Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ದೇವರ ಮೇಲೆ ನಂಬಿಕೆಯಿಟ್ಟಿರುವ ವ್ಯಕ್ತಿ ನಾನು: ಡಿಸಿಎಂ
  • Bangalore
  • Politics
  • State

ದೇವರ ಮೇಲೆ ನಂಬಿಕೆಯಿಟ್ಟಿರುವ ವ್ಯಕ್ತಿ ನಾನು: ಡಿಸಿಎಂ

admin January 10, 2025
Spread the love

ಬೆಂಗಳೂರು: ಇಂದು ಎಲ್ಲೆಡೆ ವೈಕುಂಠ ಏಕಾದಶಿಯನ್ನು ಬಹಳ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಅದರಂತೆ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮತ್ತು ಅವರ ಧರ್ಮ ಪತ್ನಿಯವರು ಇಂದು ಮಲ್ಲೇಶ್ವರದ ವೆಂಕಟೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹೋಮ ಹವನ ಹಾಗೂ ಇನ್ನಿತರ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ.

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನನ್ನ ರಕ್ಷಣೆಗಾಗಿ, ಮನಸ್ಸಿನ ನೆಮ್ಮದಿಗೆ, ಸಮಾಧಾನಕ್ಕಾಗಿ ಹೋಮ ಮಾಡಿಸಿದ್ದೇನೆ. ನಾನು ಪ್ರತಿದಿನವೂ ಪೂಜೆ, ಹೋಮ, ದೇವರ ದರ್ಶನ ಮಾಡುವ ವ್ಯಕ್ತಿ ಎಂದು ಹೇಳಿದರು. ಇದನ್ನೂ ಓದಿ: ಪತ್ನಿ ಸಮೇತ ಡಿಕೆಶಿ ಟೆಂಪಲ್ ರನ್

ದೇವರ ಮೇಲೆ ನಂಬಿಕೆಯಿಟ್ಟಿರುವ ವ್ಯಕ್ತಿ ನಾನು. ನನಗೆ ಧರ್ಮ, ದೇವರು, ನಮ್ಮ ಆಚರಣೆಗಳ ಮೇಲೆ ನಂಬಿಕೆಯಿದೆ. ಇದರಲ್ಲಿ ಯಾವುದೇ ವಿಶೇಷವಿಲ್ಲ. ನಾನು ಪ್ರತಿದಿನ ದೇವರಿಗೆ ನಮಸ್ಕಾರ ಮಾಡದೇ ಮನೆಯಿಂದ ಹೊರಗೆ ಬರುವುದಿಲ್ಲ. ನಾನು ಯಾವ ಶಕ್ತಿಯನ್ನು ನಂಬುತ್ತೇನೆಯೊ ಅದರ ಮೇಲೆ ಭಕ್ತಿ, ಪ್ರೀತಿ ಇದ್ದೇ ಇರುತ್ತದೆ ಎಂದು ಹೇಳಿದರು.

ನಾನು ಪ್ರತಿ ದಿನವೂ ನನಗೆ ಒಳ್ಳೆಯದಾಗಲಿ ಎಂದು ಪೂಜೆ ಮಾಡುತ್ತಿರುತ್ತೇನೆ. ನನಗೆ ಯಾರ್ಯಾರು ತೊಂದರೆ ಕೊಡುತ್ತಾರೆಯೋ ಅವರಿಂದ ನನಗೆ ರಕ್ಷಣೆ ಸಿಗಲಿ ಎಂದು ಪ್ರಾರ್ಥನೆ ಮಾಡುತ್ತಿರುತ್ತೇನೆ. ಇದರಲ್ಲಿ ಯಾವುದೇ ಮುಚ್ಚುಮರೆಯಿಲ್ಲ ಎಂದರು.

“ನೀವು (ಮಾಧ್ಯಮ)ಗಳು ಸಹ ನನಗೆ ಬೇಕಾದಷ್ಟು ತೊಂದರೆ ಕೊಡುತ್ತಿರುತ್ತೀರಿ. ಇಲ್ಲದೇ ಇರುವ ಹೊಸ ಸುದ್ದಿಗಳನ್ನು ಸೃಷ್ಟಿ ಮಾಡುತ್ತಾ ಇರುತ್ತೀರಿ. ಅದಕ್ಕಾಗಿ ನಿಮ್ಮಿಂದಲೂ ನಮಗೆ ರಕ್ಷಣೆ ಸಿಗಲಿ ಎಂದು ಪ್ರಾರ್ಥನೆ ಮಾಡುತ್ತಿರುತ್ತೇನೆ” ಎಂದು ಹೇಳಿದರು.

“ವೆಂಕಟೇಶ್ವರನ ಜೊತೆ ಲಕ್ಷ್ಮಿ ಸೇರಿದಂತೆ ವೈಕುಂಠ ಏಕಾದಶಿಯ ದಿನದಂದು ಈ ರಾಜ್ಯದ ಎಲ್ಲರ ಮನೆಯಲ್ಲೂ ಐಶ್ವರ್ಯ ಹೆಚ್ಚಾಗಲಿ ಎಂದು ಪ್ರಾರ್ಥಿಸುತ್ತೇನೆ. ಇದು ನಮ್ಮ ನಂಬಿಕೆ, ಆಚಾರ ವಿಚಾರ. ಧರ್ಮೋ ರಕ್ಷತಿ ರಕ್ಷಿತಃ ಅಂದರೆ ಧರ್ಮವನ್ನು ನಾವು ಉಳಿಸಿದರೆ ಧರ್ಮವು ನಮ್ಮನ್ನು ಉಳಿಸುತ್ತದೆ. ವಿಷ್ಣುವಿನ ಸ್ವರೂಪವಾದ ವೆಂಕಟೇಶ್ವರನ ದರ್ಶನವನ್ನು ರಾಜ್ಯದ ನಾನಾ ಕಡೆಗಳಲ್ಲಿ ಜನರು ಮಾಡುತ್ತಿದ್ದಾರೆ. ಎಲ್ಲರಿಗೂ ದೇವರ ಅನುಗ್ರಹ ದೊರೆಯಲಿ” ಎಂದು ಪ್ರಾರ್ಥಿಸಿರುವುದಾಗಿ ಹೇಳಿದರು.

About the Author

admin

Administrator

Visit Website View All Posts

Spread the love

Post navigation

Previous: ಪತ್ನಿ ಸಮೇತ ಡಿಕೆಶಿ ಟೆಂಪಲ್ ರನ್
Next: ಅಗರದಲ್ಲಿ ಅದ್ದೂರಿ ವೈಕುಂಠ ಏಕದಶಿ ಆಚರಣೆ

Views:

14

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.