ರಾಜ್ಯದಲ್ಲಿ 2,329 ಮಂದಿಗೆ ಕೊರೋನಾ ಸೋಂಕು ದೃಢ..!

  • In Crime
  • August 19, 2022
  • 276 Views
ರಾಜ್ಯದಲ್ಲಿ 2,329 ಮಂದಿಗೆ ಕೊರೋನಾ ಸೋಂಕು ದೃಢ..!

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 2,329 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,36,825ಕ್ಕೆ ಏರಿಕೆಯಾಗಿದೆ.

ಬೆಂಗಳೂರು, ಆ 19 : ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 2,329 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,36,825ಕ್ಕೆ ಏರಿಕೆಯಾಗಿದೆ.

ಇನ್ನು ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ನಾಲ್ವರು ಮೃತಪಟ್ಟಿದ್ದು ಇದರೊಂದಿಗೆ ಸಾವಿನ ಸಂಖ್ಯೆ  40,159ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 1606 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ  18,55,844ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 1,782ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,87,317ಕ್ಕೆ ಏರಿಕೆಯಾಗಿದೆ. ಇನ್ನು ಸಕ್ರಿಯ ಪ್ರಕರಣಗಳ ಸಂಖ್ಯೆ 9307ಕ್ಕೆ ಏರಿಕೆಯಾಗಿದೆ.

Related