Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕರ್ನಾಟಕದ ನಾಗರಿಕ ಸೇವಾ ಕೇಂದ್ರಗಳಿಗೆ ಹೊಸ ರೂಪ: ಇನ್ಮುಂದೆ ‘ಪ್ರಜಾ ಸೇವಾ ಕೇಂದ್ರ’
  • Bangalore
  • Front news
  • Politics
  • State

ಕರ್ನಾಟಕದ ನಾಗರಿಕ ಸೇವಾ ಕೇಂದ್ರಗಳಿಗೆ ಹೊಸ ರೂಪ: ಇನ್ಮುಂದೆ ‘ಪ್ರಜಾ ಸೇವಾ ಕೇಂದ್ರ’

Praja Vahini November 20, 2026
IMG_3205
Spread the love

ಬೆಂಗಳೂರು: ಕರ್ನಾಟಕದಾದ್ಯಂತ ಕಾರ್ಯನಿರ್ವಹಿಸುತ್ತಿರುವ ನಾಗರಿಕ ಸೇವಾ ಕೇಂದ್ರಗಳಿಗೆ ರಾಜ್ಯ ಸರ್ಕಾರ ಹೊಸ ಹೆಸರನ್ನು ಘೋಷಿಸಿದೆ. ಇನ್ಮುಂದೆ ಬೆಂಗಳೂರು ಒನ್, ಕರ್ನಾಟಕ ಒನ್ ಹಾಗೂ ಗ್ರಾಮ ಒನ್ ಕೇಂದ್ರಗಳು ‘ಪ್ರಜಾ ಸೇವಾ ಕೇಂದ್ರ’ ಎಂಬ ಏಕೈಕ ಹೆಸರಿನಲ್ಲಿ ಕಾರ್ಯನಿರ್ವಹಿಸಲಿವೆ. ನವೆಂಬರ್ 18, 2026ರಿಂದಲೇ ಈ ಆದೇಶ ಜಾರಿಗೆ ಬಂದಿದ್ದು, ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸೂಚನೆಯ ಮೇರೆಗೆ ಪ್ರಜಾಸೇವಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಅವರು ಈ ಆದೇಶ ಹೊರಡಿಸಿದ್ದಾರೆ.

ರಾಜ್ಯಾದ್ಯಂತ ಒಂದೇ ಹೆಸರು, ಒಂದೇ ಗುರುತು

ಇದುವರೆಗೆ ಬೆಂಗಳೂರು ನಗರದಲ್ಲಿ ಬೆಂಗಳೂರು ಒನ್, ಇತರೆ ನಗರ ಮತ್ತು ಪಟ್ಟಣಗಳಲ್ಲಿ ಕರ್ನಾಟಕ ಒನ್ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಒನ್ ಹೆಸರಿನಲ್ಲಿ ಸಾರ್ವಜನಿಕರಿಗೆ ಸರ್ಕಾರಿ ಸೇವೆಗಳನ್ನು ಒದಗಿಸಲಾಗುತ್ತಿತ್ತು. ಇದೀಗ ಈ ಎಲ್ಲಾ ಕೇಂದ್ರಗಳನ್ನು ಒಂದೇ ಹೆಸರಿನಡಿ ತರುವ ಮೂಲಕ ಸೇವಾ ವಿತರಣೆಯಲ್ಲಿ ಏಕರೂಪತೆ ತರಲು ಸರ್ಕಾರ ಮುಂದಾಗಿದೆ.

ಎಲ್ಲಾ ದಾಖಲೆಗಳಲ್ಲೂ ಹೊಸ ಹೆಸರು ಕಡ್ಡಾಯ

ಸರ್ಕಾರದ ಆದೇಶದಂತೆ ಎಲ್ಲಾ ಕೇಂದ್ರಗಳ ನಾಮಫಲಕಗಳು, ಅಧಿಕೃತ ಪತ್ರ ವ್ಯವಹಾರಗಳು, ವೆಬ್‌ಪೋರ್ಟಲ್‌ಗಳು, ಸಾಫ್ಟ್‌ವೇರ್‌ಗಳು, ಸಾರ್ವಜನಿಕರಿಗೆ ನೀಡುವ ರಸೀದಿಗಳು ಹಾಗೂ ಪ್ರಚಾರ ಸಾಮಗ್ರಿಗಳಲ್ಲಿ ‘ಪ್ರಜಾ ಸೇವಾ ಕೇಂದ್ರ’ ಎಂಬ ಹೆಸರನ್ನೇ ಬಳಸಬೇಕು.

ಏಕರೂಪದ ಲೋಗೋ ಮತ್ತು ಬ್ರ್ಯಾಂಡಿಂಗ್

ರಾಜ್ಯದ ಎಲ್ಲಾ ಕೇಂದ್ರಗಳಿಗೂ ಒಂದೇ ರೀತಿಯ ಲಾಂಛನ, ನಾಮಫಲಕದ ವಿನ್ಯಾಸ ಮತ್ತು ಬಣ್ಣದ ಮಾದರಿಯನ್ನು ರೂಪಿಸಿ ಸರ್ಕಾರದ ಅನುಮೋದನೆ ಪಡೆಯುವಂತೆ ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯಕ್ಕೆ ಸೂಚಿಸಲಾಗಿದೆ. ಕೇಂದ್ರಗಳ ನಿರ್ವಾಹಕರು ಮತ್ತು ಫ್ರಾಂಚೈಸಿಗಳೊಂದಿಗಿನ ಒಪ್ಪಂದಗಳಲ್ಲಿಯೂ ಹೊಸ ಹೆಸರನ್ನು ಅಳವಡಿಸಿಕೊಳ್ಳಬೇಕು ಎಂದು ಆದೇಶಿಸಲಾಗಿದೆ.

ಈ ಬದಲಾವಣೆಯಿಂದ ರಾಜ್ಯದ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿರುವ ನಾಗರಿಕ ಸೇವಾ ಕೇಂದ್ರಗಳಿಗೆ ಒಂದೇ ರೀತಿಯ ಗುರುತು ದೊರೆಯಲಿದೆ. ಸರ್ಕಾರಿ ಸೇವೆಗಳನ್ನು ಜನರಿಗೆ ಸುಲಭವಾಗಿ ತಲುಪಿಸುವುದು, ಆಡಳಿತದಲ್ಲಿ ಪಾರದರ್ಶಕತೆ ಹೆಚ್ಚಿಸುವುದು ಹಾಗೂ ಸೇವಾ ವಿತರಣೆಯನ್ನು ಸರಳಗೊಳಿಸುವುದು ಈ ನಿರ್ಧಾರದ ಪ್ರಮುಖ ಉದ್ದೇಶವಾಗಿದೆ.

About the Author

Praja Vahini

Editor

View All Posts

Spread the love

Post navigation

Previous: ಕಾಂಗ್ರೆಸ್ ಸರ್ಕಾರ: ಬಿ.ವೈ. ವಿಜಯೇಂದ್ರ ವಾಗ್ದಾಳಿ
Next: ಸಮಂತಾಗೆ ಗಂಡು ಮಗು ಜನನ

Views:

4

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.