64 ಲಕ್ಷ ಜೀವರಾಶಿಗಳಿಗೂ ಬದುಕುವ ಹಕ್ಕಿದೆ: ರಾಮಲಿಂಗಾ ರೆಡ್ಡಿ

64 ಲಕ್ಷ ಜೀವರಾಶಿಗಳಿಗೂ ಬದುಕುವ ಹಕ್ಕಿದೆ: ರಾಮಲಿಂಗಾ ರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಇತ್ತೀಚಿಗೆ ಗೋ ಹತ್ಯೆ ನಿಷೇಧ ಕಾಯ್ದೆ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿಯ ನಡುವೆ ವಾಗ್ದಾಳಿ ಜೋರಾಗಿಯೇ ನಡೆಯುತ್ತಿದೆ.

ಈ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಗ್ದಾಳಿ ಜೋರಾಗಿದೆ. ಇನ್ನು ಗೋಹತ್ಯೆ ನಿಷೇಧ ಕಾಯ್ದೆಯನ್ನು ನಿಷೇಧಿಸಲು ಕಾಂಗ್ರೆಸ್​ ಸರ್ಕಾರ ಮುಂದಾಗಿದೆ ಎಂದು ರಾಜ್ಯ ಬಿಜೆಪಿ ಘಟಕ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತಿದೆ.

ಈ ಸಂಬಂಧ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಾತನಾಡಿ, ಪ್ರಾಣಿಗಳನ್ನು ಕೊಲ್ಲಬಾರದು, ನಾನು ಪ್ರಾಣಿಹತ್ಯೆ ನಿಷೇಧ ಪರ ಇದ್ದೇನೆ. ಆದರೆ ಸಂಪುಟದಲ್ಲಿ ಈ ಬಗ್ಗೆ ಮಾತನಾಡುವುದಿಲ್ಲ. 64 ಲಕ್ಷ ಜೀವ ರಾಶಿಗಳನ್ನೂ ಹತ್ಯೆ ಮಾಡಬಾರದೆಂಬ ನಿಲುವು ನನ್ನದು. 64 ಲಕ್ಷ ಜೀವರಾಶಿಗಳಿಗೂ ಬದುಕುವ ಹಕ್ಕಿದೆ ಎಂದು ಸಾರಿಗೆ ಖಾತೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಗರ ಅಭಿವೃದ್ಧಿ ಬಗ್ಗೆ ಮುಕ್ತವಾಗಿ ಶಾಸಕರ ಜೊತೆ ಮಾತನಾಡುತ್ತೇವೆ. ಈ ಹಿಂದೆ ನಾವಿದ್ದಾಗ ಬಿಬಿಎಂಪಿ ಚುನಾವಣೆ ಸಮಯಕ್ಕೆ ಸರಿಯಾಗಿ ಮಾಡಲಾಗಿತ್ತು. ಈಗಲೂ ಬಿಬಿಎಂಪಿ ಚುನಾವಣೆ ಮಾಡುತ್ತೇವೆ. ಚುನಾಯಿತ ಪ್ರತಿನಿಧಿಗಳಿದ್ದರೆ ಕೆಲಸಗಳು ಸುಲಭವಾಗಿ ಆಗುತ್ತದೆ ಎಂದರು.

 

 

Related