ಭೀಕರ ಅಪಘಾತ ಸ್ಥಳದಲ್ಲೇ ಇಬ್ಬರು ಸಾವು..!!

  • In Crime
  • July 7, 2022
  • 314 Views
ಭೀಕರ ಅಪಘಾತ ಸ್ಥಳದಲ್ಲೇ ಇಬ್ಬರು ಸಾವು..!!

ತುಮಕೂರು, ಜು ೦7 : ತಿಪಟೂರು ತಾಲೂಕಿನ ಬಿದರೆಗುಡಿಯ ಮತ್ತಿಹಳ್ಳಿ ಬಳಿ ಗುರುವಾರ ಬೆಳಗ್ಗೆ ಕೆಎಸ್‌ಆರ್‌ಟಿಸಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಶಿವಮೊಗ್ಗದಿAದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ತುಮಕೂರಿನಿಂದ ಅರಸೀಕೆರೆ ಕಡೆಗೆ ಹೋಗುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಬಸ್ ಮತ್ತು ಕಾರು ಒಂದೊಂದು ದಿಕ್ಕಿನಲ್ಲಿ ರಸ್ತೆಬದಿಯ ಹಳ್ಳಕ್ಕೆ ನುಗ್ಗಿವೆ.

ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರಂತ ಅಂತ್ಯಕAಡಿದ್ದಾರೆ. ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್‌ನಲ್ಲಿದ್ದ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಹೊನ್ನವಳ್ಳಿ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related