8 ಜನ ಸಚಿವರು ಪ್ರಮಾಣ ವಚನ ಸ್ವೀಕಾರ

8 ಜನ ಸಚಿವರು ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ರಾಜ್ಯದಲ್ಲಿಂದು ಸಿದ್ದರಾಮಯ್ಯ ಸಿಎಂ ಆಗಿ ಹಾಗೂ ಡಿಕೆ ಶಿವಕುಮಾರ್  ಅವರು ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡುವ ಸಂದರ್ಭದಲ್ಲಿ ಎಂಟು ಜನ ಸಚಿವ ಸ್ಥಾನಗಳ ಪ್ರಮಾಣವಚನ ಸ್ವೀಕರಿಸಿದರು.

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಹಾಗೂ ಎಂಟು ಮಂದಿ ಸಚಿವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.

ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೃಹತ್ ಜನಸ್ತೋಮ ಹಾಗೂ ರಾಷ್ಟ್ರ ಹಾಗೂ ರಾಜ್ಯ ನಾಯಕರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು.

ಸಚಿವರಾಗಿ ಡಾ.ಜಿ.ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ ಖರ್ಗೆ, ರಾಮಲಿಂಗಾರೆಡ್ಡಿ, ಬಿ.ಝಡ್.ಜಮೀರ್‍ಅಹಮ್ಮದ್ ಖಾನ್ ಪ್ರಮಾಣ ವಚನ ಸ್ವೀಕರಿಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಮುಖರಾದ ರಾಹುಲ್‍ಗಾಂಧಿ, ಪ್ರಿಯಾಂಕ ಗಾಂಧಿ, ಕಾಂಗ್ರೆಸ್ ಆಡಳಿತವಿರುವ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸಕ್ಕು, ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್‍ನಾಥ್, ಎನ್‍ಸಿಪಿ ನಾಯಕ ಶರದ್‍ಪವಾರ್ ಸೇರಿದಂತೆ ಅನೇಕರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದರು.

 

Related