ಬೆಂಗಳೂರು: ದೇಶದ ಜನತೆಗೆ ಜುಲೈ ಒಂದನೇ ತಾರೀಖಿನಂದೆ ಜನತೆಗೆ ಗುಡ್ ನ್ಯೂಸ್ ಸಿಕ್ಕಿದೆ.
ಹೌದು, ಸರ್ಕಾರಿ ತೈಲ ಮತ್ತು ಅನಿಲ ಮಾರುಕಟ್ಟೆ ಕಂಪನಿಗಳು ಸತತ 4ನೇ ಬಾರಿಗೆ LPG ಸಿಲಿಂಡರ್ ಬೆಲೆಯನ್ನು ಇಳಿಕೆ ಮಾಡಿದೆ ಇದರಿಂದ ದೇಶದ ಜನತೆಗೆ ಬಹಳ ಅನುಕೂಲವಾಗಿದೆ.
ದೇಶದ ಅತಿದೊಡ್ಡ ತೈಲ ಮಾರುಕಟ್ಟೆ ಕಂಪನಯಾದ ಇಂಡಿಯನ್ ಆಯಿಲ್ ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್ಗಳ ಬೆಲೆಯನ್ನು ಸ್ವಲ್ಪ ಕಡಿಮೆ ಮಾಡಿದೆ. ದೇಶದ ಮೆಟ್ರೋ ನಗರಗಳಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ರೂ.31 ಇಳಿಕೆಯಾಗಿದೆ. ಹೊಸ ಬೆಲೆ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ಆದರೆ, 14.2 ಕೆಜಿ ಸಬ್ಸಿಡಿ ರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆ ಬದಲಾಗಿಲ್ಲ.
ಜುಲೈ 1 ರಿಂದ ಕೋಲ್ಕತ್ತಾದಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ 1,756 ರೂಪಾಯಿಗೆ ಇಳಿಯಲಿದೆ. ಜೂನ್ನಲ್ಲಿ ಕೋಲ್ಕತ್ತಾದಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 1,787 ರೂಪಾಯಿ ಇತ್ತು. ಇದೀಗ 31 ರೂಪಾಯಿ ಇಳಿಕೆಯಾಗಿದೆ.