ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹ

  • In State
  • February 13, 2020
  • 384 Views
ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹ

ಕೆ.ಆರ್.ಪುರ, ಫೆ. 13: ಡಾ.ಸರೋಜಿನಿ ಮಹಿಷಿ ಸಮಿತಿ ವರದಿ ವಿಚಾರದಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ ಎಂದು ಡಾ.ರಾಜ್ ಕುಮಾರ್ ಅಭಿಮಾನಿಗಳ ಬಳಗದವರು ದೂರಿದರು.

ಡಾ.ರಾಜ್ ಕುಮಾರ್ ಅಭಿಮಾನಿಗಳ ಬಳಗದ ವತಿಯಿಂದ ಕೆ.ಆರ್.ಪುರದ ಬಿಬಿಎಂಪಿ ಕಚೇರಿ ಎದುರು ಮತ್ತು ಡಾ.ರಾಜ್ ಕುಮಾರ್ ಬಸ್ ನಿಲ್ದಾಣ ಹಾಗೂ ಪ್ರಮುಖ ಬೀದಿಗಳಲ್ಲಿ ಶಾಂತಿಯುತ ಪ್ರತಿಭಟನೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 1983ರಲ್ಲಿ ರಾಮಕೃಷ್ಣ ಹೆಗಡೆ ನೇತೃತ್ವದ ಸರ್ಕಾರವು ಕರ್ನಾಟಕದಲ್ಲಿ ಕನ್ನಡಿಗರಿಗೆ ಎಷ್ಟು ಪ್ರಾಶಸ್ತ್ಯ ಸಿಗಬೇಕೆಂದು ತಿಳಿಸಲು ಮಾಜಿ ಕೇಂದ್ರ ಸಚಿವೆ ಡಾ.ಸರೋಜಿನಿ ಮಹಿಷಿ ನೇತೃತ್ವದಲ್ಲಿ ಸಮಿತಿ ರಚಿಸಿತ್ತು, ಗೋಪಾಲಕೃಷ್ಣ ಅಡಿಗ ಮೊದಲಾದ 4 ಮಂದಿ ಇದ್ದ ಈ ಸಮಿತಿ 1986ರಲ್ಲಿ ಅಂತಿಮ ವರದಿ ಸಲ್ಲಿಸಿತು. ಒಟ್ಟು 58 ಶಿಫಾರಸುಗಳನ್ನು ಮಾಡಿತು. ಇದರಲ್ಲಿ ರಾಜ್ಯ ಸರ್ಕಾರ 40 ಶಿಫಾರಸುಗಳನ್ನು ಒಪ್ಪಿಕೊಂಡಿದ್ದು ಉಳಿದ ಹಲವು ಪ್ರಮುಖ ಶಿಫಾರಸುಗಳು ಇನ್ನೂ ಗಗನಕುಸುಮವಾಗಿಯೇ ಉಳಿದಿವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಡಾ.ರಾಜ್ ಅಭಿಮಾನಿಗಳ ಬಳಗದ ಕಾರ್ಯದರ್ಶಿ ರಮೇಶ್, ಕನ್ನಡ ವೆಂಕಟೇಶ್, ಉಮೇಶ್, ಕ.ರ.ವೇ ಕೃಷ್ಣಮೂರ್ತಿ, ರಾಮಕೃಷ್ಣ, ರೆ.ನಿರಂಜನ್, ದೇವರಾಜ್, ತೇಜ್ ಕುಮಾರ್, ವೇಣು, ಕನ್ನಡ ರಾಜು, ಶ್ರೀರಾಮಗೌಡ, ಓಂ ಮಹೇಶ್ ಸೇರಿದಂತೆ ಮುಂತಾದವರು ಪಾಲ್ಗೋಂಡರು.

Related