವರು, ಮಹಿಳೆಯರಲ್ಲಿ ಆತ್ಮವಿಶ್ವಾಸ ಬೆಳೆಸುವುದು, ನಾಯಕತ್ವ ಗುಣಗಳನ್ನು ರೂಪಿಸುವುದು, ಕೌಶಲ್ಯಾಭಿವೃದ್ಧಿ ಹಾಗೂ ಆರೋಗ್ಯ ಜಾಗೃತಿಗೆ ಸಂಬಂಧಿಸಿದಂತೆ ಚರ್ಚಿಸಿದರು.

ಈ ಕುರಿತು ಮಾತನಾಡಿದ ಸಂಘದ ಅಧ್ಯಕ್ಷೆ ರೋಶ್ನಿ ಗೌಡ, “ಮಹಿಳೆಯರ ಸಬಲೀಕರಣವೇ ಸಮಾಜದ ಸಬಲೀಕರಣ. ನಮ್ಮ ಸಂಘದ ಕಾರ್ಯಚಟುವಟಿಕೆಗಳನ್ನು ಗುರುತಿಸಿ ಅಂತಾರಾಷ್ಟ್ರೀಯ ಮಟ್ಟದ ಸಹಕಾರಕ್ಕೆ ಮುಂದಾಗಿರುವುದು ಹೆಮ್ಮೆಯ ಸಂಗತಿ. ರಾಜ್ಯದ ಮಹಿಳೆಯರು ಆತ್ಮವಿಶ್ವಾಸ, ಮಹತ್ವಾಕಾಂಕ್ಷೆ ಮತ್ತು ಪ್ರಗತಿಪರ ದೃಷ್ಟಿಕೋನವನ್ನು ಬೆಳೆಸಿಕೊಳ್ಳಬೇಕು” ಎಂದರು.

ಕರ್ನಾಟಕದ ಸರ್ಕಾರಿ ಮಹಿಳಾ ನೌಕರರು ಸೇರಿದಂತೆ ವಿವಿಧ ಕ್ಷೇತ್ರಗಳ ಮಹಿಳೆಯರಿಗೆ ಅಂತಾರಾಷ್ಟ್ರೀಯ ಮಟ್ಟದ ನಾಯಕತ್ವ ತರಬೇತಿ, ಕೌಶಲ್ಯಾಭಿವೃದ್ಧಿ, ಆರೋಗ್ಯ ಜಾಗೃತಿ, ಆತ್ಮವಿಶ್ವಾಸ ವೃದ್ಧಿ ಹಾಗೂ ವ್ಯಕ್ತಿತ್ವ ವಿಕಸನ ಕಾರ್ಯಕ್ರಮಗಳನ್ನು ಆಯೋಜಿಸುವುದು ಈ ಸಹಯೋಗದ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.

ಸಂಘದ ಕಾರ್ಯದರ್ಶಿ ಶಶಿಕಲಾ ಕೆ., ರಾಜ್ಯ ಗೌರವಾಧ್ಯಕ್ಷೆ ಗೀತಾ ಸಿ.ಜಿ. ಹಾಗೂ ಖಜಾಂಚಿ ಡಾ. ವೀಣಾ ಕೃಷ್ಣಮೂರ್ತಿ ಅವರು ಅನಿಕಾ ಅವರನ್ನು ಸ್ವಾಗತಿಸಿ, ಸಹಯೋಗದ ಕುರಿತು ಚರ್ಚಿಸಿದರು.

ವಿಧಾನ ಪರಿಷತ್ ಸಭಾಪತಿ ಭೇಟಿ

ಅನಿಕಾ ಮತ್ತು ಸಂಘದ ಪ್ರತಿನಿಧಿಗಳು ವಿಧಾನಸೌಧದಲ್ಲಿ ವಿಧಾನ ಪರಿಷತ್ ಸಭಾಪತಿ ಸಲೀಂ ಅಹಮದ್ ಅವರನ್ನು ಭೇಟಿಯಾದರು. ಮಹಿಳಾ ಅಭಿವೃದ್ಧಿಗಾಗಿ ಸಂಘ ಕೈಗೊಂಡಿರುವ ಕಾರ್ಯಗಳನ್ನು ಶ್ಲಾಘಿಸಿದ ಸಭಾಪತಿಗಳು, ಅಂತಾರಾಷ್ಟ್ರೀಯ ಸಹಯೋಗಕ್ಕೆ ಬೆಂಬಲ ವ್ಯಕ್ತಪಡಿಸಿದರು. ಅನಿಕಾ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ, “ಅನಿಕಾ ಈಗ ರಾಜ್ಯದ ಒಂದು ಭಾಗವಾಗಿದ್ದಾರೆ” ಎಂದು ಸಂತಸ ವ್ಯಕ್ತಪಡಿಸಿದರು.

‘ಡು ಆರ್ ಡೈ’ ಪುಸ್ತಕ ಬಿಡುಗಡೆಗೆ ಸಿದ್ಧತೆ

‘ಸೌತ್ ಇಂಡಿಯನ್ ಮೆಟ್ರೊ ಎಕ್ಸ್‌ಪ್ರೆಸ್’ ಪತ್ರಿಕೆಯೊಂದಿಗೆ ಮಾತನಾಡಿದ ಅನಿಕಾ, ಕರ್ನಾಟಕದ ಸಂಸ್ಕೃತಿ ಹಾಗೂ ಜನರ ಪ್ರೀತಿ, ಆತಿಥ್ಯ ತಮ್ಮ ಮೇಲೆ ವಿಶೇಷ ಪ್ರಭಾವ ಬೀರಿದೆ ಎಂದರು. ತಮ್ಮ ಮುಂಬರುವ ‘ಡು ಆರ್ ಡೈ’ ಪುಸ್ತಕದ ಕುರಿತು ಮಾಹಿತಿ ಹಂಚಿಕೊಂಡ ಅವರು, ಹೊಸ ಯೋಜನೆಗಳೊಂದಿಗೆ ಮತ್ತೆ ಕರ್ನಾಟಕಕ್ಕೆ ಭೇಟಿ ನೀಡುವ ಆಸಕ್ತಿ ವ್ಯಕ್ತಪಡಿಸಿದರು.

ಈ ಸಹಯೋಗವು ಮಹಿಳೆಯರಿಗೆ ಜಾಗತಿಕ ಅನುಭವ ಹಾಗೂ ನಾಯಕತ್ವದ ಹೊಸ ಅವಕಾಶಗಳನ್ನು ಕಲ್ಪಿಸುವ ನಿರೀಕ್ಷೆಯಿದೆ.

About the Author

Praja Vahini

Editor

View All Posts

Spread the love

Post navigation

Previous: ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಪ್ರಿಯಾಂಕ್ ಖರ್ಗೆ ಪರೋಕ್ಷ ವಾಗ್ದಾಳಿ
Next: ಜಿಬಿಎ ಚುನಾವಣೆ ಸಿದ್ಧತೆ ಚುರುಕು: 142 ಅಧಿಕಾರಿಗಳ ನೇಮಕಕ್ಕೆ ಆಯೋಗ ಸಜ್ಜು

Views:

12

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.