ದೇಶಾದಾದ್ಯಂತ 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ..

ದೇಶಾದಾದ್ಯಂತ 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ..

ಬೆಂಗಳೂರು, ಆ 15 : ಭಾರತ ದೇಶವು 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಾಚರಣೆಯ ಸಡಗರದಲ್ಲಿ  ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ಯ ಷಾ ಮೈದಾನದಲ್ಲಿ ಧ್ವಜಾರೋಹಣವನ್ನ ರಾಜ್ಯದ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆರವೇರಿಸಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು   ಸ್ವಚ್ಛತೆ, ಪೌಷ್ಠಿಕತೆ ಕಾಪಾಡಲು ರೈತರು, ಶ್ರಮಿಕರ ಅಭ್ಯುದಯಕ್ಕಾಗಿ ಕೆಲವು ಕೊಡುಗೆಗಳನ್ನು ನೀಡಲು ಸರ್ಕಾರ ತೀರ್ಮಾನಿಸಿದೆ.  ರಾಜ್ಯದ ಸೈನಿಕರು ಕರ್ತವ್ಯ ನಿರತರಾಗಿದ್ದಾಗ ಮೃತಪಟ್ಟರೆ ಅವರ ಕುಟುಂಬದ ಜೀವನಕ್ಕೆ ಭದ್ರತೆ ಒದಗಿಸುವ ಉದ್ದೇಶದಿಂದ ಮೃತ ಸೈನಿಕರ ಕುಟುಂಬದ ಒಬ್ಬ ಸದಸ್ಯನಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ ನೀಡಲಾಗುವುದು ಎಂದು ಘೋಷಿಸಿದರು.

ಅದಲ್ಲದೆ, ರಾಜ್ಯದಲ್ಲಿ ಹೊಸದಾಗಿ 4050 ಅಂಗನವಾಡಿಗಳು ನಿರ್ಮಾಣಮಾಡಿ, ಈ ಮೂಲಕ  ರಾಜ್ಯದ 16 ಲಕ್ಷ ಕುಟುಂಬಗಳ ಮಕ್ಕಳಿಗೆ ಪೌಷ್ಠಿಕ ಆಹಾರ ಹಾಗೂ ಶಾಲಾ ಪೂರ್ವ ಶಿಕ್ಷಣ ನೀಡಲು ಅವಕಾಶ ಕಲ್ಪಿಸಲಾಗುವುದು. ಇದರಿಂದ  ಮಹಿಳೆಯರಿಗೂ ಉದ್ಯೋಗಾವಕಾಶ ಸಿಗಲಿದೆ ಎಂದು ತಿಳಿಸಿದರು.

ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದಿಂದ ಕುಂಬಾರ, ಕಮ್ಮಾರ, ಬಡಗಿ, ಶಿಲ್ಪಿಗಳು, ಭಜಂತ್ರಿ, ಬುಟ್ಟಿ ಹೆಣೆಯುವವರು, ವಿಶ್ವಕರ್ಮರು, ಮೇದರು ಮತ್ತಿತರ ಕುಶಲ ಕರ್ಮಿಗಳಿಗೆ ತಲಾ 50 ಸಾವಿರ ರೂ. ಸಾಲ ಸಹಾಯ ಧನ ಯೋಜನೆಯನ್ನು ಜಾರಿಗೊಳಿಸಲಿದ್ದೇವೆ ಎಂದು  ಹೇಳಿ,

ಕರ್ನಾಟಕವು ಅಭಿವೃದ್ಧಿಯಲ್ಲಿ ದೇಶದ ಮುಂಚೂಣಿ ರಾಜ್ಯವಾಗಿದೆ. ಮುಂದಿನ ದಿನಗಳಲ್ಲಿ ಸದೃಢ ಕರ್ನಾಟಕವನ್ನು ಕಟ್ಟುವ ಅಮೃತ ಸಂಕಲ್ಪವನ್ನು ಮಾಡೋಣ. ಮುಂದಿನ 25 ವರ್ಷಗಳಲ್ಲಿ ಅದನ್ನು ಸಾಕಾರಗೊಳಿಸೋಣ ಎಂದು ಮುಖ್ಯಮಂತ್ರಿಗಳು ಹೇಳಿದರು.

ರಾಜ್ಯದ ಜನರನ್ನುದ್ದೇಶಿಸಿ ಮಾತನಾಡಿ, ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ತ್ಯಾಗ ಬಲಿದಾನ ಮಾಡಿದ ವೀರರು, ಸೇನಾನಿಗಳು, ಸ್ವಾತಂತ್ರ್ಯ ಹೋರಾಟಗಾರರನ್ನು ನೆನೆಯುತ್ತಾ ಮನೆ-ಮನೆ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಹರ್ ಘರ್ ತಿರಂಗಾ ಅಭಿಯಾನ ಅಮೃತ ಮಹೋತ್ಸವದ ಸಂಭ್ರಮಕ್ಕೆ ಹೆಚ್ಚಿನ ಮೆರಗು ನೀಡಿದೆ ಎಂದರು.

ಇದೇ ಸಂದರ್ಭದಲ್ಲಿ ರಾಜ್ಯದ ಜನತೆಗೆಂದೇ ವಿಶೇಷ ಯೋಜನೆಗಳನ್ನು ಘೋಷಿಸಿದ್ದು, ಅದರಂತೆ  ವಿಶೇಷ ಯೋಜನೆಗಳು ಕಾಲ ಮಿತಿಯಲ್ಲಿ ಅನುಷ್ಠಾನಗೊಳ್ಳುತ್ತಿವೆ. ಅದರಲ್ಲಿ ಅಮೃತ ಶಾಲಾ ಸೌಲಭ್ಯ ಯೋಜನೆ, ಅಮೃತ ಆರೋಗ್ಯ ಮೂಲಭೂತ ಸೌಲಭ್ಯಯೋಜನೆ, ಅಮೃತ ಕೌಶಲ್ಯ ತರಬೇತಿ ಯೋಜನೆ, ಅಮೃತ ರೈತ ಉತ್ಪಾದಕರ ಸಂಸ್ಥೆಗಳ ಯೋಜನೆ, ಅಮೃತ್ ಗ್ರಾಮ ಪಂಚಾಯ್ತಿ ಯೋಜನೆ, ಅಮೃತ ನಿರ್ಮಲ ನಗರ ಯೋಜನೆ, ಅಮೃತ ಗ್ರಾಮೀಣ ವಸತಿ ಯೋಜನೆ,  ಅಮೃತ ಸಮುದಾಯದ ಅಭಿವೃದ್ಧಿ ಯೋಜನೆ,  ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಗಳು ಪ್ರಗತಿ ಹಾದಿಯಲ್ಲಿ ಸಾಗಿವೆ ಎಂದು  ರಾಜ್ಯದ ಜನತೆಗೆ ತಿಳಿಸಿದರು.

Related