5 ಗ್ಯಾರೆಂಟಿ ಜಾರಿ ಅಧಿಕಾರಿಗಳ ಜತೆ ಸಿಎಂ ಸಭೆ

5 ಗ್ಯಾರೆಂಟಿ ಜಾರಿ ಅಧಿಕಾರಿಗಳ ಜತೆ ಸಿಎಂ ಸಭೆ

ಬೆಂಗಳೂರು: ಚುನಾವಣೆಗೆ ಮುನ್ನ ಘೋಷಣೆ ಮಾಡಿರುವ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದರು.

ಐದು ಗ್ಯಾರೆಂಟಿ ಯೋಜನೆಗಳ ಜಾರಿ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಆಹಾರ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಾರಿಗೆ ಇಲಾಖೆ, ಇಂಧನ ಇಲಾಖೆ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಪ್ರಮುಖವಾಗಿ 200 ಯೂನಿಟ್ ಉಚಿತ ವಿದ್ಯುತ್ ಜಾರಿ ಬಗ್ಗೆ ಅಧಿಕಾರಿಗಳಿಂದ ಸಿಎಂ ಸಿದ್ದರಾಮಯ್ಯ ಮಾಹಿತಿ ಪಡೆದಿದ್ದಾರೆ. ಈ ಬಗ್ಗೆ ವಿಸ್ತೃತವಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯಗೆ ಅಧಿಕಾರಿಗಳಿಂದ ಮಾಹಿತಿ

ಉಚಿತ ವಿದ್ಯುತ್​ ಯೋಜನೆಯಿಂದ 2.14 ಕೋಟಿ ಕುಟುಂಬಗಳಿಗೆ ಅನುಕೂಲವಾಗಿದೆ. ವಾರ್ಷಿಕ ಬಳಕೆಗೆ ಅಂದಾಜು 13,575 ಮಿಲಿಯನ್ ಯೂನಿಟ್ ಬೇಕು. ಈ ಯೋಜನೆಗೆ ಇಂಧನ ಶುಲ್ಕ ಅಂದಾಜು 8,008 ಕೋಟಿ ರೂ. ತಗಲುತ್ತದೆ. ಯೋಜನೆಗೆ ಒಟ್ಟು 12,038 ಕೋಟಿ ರೂಪಾಯಿ ಅಗತ್ಯವಿದೆ ಎಂದು ಮಾಹಿತಿ ನೀಡಿದ್ದಾರೆ.

 

Related