Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಎಥೆನಾಲ್ ಮಿಶ್ರಣ ವಿವಾದ: ರಾಜ್ಯದ 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ
  • Bangalore
  • Front news
  • Politics
  • State

ಎಥೆನಾಲ್ ಮಿಶ್ರಣ ವಿವಾದ: ರಾಜ್ಯದ 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ

Praja Vahini November 8, 2026
0832228e-5b87-4506-9dc8-160a2f5a63d2
Spread the love

ಬೆಂಗಳೂರು: ಪೆಟ್ರೋಲ್‌ನಲ್ಲಿ ಎಥೆನಾಲ್ ಮಿಶ್ರಣದ ಪ್ರಮಾಣ ಹೆಚ್ಚಳದಿಂದ ವಾಹನಗಳ ಎಂಜಿನ್ ಕಾರ್ಯನಿರ್ವಹಣೆಯಲ್ಲಿ ಸಮಸ್ಯೆಗಳು ಉಂಟಾಗುತ್ತಿವೆ ಎಂಬ ಸಾವಿರಾರು ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಗಂಭೀರವಾಗಿ ಪರಿಶೀಲನೆ ನಡೆಸುತ್ತಿದೆ. ರಾಜ್ಯದ 67 ಕಡೆ ಪೆಟ್ರೋಲ್ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸಲಾಗಿದ್ದು, ಸೋಮವಾರ ಸಂಬಂಧಪಟ್ಟ ಸಚಿವರು ಪತ್ರಿಕಾಗೋಷ್ಠಿ ನಡೆಸಿ ಪರಿಶೀಲನಾ ವರದಿ ಹಾಗೂ ಮುಂದಿನ ಕ್ರಮಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೆಟ್ರೋಲ್‌ನಲ್ಲಿ ಶೇ.31.5ರಷ್ಟು ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂಬ ದೂರುಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಸಚಿವರಿಗೆ ಅಗತ್ಯ ಸೂಚನೆ ನೀಡಲಾಗಿದ್ದು, ಕೇಂದ್ರ ಸರ್ಕಾರಕ್ಕೂ ಮಾಹಿತಿ ರವಾನಿಸಲಾಗಿದೆ ಎಂದರು.

ವಾಹನ ಸವಾರರು ಮೈಲೇಜ್ ಕಡಿಮೆಯಾಗುವುದು, ನಿರೀಕ್ಷಿತ ದೂರ ಕ್ರಮಿಸಲು ಸಾಧ್ಯವಾಗದಿರುವುದು ಹಾಗೂ ವಾಹನ ಚಲಿಸುತ್ತಿರುವಾಗಲೇ ಎಂಜಿನ್ ಸ್ಥಗಿತಗೊಳ್ಳುವುದು ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ದೂರು ನೀಡಿದ್ದಾರೆ. ಇಂತಹ ದೂರುಗಳ ಸಂಖ್ಯೆ ಸಾವಿರಾರು ದಾಟಿದ್ದು, ವಾಹನಗಳ ಕಾರ್ಯಕ್ಷಮತೆ ಕುರಿತು ಜನರಲ್ಲಿ ಆತಂಕ ಮೂಡಿದೆ ಎಂದು ಹೇಳಿದರು.

ಪೆಟ್ರೋಲ್ ಬಂಕ್‌ಗಳಷ್ಟೇ ಅಲ್ಲ, ವಿತರಣಾ ಹಂತದಲ್ಲೂ ಪರಿಶೀಲನೆ

ಪೆಟ್ರೋಲ್ ಮಾದರಿಗಳನ್ನು ಕೇವಲ ಬಂಕ್‌ಗಳಿಂದ ಮಾತ್ರ ಸಂಗ್ರಹಿಸದೆ, ಎಥೆನಾಲ್ ಮಿಶ್ರಣ ಮತ್ತು ಇಂಧನ ವಿತರಣೆಯಾಗುವ ಹಂತದಲ್ಲಿಯೂ ಪರಿಶೀಲನೆ ನಡೆಸಲಾಗಿದೆ. ಎಲ್ಲಿ, ಹೇಗೆ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂಬುದಕ್ಕೆ ಸಂಬಂಧಿಸಿದ ದಾಖಲೆಗಳನ್ನೂ ಸಂಗ್ರಹಿಸಲಾಗಿದೆ. ಈ ಎಲ್ಲ ಅಂಶಗಳ ಕುರಿತು ಸಚಿವರು ಸೋಮವಾರ ವಿವರವಾದ ವರದಿ ಬಿಡುಗಡೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಕೇಂದ್ರ ಸರ್ಕಾರ ಈ ವಿಚಾರದಿಂದ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ. ವಾಹನಗಳ ಕಾರ್ಯಕ್ಷಮತೆ, ಇಂಧನದ ಗುಣಮಟ್ಟ ಮತ್ತು ಜನರ ಸುರಕ್ಷತೆ ಅತ್ಯಂತ ಮುಖ್ಯ. ಎಥೆನಾಲ್ ಕಡಿಮೆ ಬೆಲೆಗೆ ದೊರೆಯುತ್ತದೆ ಎಂಬ ಕಾರಣಕ್ಕೆ ಆರ್ಥಿಕ ಲಾಭದ ಉದ್ದೇಶದಿಂದ ಮಿಶ್ರಣದ ಪ್ರಮಾಣ ಹೆಚ್ಚಿಸುವುದು ಸರಿಯಲ್ಲ. ಇದರಿಂದ ಸಾಮಾನ್ಯ ಜನರಿಗೆ ತೊಂದರೆಯಾಗಬಾರದು ಎಂದು ಅಭಿಪ್ರಾಯಪಟ್ಟರು.

ದೇಶದಾದ್ಯಂತ ವಾಹನ ಸವಾರರಲ್ಲಿ ಆತಂಕ ಮೂಡಿಸಿರುವ ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ವಾಹನಗಳ ಸುರಕ್ಷತೆ ಮತ್ತು ಸಾರ್ವಜನಿಕರ ಹಿತಾಸಕ್ತಿಗೆ ಧಕ್ಕೆಯಾಗುವ ಯಾವುದೇ ಪರಿಸ್ಥಿತಿಯನ್ನು ಸಹಿಸುವುದಿಲ್ಲ ಎಂದರು.

ಈ ವಿಚಾರದಲ್ಲಿ ಬಿಜೆಪಿ, ಜೆಡಿಎಸ್ ನಾಯಕರು ಹಾಗೂ ಪ್ರತಿಪಕ್ಷ ನಾಯಕ ಆರ್. ಅಶೋಕ್ ಮೌನವಾಗಿರುವುದೇಕೆ ಎಂದು ಪ್ರಶ್ನಿಸಿದ ಅವರು, ಜನರ ಹಿತಾಸಕ್ತಿಗೆ ಸಂಬಂಧಿಸಿದ ವಿಷಯದಲ್ಲಿ ಎಲ್ಲ ರಾಜಕೀಯ ಪಕ್ಷಗಳೂ ಧ್ವನಿ ಎತ್ತಬೇಕು ಎಂದು ಆಗ್ರಹಿಸಿದರು.

ದೀಪಾವಳಿ ಎಲ್ಲರ ಬದುಕಿನಲ್ಲೂ ಬೆಳಕು ಮೂಡಿಸಲಿ

ಇದೇ ವೇಳೆ ರಾಜ್ಯದ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಮುಖ್ಯಮಂತ್ರಿ, ಕರ್ನಾಟಕದ ಪ್ರತಿಯೊಬ್ಬರ ಮನೆಯಲ್ಲೂ ಸಂತೋಷ, ನೆಮ್ಮದಿ ಮತ್ತು ಬೆಳಕು ತುಂಬಿರಲಿ ಎಂದು ಹಾರೈಸಿದರು.

ಭಾನುವಾರ ಪವಿತ್ರ ದಿನವಾಗಿದ್ದು, ತಾಯಿ ಹಾಸನಾಂಬೆಯ ದರ್ಶನಕ್ಕೆ ತೆರಳುತ್ತಿದ್ದೇನೆ. ರಾಜ್ಯವು ಬರಗಾಲದ ಸಂಕಷ್ಟ ಎದುರಿಸುತ್ತಿದೆ. ಆಗಾಗ ಮಳೆಯಾಗುತ್ತಿದ್ದರೂ ರೈತರಿಗೆ ನಿರೀಕ್ಷಿತ ಸಮಾಧಾನ ಸಿಕ್ಕಿಲ್ಲ. ಈ ಸಂಕಷ್ಟಗಳಿಂದ ಹೊರಬರುವ ಶಕ್ತಿಯನ್ನು ಭಗವಂತ ಎಲ್ಲರಿಗೂ ನೀಡಲಿ. ಪ್ರತಿಯೊಬ್ಬರ ಬದುಕಿನಲ್ಲೂ ನೆಮ್ಮದಿ ಮತ್ತು ಬೆಳಕು ಸದಾ ನೆಲೆಸಿರಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.

About the Author

Praja Vahini

Editor

View All Posts

Spread the love

Post navigation

Previous: ‘ನನ್ನ ಇ-ಖಾತಾ, ನನ್ನ ಹಕ್ಕು’ ಅಭಿಯಾನ
Next: ಉರ್ದು ಅಕಾಡೆಮಿಗೆ ಅನುದಾನ ಹೆಚ್ಚಳ

Views:

14

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.