ವಿಧಾನಸೌಧದಲ್ಲಿ 9ನೇ ಅಂತರರಾಷ್ಟ್ರೀಯ ಯೋಗದಿನಾಚರಣೆ

ವಿಧಾನಸೌಧದಲ್ಲಿ 9ನೇ ಅಂತರರಾಷ್ಟ್ರೀಯ ಯೋಗದಿನಾಚರಣೆ

ಬೆಂಗಳೂರು: ಇಂದು ದೇಶದಾದ್ಯಂತ 9ನೆಯ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲು ಆಗುತ್ತಿದೆ.

9ನೇ ಅಂತರರಾಷ್ಟ್ರೀಯ ಯೋಗದಿನಾಚರಣೆ ಅಂಗವಾಗಿ ಆಯುಷ್ಯ ಇಲಾಖೆ ಇಂದು ವಿಧಾನಸೌಧದ ಮುಂಬಾಗದಲ್ಲಿ ಹಮ್ಮಿಕೊಳ್ಳಲಾಗಿದ್ದ “ಯೋಗ-ವಸುದೈವ ಕುಟುಂಬಕ್ಕಾಗಿ” ಕಾರ್ಯಕ್ರಮವನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ವಿಧಾನಸಭೆಯ ಸಭಾಧ್ಯಕ್ಷರಾದ ಯು ಟಿ ಖಾದರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡುರಾವ್, ಶಾಸಕರುಗಳಾದ ರಿಜ್ವಾನ್ ಅರ್ಷದ್, ಶರವಣನ್, ಕ್ರೀಡಾಪಟುಗಳಾದ ವೆಂಕಟೇಶ್ ಪ್ರಸಾದ್, ಅಂಜು ಬಿ ಜಾರ್ಜ್, ನಟಿ ಭಾವನ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

Related