Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಿ.ಟಿ. ರವಿ ದೊಡ್ಡ ಡ್ರಾಮಾ ಮಾಸ್ಟರ್: ಡಿಸಿಎಂ
  • Politics
  • State

ಸಿ.ಟಿ. ರವಿ ದೊಡ್ಡ ಡ್ರಾಮಾ ಮಾಸ್ಟರ್: ಡಿಸಿಎಂ

admin January 11, 2025
Spread the love

ಶೃಂಗೇರಿ: ಸಿ ಟಿ ರವಿ ಒಬ್ಬ ದೊಡ್ಡ ಡ್ರಾಮಾ ಮಾಸ್ಟರ್. ಸುಳ್ಳಿಗೆ ಸುಳ್ಳು ಪೋಣಿಸಿ ಕತೆ ಹೆಣೆಯುವುದರಲ್ಲಿ ನಿಸ್ಸಿಮ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಟೀಕಿಸಿದ್ದಾರೆ.

ಶೃಂಗೇರಿಯಲ್ಲಿ ಅವರು ಮಾಧ್ಯಮದವರಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು.

ಸಿ.ಟಿ. ರವಿ ದೊಡ್ಡ ಡ್ರಾಮಾ ಮಾಸ್ಟರ್ ಆಗಿದ್ದಾರೆ. ಅವರನ್ನು ರಾಷ್ಟ್ರೀಯ ನಾಯಕರು, ಬಿಜೆಪಿ ರಾಷ್ಟ್ರೀಯ ಪದಾಧಿಕಾರಿ ಎಂದು ಭಾವಿಸಿದ್ದೆ. ಅವರ ಮಾತು, ವಿಚಾರ ನೋಡಿದ ನಂತರ ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತಾರೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಈ ಪ್ರಕರಣದಲ್ಲಿ ಅವರು ಬೇರೆ ಯಾರ ಮಾತು ಕೇಳಬೇಕಿಲ್ಲ. ಅವರ ಆತ್ಮಸಾಕ್ಷಿ ಮಾತನ್ನು ಕೇಳಲಿ. ಆ ರೀತಿ ಮಾತನಾಡಬಾರದಿತ್ತು ಎಂದು ಅವರ ಪಕ್ಷದ ನೂರು ನಾಯಕರು ನನ್ನ ಬಳಿ ಹೇಳಿದ್ದಾರೆ.

ಅಚಾತುರ್ಯವಾಗಿ ಆ ರೀತಿ ಮಾತಾಡಿದ್ದೇನೆ ಕ್ಷಮೆ ಕೇಳುತ್ತೇನೆ ಎಂದಿದ್ದರೆ ಪ್ರಕರಣ ಮುಗಿಯುತ್ತಿತ್ತು. ಅದನ್ನು ಬಿಟ್ಟು ಸುಳ್ಳಿಗೆ ಸುಳ್ಳು ಸೇರಿಸಿಕೊಂಡು ಹೋದರೆ ಪ್ರಯೋಜನವಿಲ್ಲ. ಅವರ ಆರೋಪ ಸುಳ್ಳು. ಅವರದ್ದೇ ಅನೇಕ ತನಿಖಾ ತಂಡಗಳಿವೆಯಲ್ಲ ತನಿಖೆ ಮಾಡಿಸಲಿ” ಎಂದು ಕಿಡಿಕಾರಿದರು. ಇದನ್ನೂ ಓದಿ:

ರವಿಗೆ ಸಾಮಾನ್ಯ ಪರಿಜ್ಞಾನ ಇಲ್ಲ:

ಯಾರಾದರೂ ಮುಖ್ಯಮಂತ್ರಿಗಳ ಬಳಿ ಬಂದು ಶರಣಾಗುವಾಗ ಯಾರಾದರೂ ಬಂದೂಕು ಹಿಡಿದುಕೊಂಡು ಬರುತ್ತಾರಾ? ರವಿಗೆ ಇಷ್ಟು ಸಾಮಾನ್ಯ ಪ್ರಜ್ಞೆ ಇಲ್ಲವೇ? ವೀರಪ್ಪನ್ ಅವರಿಂದ ರಾಜಕುಮಾರ್ ಅವರನ್ನು ಕರೆ ತಂದಾಗ ಬಂದೂಕು ಸಮೇತ ಕರೆತರಲಾಗಿತ್ತೆ? ಈ ವಿಚಾರವನ್ನು ನಿಭಾಯಿಸಲು ಪೊಲೀಸ್ ಇಲಾಖೆ ಇದೆ. ಅವರು ಕೆಲವು ವಿಚಾರಗಳನ್ನು ಗೌಪ್ಯವಾಗಿತ್ತುಕೊಂಡು ಕರ್ತವ್ಯ ನಿಭಾಯಿಸುತ್ತಿದ್ದಾರೆ.

ಅವರ ಕರ್ತವ್ಯದಲ್ಲಿ ನಾವು ಹಸ್ತಕ್ಷೇಪ ಮಾಡುವಂತಿಲ್ಲ. ರಾಜ್ಯವನ್ನು ನಕ್ಸಲ್ ಮುಕ್ತ ಮಾಡಿರುವುದಕ್ಕೆ ಸಂತೋಷಪಡಬೇಕು. ಆದರೆ ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನ ಮಾಡಲಾಗುತ್ತಿದೆ. ಚುನಾವಣೆಗೆ ಇನ್ನು ಸಮಯವಿದೆ. ಚುನಾವಣೆ ಬಂದಾಗ ರಾಜಕೀಯ ಮಾಡಲಿ. ಈಗ ರಾಜ್ಯದ ಪ್ರಗತಿ ಬಗ್ಗೆ ಚರ್ಚೆ ಮಾಡಿ, ರಾಜ್ಯ ಹಾಗೂ ದೇಶ ಉಳಿಸುವ ಕೆಲಸ ಮಾಡೋಣ” ಎಂದು ತಿರುಗೇಟು ನೀಡಿದರು.

About the Author

admin

Administrator

Visit Website View All Posts

Spread the love

Post navigation

Previous: ಮುಂದಿನ ಪೀಳಿಗೆಯ ಉಳಿವಿಗಾಗಿ ಸಾವಯವ ಕೃಷಿ ಅವಶ್ಯಕ: ಕೆ.ಹೆಚ್.ಮುನಿಯಪ್ಪ
Next: ಡಾಂಭರೀಕರಣ ಕಾಮಗಾರಿಗೆ ಚಾಲನೆ

Views:

24

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.