Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ₹200 ಕೋಟಿ ವೆಚ್ಚದಲ್ಲಿ ಕೆಂಪೇಗೌಡರ ಸಮಾಧಿ ಸ್ಥಳ ಅಭಿವೃದ್ಧಿ:
  • Bangalore
  • Front news
  • Politics
  • State

₹200 ಕೋಟಿ ವೆಚ್ಚದಲ್ಲಿ ಕೆಂಪೇಗೌಡರ ಸಮಾಧಿ ಸ್ಥಳ ಅಭಿವೃದ್ಧಿ:

Praja Vahini November 17, 2026
IMG_3010
Spread the love

ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಐತಿಹಾಸಿಕ ಸಮಾಧಿ ಸ್ಥಳವನ್ನು ಸುಮಾರು 200 ಕೋಟಿ ರೂ. ವೆಚ್ಚದಲ್ಲಿ ಸಮಗ್ರವಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಕೆಂಪಾಪುರ ಗ್ರಾಮದಲ್ಲಿರುವ ಕೆಂಪೇಗೌಡರ ಸಮಾಧಿ ಸ್ಥಳ ಹಾಗೂ ಸುತ್ತಮುತ್ತಲಿನ ಗ್ರಾಮವನ್ನು ಪ್ರಮುಖ ಪ್ರವಾಸಿ ತಾಣವನ್ನಾಗಿ ರೂಪಿಸುವ ಯೋಜನೆ ಸಿದ್ಧಪಡಿಸಲಾಗಿದೆ.

ಈಗಾಗಲೇ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕೆಂಪಾಪುರ ಗ್ರಾಮವನ್ನು ದತ್ತು ಪಡೆದಿದ್ದು, ಒಟ್ಟು 18 ಎಕರೆ ಪ್ರದೇಶದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಿದೆ. ಡಿಸೆಂಬರ್ 14ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಅಭಿವೃದ್ಧಿ ಕಾಮಗಾರಿಗಳ ಹಿನ್ನೆಲೆಯಲ್ಲಿ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ತಂಡ ಕೆಂಪಾಪುರ ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದೆ. ಶಾಸಕ ಎಚ್.ಸಿ. ಬಾಲಕೃಷ್ಣ, ಮಾಜಿ ಸಂಸದ ಡಿ.ಕೆ. ಸುರೇಶ್, ಬಿಡಿಎ ಆಯುಕ್ತ ಮಣಿವಣ್ಣನ್ ಹಾಗೂ ಜಿಲ್ಲಾಧಿಕಾರಿ ಯಶವಂತ್ ಅವರು ಸ್ಥಳಕ್ಕೆ ಭೇಟಿ ನೀಡಿ ಯೋಜನೆಯ ನೀಲನಕ್ಷೆ ಮತ್ತು ಕಾಮಗಾರಿಗಳ ರೂಪುರೇಷೆ ಕುರಿತು ಚರ್ಚಿಸಿದರು.

ಕೆಂಪೇಗೌಡರ ಐತಿಹಾಸಿಕ ಪರಂಪರೆಯನ್ನು ಸಂರಕ್ಷಿಸುವುದರ ಜತೆಗೆ ಪ್ರವಾಸಿಗರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ ಈ ಪ್ರದೇಶವನ್ನು ಪ್ರಮುಖ ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವುದು ಸರ್ಕಾರದ ಉದ್ದೇಶವಾಗಿದೆ.

ಭೂಸ್ವಾಧೀನಕ್ಕೆ ಗ್ರಾಮಸ್ಥರ ವಿರೋಧ

ಇನ್ನೊಂದೆಡೆ, ಯೋಜನೆಗಾಗಿ ನಡೆಯುತ್ತಿರುವ ಭೂಸ್ವಾಧೀನ ಪ್ರಕ್ರಿಯೆಗೆ ಕೆಂಪಾಪುರ ಗ್ರಾಮಸ್ಥರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಒಟ್ಟು 18 ಎಕರೆ ಭೂಮಿಯಲ್ಲಿ ಈಗಾಗಲೇ 8 ಎಕರೆ ಸ್ವಾಧೀನಪಡಿಸಿಕೊಳ್ಳಲಾಗಿದೆ. ಉಳಿದ 10 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಮೊದಲ ಹಂತದ ಅಧಿಸೂಚನೆ ಹೊರಡಿಸಲಾಗಿದೆ.

ಹೆಚ್ಚುವರಿ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಬೇಕು ಹಾಗೂ ತಮ್ಮ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಸ್ಥಳ ಪರಿಶೀಲನೆಗೆ ಆಗಮಿಸಿದ್ದ ಸಚಿವರು ಮತ್ತು ಅಧಿಕಾರಿಗಳಿಗೆ ಮನವಿ ಸಲ್ಲಿಸಿ ತಮ್ಮ ಆಕ್ಷೇಪಗಳನ್ನು ವ್ಯಕ್ತಪಡಿಸಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಐಪಿಎಲ್‌ಗೆ ಧೋನಿ ನಿವೃತ್ತಿ ಘೋಷಣೆ? ಸಿಎಸ್‌ಕೆ ತಂಡದ ಮೆಂಟರ್ ಆಗಿ ಹೊಸ ಜವಾಬ್ದಾರಿ
Next: 50 ದಿನ ಪೂರೈಸಿದ ‘ಪ್ರೇಮದ ಊರಲಿ’: ಅಮೆಜಾನ್ ಪ್ರೈಮ್‌ನಲ್ಲಿ ಐದು ಭಾಷೆಗಳಲ್ಲಿ ಬಿಡುಗಡೆ

Views:

4

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.