ಲಾರಿ-ಆಟೋಗಳ ಅಪಘಾತ 6 ಮಂದಿ ಬಲಿ

ಲಾರಿ-ಆಟೋಗಳ ಅಪಘಾತ 6 ಮಂದಿ ಬಲಿ

ಹೊಸಪೇಟೆ: ಇತ್ತೀಚಿಗೆ ರಾಜ್ಯದಲ್ಲಿ ಸರಣಿ ಅಪಘಾತಗಳು ನಡೆಯುತ್ತಿದ್ದು ನ್ಯಾಷನಲ್ ಹೈವೇ ನಲ್ಲಿ ಇಂತಹ ಸರಣಿ ಅಪಘಾತಗಳನ್ನು ತಡೆಯಲು ಸರ್ಕಾರ ಮುಂದಾಗ ಬೇಕಿದೆ.

ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರೀಡ್ಜ್ ಬಳಿ ಎರಡು ಆಟೋ ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ವೇಗವಾಗಿ ಬಂದ ಲಾರಿ ಎರಡು ಆಟೋಗಳಿಗೆ ಡಿಕ್ಕಿ ಹೊಡೆದಿದ್ದು ಆಟೋದಲ್ಲಿದ್ದ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಘಟನೆಯಲ್ಲಿ ಇಬ್ಬರು ಮಕ್ಕಳು ಗಾಯಗೊಂಡಿದ್ದು, ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಳ್ಳಾರಿಯಿಂದ ತುಂಗಭದ್ರಾ ಡ್ಯಾಮ್ ಕಡೆಗೆ ಆಟೋ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಅಪಘಾತ ಬಳಿಕ ಲಾರಿಯನ್ನು ಬಿಟ್ಟು ಲಾರಿ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಹೊಸಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related