Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • 50 ದಿನ ಪೂರೈಸಿದ ‘ಪ್ರೇಮದ ಊರಲಿ’: ಅಮೆಜಾನ್ ಪ್ರೈಮ್‌ನಲ್ಲಿ ಐದು ಭಾಷೆಗಳಲ್ಲಿ ಬಿಡುಗಡೆ
  • Cinema
  • Front news
  • State

50 ದಿನ ಪೂರೈಸಿದ ‘ಪ್ರೇಮದ ಊರಲಿ’: ಅಮೆಜಾನ್ ಪ್ರೈಮ್‌ನಲ್ಲಿ ಐದು ಭಾಷೆಗಳಲ್ಲಿ ಬಿಡುಗಡೆ

Praja Vahini November 17, 2026 1 minute read
IMG_3011
Spread the love

ಬೆಂಗಳೂರು: ಪ್ರೀತಿ, ಭಾವನೆ, ಕುಟುಂಬ ಸಂಬಂಧಗಳ ಕಥಾಹಂದರ ಹೊಂದಿರುವ ಕನ್ನಡ ಸಿನಿಮಾ ‘ಪ್ರೇಮದ ಊರಲಿ’ ಚಿತ್ರಮಂದಿರಗಳಲ್ಲಿ ಯಶಸ್ವಿ 50 ದಿನಗಳನ್ನು ಪೂರೈಸಿದೆ. ವಿಶೇಷವೆಂದರೆ, ರಾಜ್ಯದ 100ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ 50 ದಿನಗಳ ಪ್ರದರ್ಶನ ಕಂಡಿರುವ ಈ ಚಿತ್ರ ಇದೀಗ ಅಮೆಜಾನ್ ಪ್ರೈಮ್ ವಿಡಿಯೋ ಒಟಿಟಿ ವೇದಿಕೆಯಲ್ಲೂ ಬಿಡುಗಡೆಯಾಗಿ ಪ್ರೇಕ್ಷಕರ ಗಮನ ಸೆಳೆಯುತ್ತಿದೆ.

ಮನೋಜ್ ಕುಮಾರ್ ನಿರ್ದೇಶನದ ಹಾಗೂ ದೇವೇಂದ್ರ ನಿರ್ಮಾಣದ ಈ ಚಿತ್ರ ಸುಮಾರು ಎರಡೂವರೆ ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಾಣಗೊಂಡಿದ್ದು, ಬಾಕ್ಸ್ ಆಫೀಸ್‌ನಲ್ಲಿ 150 ಕೋಟಿ ರೂ.ಗೂ ಅಧಿಕ ಗಳಿಕೆ ಮಾಡಿದೆ ಎಂದು ಚಿತ್ರತಂಡ ತಿಳಿಸಿದೆ. ಅಲ್ಲದೆ, ಅಮೆಜಾನ್ ಪ್ರೈಮ್ ಸಂಸ್ಥೆ ಬರೋಬ್ಬರಿ 10 ಕೋಟಿ ರೂ.ಗೆ ಚಿತ್ರದ ಡಿಜಿಟಲ್ ಹಕ್ಕುಗಳನ್ನು ಖರೀದಿಸಿರುವುದು ವಿಶೇಷವಾಗಿದೆ.

ಕುಟುಂಬ ಮತ್ತು ಭಾವನಾತ್ಮಕ ಕಥೆಗೆ ಪ್ರೇಕ್ಷಕರ ಮೆಚ್ಚುಗೆ

ಸಾಮಾನ್ಯ ಜನರ ಬದುಕಿಗೆ ಹತ್ತಿರವಾಗಿರುವ ಕಥೆ ಹೊಂದಿರುವ ‘ಪ್ರೇಮದ ಊರಲಿ’ ಚಿತ್ರ ಗ್ರಾಮೀಣ ಭಾಗದ ಪ್ರೇಕ್ಷಕರಿಂದಲೂ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಕುಟುಂಬ ಸಂಬಂಧಗಳು, ಪ್ರೀತಿ, ತ್ಯಾಗ, ರೈತರ ಬದುಕು ಹಾಗೂ ಜೀವನದ ಸಂಕಷ್ಟಗಳನ್ನು ಚಿತ್ರದಲ್ಲಿ ಭಾವನಾತ್ಮಕವಾಗಿ ಕಟ್ಟಿಕೊಡಲಾಗಿದೆ. ಅದರಲ್ಲೂ ತಂದೆ-ಮಗನ ನಡುವಿನ ಪ್ರೀತಿ ಚಿತ್ರದ ಪ್ರಮುಖ ಆಕರ್ಷಣೆಯಾಗಿದೆ.

ಶ್ರೀರಾಮ್, ರಮಿಕಾ ಶಿವು, ತಪಸ್ವಿನಿ ಪೂಣಚ್ಚ ಹಾಗೂ ರಂಗಾಯಣ ರಘು ಅವರ ಅಭಿನಯ ಚಿತ್ರಕ್ಕೆ ಮೆರುಗು ನೀಡಿದೆ. ಸಂಗೀತವೂ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ.

ಚಿತ್ರದ 50 ದಿನಗಳ ಯಶಸ್ಸಿನ ಸಂಭ್ರಮವನ್ನು ಚಿತ್ರತಂಡ ಬೆಂಗಳೂರಿನ ಪ್ರಸನ್ನ ಚಿತ್ರಮಂದಿರದಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಿಸಿತು. ಈ ಸಂದರ್ಭದಲ್ಲಿ ನಟರಾದ ಶ್ರೀರಾಮ್, ರಂಗಾಯಣ ರಘು, ರಮಿಕಾ ಹಾಗೂ ತಪಸ್ವಿನಿ ಸೇರಿದಂತೆ ಚಿತ್ರತಂಡದ ಸದಸ್ಯರು ಸಂಭ್ರಮದಲ್ಲಿ ಪಾಲ್ಗೊಂಡಿದ್ದರು.

ಐದು ಭಾಷೆಗಳಲ್ಲಿ ಒಟಿಟಿ ಬಿಡುಗಡೆ

ಚಿತ್ರದ ಮತ್ತೊಂದು ವಿಶೇಷವೆಂದರೆ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಕನ್ನಡ ಸೇರಿದಂತೆ ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ ಸ್ಟ್ರೀಮಿಂಗ್ ಆರಂಭಿಸಿದೆ. ಒಟ್ಟು ಐದು ಭಾಷೆಗಳಲ್ಲಿ ಬಿಡುಗಡೆಯಾಗಿರುವುದರಿಂದ ಚಿತ್ರದ ವ್ಯಾಪ್ತಿ ಕನ್ನಡದಾಚೆಗೂ ವಿಸ್ತರಿಸುವ ನಿರೀಕ್ಷೆಯಿದೆ.

ಕಳೆದ ಎರಡು ವರ್ಷಗಳಿಂದ ಕನ್ನಡ ಚಿತ್ರಗಳ ಖರೀದಿಯಲ್ಲಿ ಆಸಕ್ತಿ ತೋರಿರಲಿಲ್ಲ ಎನ್ನಲಾದ ಅಮೆಜಾನ್ ಪ್ರೈಮ್ ಸಂಸ್ಥೆ ಇದೀಗ ‘ಪ್ರೇಮದ ಊರಲಿ’ ಚಿತ್ರದ ಡಿಜಿಟಲ್ ಹಕ್ಕುಗಳನ್ನು ದೊಡ್ಡ ಮೊತ್ತಕ್ಕೆ ಖರೀದಿಸಿರುವುದು ಕನ್ನಡ ಚಿತ್ರರಂಗದ ಗಮನ ಸೆಳೆದಿದೆ.

ಚಿತ್ರಮಂದಿರಗಳಲ್ಲಿ ಯಶಸ್ಸು ಕಂಡಿರುವ ಈ ಸಿನಿಮಾ ಒಟಿಟಿಯಲ್ಲೂ ಪ್ರೇಕ್ಷಕರ ಮನ ಗೆಲ್ಲುತ್ತದೆಯೇ ಎಂಬ ಕುತೂಹಲ ಮೂಡಿದೆ. ಕನ್ನಡ ಚಿತ್ರಗಳಿಗೂ ರಾಷ್ಟ್ರೀಯ ಮಟ್ಟದ ಒಟಿಟಿ ವೇದಿಕೆಗಳಲ್ಲಿ ಉತ್ತಮ ಮಾರುಕಟ್ಟೆ ಸಿಗಬಹುದು ಎಂಬ ನಿರೀಕ್ಷೆಯನ್ನು ಈ ಬೆಳವಣಿಗೆ ಹೆಚ್ಚಿಸಿದೆ.

About the Author

Praja Vahini

Editor

View All Posts

Spread the love

Post navigation

Previous: ₹200 ಕೋಟಿ ವೆಚ್ಚದಲ್ಲಿ ಕೆಂಪೇಗೌಡರ ಸಮಾಧಿ ಸ್ಥಳ ಅಭಿವೃದ್ಧಿ:
Next: RCB Retention 2027: ನಾಲ್ವರು ಆಟಗಾರರು ಔಟ್?

Views:

6

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.