ತುಮಕೂರು ರಸ್ತೆ ಅಪಘಾತದಲ್ಲಿ 9 ಜನ ಪ್ರಯಾಣಿಕರು ಸಾವು….!

  • In Crime
  • August 25, 2022
  • 417 Views
ತುಮಕೂರು ರಸ್ತೆ ಅಪಘಾತದಲ್ಲಿ 9 ಜನ ಪ್ರಯಾಣಿಕರು ಸಾವು….!

ತುಮಕೂರು, ಆಗಸ್ಟ್ 25: ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ನಡೆದ ಭೀಕರ ಅಪಘಾತಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪವನ್ನು ಸೂಚಿಸಿದ್ದಾರೆ. ತುಮಕೂರಿನಲ್ಲಿ ಮುಂಜಾನೆ ನಿಂತಿದ್ದ ಲಾರಿಗೆ ಗುದ್ದಿದ ಕ್ರೂಸರ್ ಗುದ್ದಿದ ಪರಿಣಾಮ 9 ಮಂದಿ ಮೃತಪಟ್ಟಿದ್ದರು. ಘಟನೆಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಮೃತರ ಕುಟುಂಬಕ್ಕೆ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಕರ್ನಾಟಕದ ತುಮಕೂರು ಜಿಲ್ಲೆಯಲ್ಲಿ ನಡೆದ ಅಪಘಾತ ಹೃದಯ ವಿದ್ರಾವಕ. ಅಪಘಾತದಲ್ಲಿ ಜೀವ ಕಳೆದುಕೊಂಡವರಿಗೆ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥನೆ. ಮೃತರ ಕುಟುಂಬದವರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದರು

Related