Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬೆಂಗಳೂರಿನಲ್ಲಿ ಭೀಕರ ಹತ್ಯಾಕಾಂಡ: ಪತ್ನಿ ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಕೊಲೆ
  • Bangalore
  • Crime
  • Front news
  • State

ಬೆಂಗಳೂರಿನಲ್ಲಿ ಭೀಕರ ಹತ್ಯಾಕಾಂಡ: ಪತ್ನಿ ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಕೊಲೆ

Praja Vahini November 6, 2026
IMG_2885
Spread the love

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಟ್ಯಾಕ್ಸಿ ಚಾಲಕನೊಬ್ಬ ತನ್ನ ಪತ್ನಿ ಸೇರಿದಂತೆ ಆಕೆಯ ಕುಟುಂಬದ ಏಳು ಮಂದಿಯನ್ನು ಹತ್ಯೆ ಮಾಡಿರುವ ಭೀಕರ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಹತ್ಯೆಯಾದವರಲ್ಲಿ ಏಳು ವರ್ಷದ ಬಾಲಕನೂ ಸೇರಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶೇಖರ್ ಅಲಿಯಾಸ್ ಇಂದುಶೇಖರ್ ಎಂಬ ಆರೋಪಿಯನ್ನು ರಾಜಾಜಿನಗರ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ರಾಜಾಜಿನಗರದಲ್ಲಿರುವ ಆರೋಪಿಯ ಮನೆಯಲ್ಲಿ ಎರಡು ದಿನಗಳ ಅವಧಿಯಲ್ಲಿ ಈ ಹತ್ಯೆಗಳು ನಡೆದಿವೆ. ಬಳಿಕ ಮೃತದೇಹಗಳನ್ನು ನಂದಿ ಬೆಟ್ಟ ಹಾಗೂ ಚಾರ್ಮಾಡಿ ಘಾಟ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಎಸೆದಿರುವ ಆರೋಪ ಕೇಳಿಬಂದಿದೆ.

ಈ ಹತ್ಯಾಕಾಂಡದಲ್ಲಿ ಆರೋಪಿಯ ಪತ್ನಿ ಸುನೀತಾ, ಅತ್ತೆ ರೂಪಾವತಿ, ಭಾವಂದಿರಾದ ಶಿವಕುಮಾರ್ ಮತ್ತು ಶಂಕರ್, ಅತ್ತಿಗೆಯಂದಿರಾದ ದಿವ್ಯಾ ಹಾಗೂ ನಳಿನಿ ಮತ್ತು ಶಿವಕುಮಾರ್ ಅವರ ಏಳು ವರ್ಷದ ಪುತ್ರ ಪುನೀತ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸುಮಾರು 20 ವರ್ಷಗಳ ಹಿಂದೆ ಸುನೀತಾ ಅವರನ್ನು ವಿವಾಹವಾಗಿದ್ದ ಶೇಖರ್, ದಂಪತಿ ನಡುವಿನ ಕೌಟುಂಬಿಕ ಮನಸ್ತಾಪದಿಂದಾಗಿ ಆಗಾಗ್ಗೆ ಜಗಳವಾಡುತ್ತಿದ್ದ ಎನ್ನಲಾಗಿದೆ. ಸುನೀತಾ ಪದೇಪದೇ ತವರು ಮನೆಗೆ ತೆರಳುತ್ತಿದ್ದದ್ದು ಹಾಗೂ ಆಕೆಯ ಕುಟುಂಬದವರು ನೀಡುತ್ತಿದ್ದ ಬೆಂಬಲದಿಂದ ಆರೋಪಿ ಅಸಮಾಧಾನಗೊಂಡಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದೇ ವಿಚಾರವಾಗಿ ಆಕ್ರೋಶಗೊಂಡಿದ್ದ ಶೇಖರ್, ಪತ್ನಿಯ ಕುಟುಂಬವನ್ನೇ ಗುರಿಯಾಗಿಸಿಕೊಂಡು ಹತ್ಯೆಗೆ ಸಂಚು ರೂಪಿಸಿದ್ದ ಎಂಬ ಆರೋಪವಿದೆ. ಮೊದಲು ಪತ್ನಿಯನ್ನು ಹತ್ಯೆ ಮಾಡಿದ ಬಳಿಕ ಮೃತದೇಹವನ್ನು ನಂದಿ ಬೆಟ್ಟದ ಸಮೀಪ ಎಸೆದಿದ್ದಾನೆ ಎನ್ನಲಾಗಿದೆ. ನಂತರ ಪತ್ನಿಯ ಸಹೋದರರನ್ನು ಪಾರ್ಟಿಯ ನೆಪದಲ್ಲಿ ಮನೆಗೆ ಕರೆಸಿ ಹತ್ಯೆ ಮಾಡಿದ್ದಾನೆ. ಬಳಿಕ ಅವರ ಪತ್ನಿಯರು, ಅತ್ತೆ ಮತ್ತು ಬಾಲಕನನ್ನೂ ಕೊಂದಿರುವ ಆರೋಪ ಕೇಳಿಬಂದಿದೆ.

ಹತ್ಯೆಗಳ ಬಳಿಕ ಮನೆಯಲ್ಲಿದ್ದ ರಕ್ತದ ಕಲೆಗಳನ್ನು ರಾಸಾಯನಿಕ ಬಳಸಿ ಸ್ವಚ್ಛಗೊಳಿಸುವ ಮೂಲಕ ಸಾಕ್ಷ್ಯ ನಾಶಪಡಿಸಲು ಯತ್ನಿಸಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.

ನಳಿನಿ ಅವರ ತಾಯಿ ಶ್ರೀರಾಮಪುರ ಪೊಲೀಸ್ ಠಾಣೆಗೆ ದೂರು ನೀಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ದೂರಿನ ಆಧಾರದ ಮೇಲೆ ತನಿಖೆ ಆರಂಭಿಸಿದ ಪೊಲೀಸರು ಶೇಖರ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸರಣಿ ಹತ್ಯೆಗಳ ವಿಚಾರ ಬಹಿರಂಗವಾಗಿದೆ.

ಈಗಾಗಲೇ ನಂದಿ ಬೆಟ್ಟದ ಬಳಿ ಏಳು ವರ್ಷದ ಪುನೀತ್‌ನ ಮೃತದೇಹ ಪತ್ತೆಯಾಗಿದ್ದು, ಉಳಿದ ಮೃತದೇಹಗಳ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಕೃತ್ಯಕ್ಕೆ ಬಳಸಲಾಗಿದೆ ಎನ್ನಲಾದ ಕಾರು ಮತ್ತು ಆಯುಧವನ್ನು ವಶಪಡಿಸಿಕೊಳ್ಳಲಾಗಿದೆ.

ಹತ್ಯಾಕಾಂಡದಲ್ಲಿ ಬೇರೆ ಯಾರಾದರೂ ಭಾಗಿಯಾಗಿದ್ದಾರೆಯೇ ಹಾಗೂ ಕೃತ್ಯದ ಹಿಂದಿನ ಸಂಪೂರ್ಣ ಕಾರಣಗಳೇನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಗ್ರಾಹಕರಿಂದ ಎಂಡಿಆರ್ ಶುಲ್ಕ ವಸೂಲಿಗೆ ಅವಕಾಶವಿಲ್ಲ: ಸುಪ್ರೀಂ ಕೋರ್ಟ್‌ಗೆ ಎನ್‌ಪಿಸಿಐ ಸ್ಪಷ್ಟನೆ
Next: ಮೋದಿ ಅವರಿಗಿಂತ ನನಗೆ ಹೆಚ್ಚಿನ ವಿದ್ಯಾರ್ಹತೆ ಇದೆ: ಪ್ರಿಯಾಂಕ್ ಖರ್ಗೆ ತಿರುಗೇಟು

Views:

11

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.