Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಡಿಕೆಶಿ ಜೊತೆ ಮೋದಿ ಮೆಟ್ರೋದಲ್ಲಿ ಪ್ರಯಾಣ!
  • Bangalore
  • Front news
  • Politics
  • State

ಡಿಕೆಶಿ ಜೊತೆ ಮೋದಿ ಮೆಟ್ರೋದಲ್ಲಿ ಪ್ರಯಾಣ!

Praja Vahini November 13, 2026 1 minute read
IMG_2964
Spread the love

ಬೆಂಗಳೂರು: ರಾಜಧಾನಿ ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ಮತ್ತೊಂದು ಮಹತ್ವದ ಸೇರ್ಪಡೆಯಾಗಿದ್ದು, ನಮ್ಮ ಮೆಟ್ರೋ ಪಿಂಕ್ ಲೈನ್‌ಗೆ (ಗುಲಾಬಿ ಮಾರ್ಗ) ಶುಕ್ರವಾರ ಅಧಿಕೃತ ಚಾಲನೆ ದೊರೆತಿದೆ. ತಾವರೆಕೆರೆ ಮೆಟ್ರೋ ನಿಲ್ದಾಣದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೂತನ ಮೆಟ್ರೋ ರೈಲಿಗೆ ಹಸಿರು ನಿಶಾನೆ ತೋರಿದರು.

ಉದ್ಘಾಟನೆಯ ಬಳಿಕ ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಒಂದೇ ಮೆಟ್ರೋ ರೈಲಿನಲ್ಲಿ ಕುಳಿತು ಪ್ರಯಾಣಿಸುವ ಮೂಲಕ ಗಮನ ಸೆಳೆದರು. ಈ ಸಂದರ್ಭದಲ್ಲಿ ರಾಜ್ಯಪಾಲರಾದ ಡಾ. ಸುಧಾ ಯಾದವ್, ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಪಿಂಕ್ ಲೈನ್ ನಕ್ಷೆ ವೀಕ್ಷಿಸಿದ ಪ್ರಧಾನಿ

ಮೆಟ್ರೋ ಮಾರ್ಗಕ್ಕೆ ಚಾಲನೆ ನೀಡಿದ ಬಳಿಕ ನಿಲ್ದಾಣದಲ್ಲಿ ಅಳವಡಿಸಲಾಗಿದ್ದ ಪಿಂಕ್ ಲೈನ್‌ನ ಮಾದರಿ ನಕ್ಷೆಯನ್ನು ಪ್ರಧಾನಿ ನರೇಂದ್ರ ಮೋದಿ ವೀಕ್ಷಿಸಿದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಚಿವ ಕೃಷ್ಣ ಬೈರೇಗೌಡ ಅವರು ನೂತನ ಮಾರ್ಗದ ವ್ಯಾಪ್ತಿ, ಸಂಪರ್ಕ ವ್ಯವಸ್ಥೆ ಹಾಗೂ ಯೋಜನೆಯ ಪ್ರಮುಖ ವೈಶಿಷ್ಟ್ಯಗಳ ಕುರಿತು ಪ್ರಧಾನಿಯವರಿಗೆ ಮಾಹಿತಿ ನೀಡಿದರು.

ಡಬಲ್ ಡೆಕ್ಕರ್ ಯೋಜನೆಯ ಬಗ್ಗೆಯೂ ಮಾಹಿತಿ

ಇದೇ ವೇಳೆ ಬೆಂಗಳೂರಿನಲ್ಲಿ ಅನುಷ್ಠಾನಗೊಳ್ಳುತ್ತಿರುವ ಡಬಲ್ ಡೆಕ್ಕರ್ (Double Decker) ಮಾದರಿಯ ಮಹತ್ವದ ಬಗ್ಗೆಯೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಧಾನಿಯವರಿಗೆ ವಿವರಿಸಿದರು. ಈ ಯೋಜನೆಯಿಂದ ನಗರದ ಸಂಚಾರ ವ್ಯವಸ್ಥೆಯಲ್ಲಿ ಆಗಲಿರುವ ಸುಧಾರಣೆ, ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಕಡಿಮೆ ಮಾಡಲು ದೊರೆಯುವ ಅನುಕೂಲಗಳು ಹಾಗೂ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಬಲವರ್ಧನೆಯ ಕುರಿತು ಮಾಹಿತಿ ಹಂಚಿಕೊಂಡರು.

About the Author

Praja Vahini

Editor

View All Posts

Spread the love

Post navigation

Previous: ಬಳಸಿದ ಅಡುಗೆ ಎಣ್ಣೆ ಮರುಬಳಕೆಗೆ ಬ್ರೇಕ್
Next: ಬೆಂಗಳೂರು–ಮಡಗಾಂವ್ ವಂದೇ ಭಾರತ್ ರೈಲಿಗೆ ಚಾಲನೆ

Views:

5

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.