Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಎಸ್‌ಸಿಪಿ ಟಿಎಸ್‌ಪಿ ಅನುದಾನ ಸಮರ್ಪಕವಾಗಿ ಬಳಸಿ: ಸಚಿವ ಟಿ ರಘುಮೂರ್ತಿ ಸೂಚನೆ
  • Bangalore
  • Front news
  • Politics
  • State

ಎಸ್‌ಸಿಪಿ ಟಿಎಸ್‌ಪಿ ಅನುದಾನ ಸಮರ್ಪಕವಾಗಿ ಬಳಸಿ: ಸಚಿವ ಟಿ ರಘುಮೂರ್ತಿ ಸೂಚನೆ

Praja Vahini November 13, 2026 1 minute read
d109f696-adf2-4235-910c-c6fe48590557
Spread the love

ಕೊಪ್ಪಳ: ಎಸ್‌ಸಿಪಿ-ಟಿಎಸ್‌ಪಿ ಅನುದಾನವು ದುರ್ಬಲ ವರ್ಗದವರ ಅಭಿವೃದ್ಧಿಗಾಗಿ ಮೀಸಲಾಗಿದ್ದು, ಅದನ್ನು ಅರ್ಹ ಫಲಾನುಭವಿಗೆ ತಲುಪಿಸುವ ಮೂಲಕ ಅನುದಾನವನ್ನು ಸಮರ್ಪಕವಾಗಿ ಬಳಸಿ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ ರಘುಮೂರ್ತಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತಿಯ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಆಯೋಜಿಸಲಾಗಿದ್ದ ಕರ್ನಾಟಕ ಅನುಸುಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ (ಯೋಜನೆ ರೂಪಿಸುವುದು, ಆರ್ಥಿಕ ಸಂಪನ್ಮೂಲಗಳ ಹಂಚಿಕೆ ಮತ್ತು ಬಳಕೆ) ಅಧಿನಿಯಮ 2013 ರನ್ವಯ ಅನುಸೂಚಿತ ಜಾತಿಗಳು ಉಪಯೋಜನೆ/ಬುಡಕಟ್ಟು ಉಪಯೋಜನೆ ಹಾಗೂ ಪರಿಶಿಷ್ಟ ಜಾತಿ/ವರ್ಗದ ಅಭಿವೃದ್ಧಿ ಕಾರ್ಯಕ್ರಮಗಳ ಅಕ್ಟೋಬರ್ -2026 ರ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರತಿಯೊಂದು ಇಲಾಖೆಯಲ್ಲಿಯೂ ಎಸ್‌ಸಿಪಿ-ಟಿಎಸ್‌ಪಿ ಕಾರ್ಯಕ್ರಮದಡಿ ನಿರ್ದಿಷ್ಟ ಅನುದಾನವನ್ನು ಸರ್ಕಾರ ಮೀಸಲಿಡುತ್ತದೆ. ಅದರಂತೆ ಇಲಾಖಾ ಅಧಿಕಾರಿಗಳು ಅರ್ಹ ಎಲ್ಲ ಫಲಾನುಭವಿಗಳಿಗೆ ಕಾರ್ಯಕ್ರಮದ ಸೌಲಭ್ಯ ಒದಗಿಸಬೇಕು. ಒಬ್ಬರಿಗೆ ಪದೇ ಪದೇ ಅವಕಾಶ ಕೊಡುವುದಕ್ಕಿಂತ ಬೇರೆ ಫಲಾನುಭವಿಗಳಿಗೂ ಅವಕಾಶ ನೀಡಬೇಕು. ಆದ್ದರಿಂದ ಪ್ರತಿ ಆರ್ಥಿಕ ವರ್ಷದಲ್ಲಿ ಕಾರ್ಯಕ್ರಮದ ಕ್ರಿಯಾ ಯೋಜನೆ ತಯಾರಿಸಿ, ಕಳೆದ ಸಾಲಿನ ಫಲಾನುಭವಿಗಳ ಪಟ್ಟಿಯೊಂದಿಗೆ ತಾಳೆ ನೋಡಿ, ಸೌಲಭ್ಯ ವಂಚಿತರಾದವರಿಗೆ ಅವಕಾಶ ನೀಡಬೇಕು. ಇಲಾಖಾ ವ್ಯಾಪ್ತಿಯಲ್ಲಿ ಬರುವ ಫಲಾನುಭವಿಗಳ ಸಂಖ್ಯೆ, ನೀಡುವ ಸೌಲಭ್ಯದ ಕುರಿತು ಆಯಾ ಇಲಾಖಾ ಅಧಿಕಾರಿಗಳಿಗೆ ಎಲ್ಲ ಮಾಹಿತಿ ಇರಬೇಕು ಎಂದು ಅವರು ತಿಳಿಸಿದರು.

ಎಸ್‌ಸಿ-ಎಸ್‌ಟಿ ವಸತಿ ನಿಲಯಗಳಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆ ಇರುವೆಡೆ ವಿದ್ಯಾರ್ಥಿಗಳಿಗೆ ಎಲ್ಲ ಅಗತ್ಯ ಮೂಲಸೌಕರ್ಯ ನೀಡುವುದು ಸವಾಲಾಗಿ ಪರಿಣಮಿಸುತ್ತದೆ. ಆದ್ದರಿಂದ ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಬಾಡಿಗೆ ಕಟ್ಟಡಗಳನ್ನು ಪಡೆದು ಸ್ವಚ್ಛತೆ, ಶುದ್ಧ ಆಹಾರ, ಕುಡಿಯುವ ನೀರು ಸೇರಿದಂತೆ ವಿದ್ಯಾರ್ಥಿಗಳಿಗೆ ಅಗತ್ಯ ಸೌಕರ್ಯ ಒದಗಿಸಬೇಕು. ಸರ್ಕಾರದಿಂದ ನೀಡಲಾಗುವ ಅನುದಾನವನ್ನು ನೇರವಾಗಿ ಫಲಾನುಭವಿಗಳಿಗೆ ತಲುಪಿಸಿ ಎಂದು ಅವರು ಸಂಬoಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ ರಾಘವೇಂದ್ರ ಹಿಟ್ನಾಳ್, ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ, ಜಿಲ್ಲಾ ಪಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಡಿಎಫ್‌ಒ ನಿರ್ಮಲಾ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರು, ವ್ಯವಸ್ಥಾಪಕ ನಿರ್ದೇಶಕರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

 

About the Author

Praja Vahini

Editor

View All Posts

Spread the love

Post navigation

Previous: ಪ್ರಶಾಂತಿ ಕುಟೀರದ 50 ವರ್ಷಗಳ ಸೇವೆಗೆ ಪ್ರಧಾನಿ ಮೋದಿ ಮೆಚ್ಚುಗೆ
Next: ಸಾಮಾಜಿಕ ಸಾಮರಸ್ಯಕ್ಕೆ ಸಚಿವ ಕೆ.ಎಚ್. ಮುನಿಯಪ್ಪ ಕರೆ

Views:

8

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.