ಬೆಂಗಳೂರು: ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ವತಿಯಿಂದ ಪತ್ರಿಕೋಧ್ಯಮದಲ್ಲಿ ಎಲೆಕ್ಟ್ರಾನಿಕ್ ಮೀಡಿಯಾ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮವನ್ನ ನಗರದ ವಸಂತನಗರದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಿತು.
ಸಮಾಜ ಕಲ್ಯಾಣ ಇಲಾಖೆಯ ಸಚಿವರಾಗಿರುವಂತ ಡಾ. ಹೆಚ್.ಸಿ.ಮಹದೇವಪ್ಪ ಅವರು ತರಬೇತಿ ಪಡೆದವರಿಗೆ ಪ್ರಮಾಣಪತ್ರವನ್ನು ವಿತರಣೆ ಮಾಡಿದರು.
ಕೆ.ಆರ್.ಪುರಂನಲ್ಲಿರುವ ಶ್ರೀ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯಲ್ಲಿ ವಿದ್ಯಾರ್ಥಿಗಳು ಎರಡು ತಿಂಗಳು ತರಬೇತಿಯನ್ನು ಪಡೆದುಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ರಾಕೇಶ್, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ವ್ಯವಸ್ಥಾಪಕ ನಿರ್ದೇಶಕ ಎನ್.ರಾಜು, ಬೆಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಬೆಳ್ಳಿತಟ್ಟೆ, ಸಂಸ್ಥೆಯ ಸಂಸ್ಥಾಪಕರಾದ ಎನ್.ಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.
