Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಡಿಕೆ, ಬಿಕೆ, ಪಿಕೆಯವರ ಆಟ ಇನ್ನು ನಡೆಯುವುದಿಲ್ಲ; ಬಿವೈವಿ
  • Bangalore
  • Front news
  • Politics
  • State

ಡಿಕೆ, ಬಿಕೆ, ಪಿಕೆಯವರ ಆಟ ಇನ್ನು ನಡೆಯುವುದಿಲ್ಲ; ಬಿವೈವಿ

Praja Vahini November 11, 2026 1 minute read
f114c092-f7ef-44cb-aa16-ffea6c56647b
Spread the love

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಯಿಂದ ರಾಜ್ಯದ ಬಡವರು, ರೈತರು ಹಾಗೂ ಸಾಮಾನ್ಯ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಾಂಗ್ರೆಸ್ ಸರ್ಕಾರಕ್ಕೆ ಮಾನ, ಮರ್ಯಾದೆ ಇದೆಯೇ ಎಂದು ರಾಜ್ಯದ ಜನರೇ ಪ್ರಶ್ನಿಸುವಂತಾಗಿದೆ. ಕಳೆದ ಮೂರೂವರೆ ವರ್ಷಗಳಲ್ಲಿ ಬೆಲೆ ಏರಿಕೆ ಮಾಡುವುದೊಂದೇ ಈ ಸರ್ಕಾರದ ಸಾಧನೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ವಾಗ್ದಾಳಿ ನಡೆಸಿದರು.

ರಾಜ್ಯ ಸರ್ಕಾರದ ಜನವಿರೋಧಿ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಬಿಜೆಪಿ ರಾಜ್ಯ ಘಟಕದ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹಾಗೂ ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಜನಸಾಮಾನ್ಯರ ಬದುಕು ದುಸ್ತರ

ರಾಜ್ಯ ಸರ್ಕಾರ ನಿರಂತರವಾಗಿ ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸುತ್ತಿರುವುದರಿಂದ ಬಡವರು ಮತ್ತು ಮಧ್ಯಮ ವರ್ಗದ ಜನರು ಜೀವನ ಸಾಗಿಸುವುದೇ ಕಷ್ಟವಾಗಿದೆ. ಜನರ ಸಂಕಷ್ಟಗಳಿಗೆ ಸ್ಪಂದಿಸಬೇಕಾದ ಸರ್ಕಾರ ಜನರ ಮೇಲೆ ಮತ್ತಷ್ಟು ಆರ್ಥಿಕ ಹೊರೆ ಹೇರುತ್ತಿದೆ. ಇದರಿಂದ ಜನಸಾಮಾನ್ಯರು ಕಾಂಗ್ರೆಸ್ ಸರ್ಕಾರಕ್ಕೆ ಹಿಡಿಶಾಪ ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಜಯೇಂದ್ರ ಆರೋಪಿಸಿದರು.

ಬಡವರ ಮೇಲೆ ಬೆಲೆ ಏರಿಕೆಯ ಬರೆ

ಕಳೆದ ಮೂರೂವರೆ ವರ್ಷಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ನಾಲ್ಕು ಬಾರಿ ಹೆಚ್ಚಿಸಲಾಗಿದೆ. ಸ್ಟಾಂಪ್ ಡ್ಯೂಟಿ ಏರಿಕೆ ಮಾಡಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿಯೂ ವಿವಿಧ ಸೇವೆಗಳ ದರ ಹೆಚ್ಚಿಸಿ ಬಡವರ ಮೇಲೆ ಹೊರೆ ಹಾಕಲಾಗಿದೆ. ದೀಪಾವಳಿ ಸಂದರ್ಭದಲ್ಲಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 8 ರೂಪಾಯಿ ಹೆಚ್ಚಿಸುವುದರ ಜತೆಗೆ ಮೊಸರು ಮತ್ತು ತುಪ್ಪದ ಬೆಲೆಯನ್ನೂ ಏರಿಸಲಾಗಿದೆ ಎಂದು ಟೀಕಿಸಿದರು.

ರೈತರಿಗೆ ಅನುಕೂಲವಾಗುವಂತೆ ಸಬ್ಸಿಡಿ ನೀಡಬೇಕೆಂದು ಬಿಜೆಪಿ ಒತ್ತಾಯಿಸಿದರೂ ಸರ್ಕಾರ ಸ್ಪಂದಿಸಿಲ್ಲ. ಹಿಂದಿನ ಯಡಿಯೂರಪ್ಪ ಅವರ ಸರ್ಕಾರದ ಮಾದರಿಯಲ್ಲಿ ರೈತರಿಗೆ ನೆರವು ನೀಡುವ ಮನಸ್ಸನ್ನು ಕಾಂಗ್ರೆಸ್ ಸರ್ಕಾರ ತೋರಿಲ್ಲ ಎಂದು ದೂರಿದರು.

ರೈತರನ್ನು ನಿರ್ಲಕ್ಷಿಸಿದ ಸರ್ಕಾರ

ರಾಜ್ಯದಲ್ಲಿ ಭೀಕರ ಬರಗಾಲ ಎದುರಾದ ಸಂದರ್ಭದಲ್ಲಿ ರೈತರಿಗೆ ಸಮರ್ಪಕ ಪರಿಹಾರ ನೀಡುವಂತೆ ಬಿಜೆಪಿ ಬಳ್ಳಾರಿ ಚಲೋ ಪಾದಯಾತ್ರೆ ನಡೆಸಿತ್ತು. ಆದರೆ ಮುಖ್ಯಮಂತ್ರಿಗಳು ವಿಶೇಷ ಅಧಿವೇಶನದ ಹೆಸರಿನಲ್ಲಿ ನಾಟಕವಾಡಿ, ಒಂದು ಕುಟುಂಬಕ್ಕೆ ಕೇವಲ 2,500 ರೂಪಾಯಿ ಪರಿಹಾರ ಘೋಷಿಸಿದರು. ಅನ್ನ ನೀಡುವ ರೈತರ ಸಂಕಷ್ಟವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ಅಲ್ಪ ಮೊತ್ತದ ಪರಿಹಾರ ನೀಡಿ ರೈತರನ್ನು ಅವಮಾನಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರದ ಪತನದ ದಿನಗಳು ಹತ್ತಿರ

ವಿಧಾನಪರಿಷತ್ತಿನ ನಾಲ್ಕು ಕ್ಷೇತ್ರಗಳ ಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಬಿಜೆಪಿ-ಎನ್‌ಡಿಎಗೆ ಜನರು ಆಶೀರ್ವಾದ ಮಾಡಿದ್ದಾರೆ. ಇದು ಕಾಂಗ್ರೆಸ್ ಸರ್ಕಾರದ ವಿರುದ್ಧ ಜನರ ಆಕ್ರೋಶಕ್ಕೆ ಸಾಕ್ಷಿಯಾಗಿದೆ. ಡಿಕೆ, ಬಿಕೆ, ಪಿಕೆ ಅವರಿಗೆ ಒಂದೇ ಮಾತು ಹೇಳಲು ಬಯಸುತ್ತೇನೆ. ನಿಮ್ಮ ಆಟ ಇನ್ನು ನಡೆಯುವುದಿಲ್ಲ. ಗಂಟುಮೂಟೆ ಕಟ್ಟಿಕೊಂಡು ಮನೆಗೆ ಹೋಗುವ ದಿನಗಳು ಹತ್ತಿರವಾಗಿವೆ ಎಂದು ಎಚ್ಚರಿಸಿದರು.

ರಾಜ್ಯ ಸರ್ಕಾರ ಜನರಿಗೆ ಐದು ಗ್ಯಾರಂಟಿಗಳ ಜತೆಗೆ ಆರನೇ ಗ್ಯಾರಂಟಿಯಾಗಿ ಬೆಲೆ ಏರಿಕೆಯನ್ನೂ ನೀಡಿದೆ. ಮುಂದಿನ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್ ಸರ್ಕಾರವನ್ನು ತಿರಸ್ಕರಿಸಿ ಬಿಜೆಪಿ ನೇತೃತ್ವದ ಎನ್‌ಡಿಎಗೆ ಅಧಿಕಾರ ನೀಡುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

About the Author

Praja Vahini

Editor

View All Posts

Spread the love

Post navigation

Previous: ಬೆಲೆ ಏರಿಕೆ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಹೋರಾಟ
Next: ಖಜಾನೆ ಖಾಲಿಯಾದ ಸರಕಾರ: ಜಗದೀಶ ಶೆಟ್ಟರ್

Views:

10

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.