Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅಂತರ್ಜಾತಿ ವಿವಾಹಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಬೇಕು: ಸಿಎಂ
  • Politics
  • State

ಅಂತರ್ಜಾತಿ ವಿವಾಹಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಬೇಕು: ಸಿಎಂ

admin January 13, 2025 1 minute read
Spread the love

ವಿಜಯನಗರ: ಅಂತರ್ಜಾತಿ ವಿವಾಹಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಬೇಕು. ಇದರಿಂದಾಗಿ ಸಮಾಜದಲ್ಲಿನ ಜಾತಿ ವ್ಯವಸ್ಥೆ ಅಳಿದು ಸಮಸಮಾಜ ನಿರ್ಮಾಣ ಸಾದ್ಯವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಜಯನಗರ ಜಿಲ್ಲೆಯಲ್ಲಿ ಆಯೋಜಿಸಲಾಗಿದ್ದ “ಸರ್ವ ಧರ್ಮ ಗಳ ಸಾಮೂಹಿಕ ವಿವಾಹಗಳ ಸಮಾರಂಭ ದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರ್ವಧರ್ಮಗಳ ಸಾಮೂಹಿಕ ವಿವಾಹಗಳ ಸಮಾರಂಭದಲ್ಲಿ ಹೊಸ ಜೀವನಕ್ಕೆ ಕಾಲಿಟ್ಟ 23 ನವವಧುವರ ಜೋಡಿಗಳಿಗೆ  ಶುಭ ಕೋರಿದ ಮುಖ್ಯಮಂತ್ರಿಯವರು, ವಿವಾಹದ ಖರ್ಚುವೆಚ್ಚಗಳನ್ನು ಭರಿಸಲಾಗದ ಬಡಕುಟುಂಬಗಳಿಗೆ ಸಾಮೂಹಿ ವಿವಾಹ ವರದಾನವಾಗಿದೆ. ಸರಳ ಶೈಲಿಯಲ್ಲಿ ವಿವಾಹವಾಗುವ ಪದ್ದತಿಯನ್ನು ಅಳವಡಿಸಿಕೊಳ್ಳಬೇಕು. ಕೆಳವರ್ಗದಲ್ಲಿ ಹುಟ್ಟಿದ ಮಾತ್ರಕ್ಕೆ ಬಡವರಾಗಿಯೇ ಉಳಿಯಬೇಕೆಂಬ ಭಾವನೆ ತಪ್ಪು. ಜಾತ್ಯಾತೀತದ ತತ್ವವನ್ನು ನಮ್ಮ ಸಂವಿಧಾನ ಬೋಧಿಸಿದೆ. ಇದೇ ಆಶಯವನ್ನು ವ್ಯಕ್ತಪಡಿಸಿದ ಬಸವಣ್ಣವರು, ಜಾತಿಆಧಾರಿತ ಸಮಾಜ ವ್ಯವಸ್ಥೆ ಸಾಧುವಲ್ಲ ಎಂದು ಪ್ರತಿಪಾದಿಸಿದ್ದರು. ‘ದಯವೇ ಧರ್ಮದ ಮೂಲವಯ್ಯ’ ಎಂದು ನುಡಿದು, ಉದಾತ್ತ ತತ್ವವನ್ನು ಬೋಧಿಸಿದ ಬಸವಣ್ಣನವರನ್ನು ಸರ್ಕಾರ ‘ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿದೆ ಎಂದರು.

ಮನುಷ್ಯ ವಿಶ್ವಮಾನವನಾಗಬೇಕು

ಮನುಷ್ಯ ಹುಟ್ಟುವಾಗ ವಿಶ್ವಮಾನವನಾಗಿದ್ದು, ಜಾತಿಧರ್ಮಗಳ ಬಂಧನದದಲ್ಲಿ ಸಿಲುಕಿ ಅಲ್ಪಮಾನವನಾಗುತ್ತಾನೆ. ಆದ್ದರಿಂದ ವಿಶ್ವಮಾನವರಾಗುವ ಮೂಲಕ ಸಮಾನಕ್ಕೆ ಕೊಡುಗೆ ನೀಡಬೇಕಾಗಿದೆ. ಬಸವಣ್ಣನವರ ಕಾಲದಲ್ಲಿಯೇ ಅಂತರಜಾತಿ ವಿವಾಹ ಪದ್ಧತಿ ಪ್ರಚಲಿತವಾಗಿತ್ತು.  ಇತರ ಧರ್ಮಗಳನ್ನೂ ಗೌರವಿಸುವ ವ್ಯವಸ್ಥೆ ಸಮಾಜದಲ್ಲಿರಬೇಕು. ಚಲನೆರಹಿತವಾದ ಜಾತಿವ್ಯವಸ್ಥೆಯಲ್ಲಿ ನಾವಿದ್ದೇವೆ. ಆರ್ಥಿಕ ಹಾಗೂ ಸಾಮಾಜಿಕ ಸ್ವಾವಲಂಬನೆಯಿಂದ ಚಲನೆಯಿಲ್ಲದ ಸಮಾಜಕ್ಕೆ ಜೀವಬರುತ್ತದೆ ಎಂದರು.

ಗ್ಯಾರಂಟಿ ಯೋಜನೆಗಳು

ಹೆಣ್ಣುಮಕ್ಕಳಿಗೆ ಶಕ್ತಿತುಂಬುವ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಯಶಸ್ವಿಯಾಗಿ ಜಾರಿಗೊಳಿಸಿದೆ. ಇಂದು ವಿವಾಹ ಬಂಧನಕ್ಕೊಳಗಾದ ಮಹಿಳೆಯರಿಗೂ ಸರ್ಕಾರದ ಗ್ಯಾರಂಟಿಗಳು ತಲುಪವಂತಾಗಬೇಕು ಎಂದರು.

 

About the Author

admin

Administrator

Visit Website View All Posts

Spread the love

Post navigation

Previous: ಊಹಾ ಪತ್ರಿಕೋದ್ಯಮ ವ್ಯಾಪಕವಾಗುತ್ತಿರುವುದು ಅಪಾಯಕಾರಿ: ಸಿಎಂ
Next: ಅಧಿಕಾರಿ, ಇಬ್ಬರು ಲೈನ್ ಮ್ಯಾನಗಳ ಮೇಲೆ ಹಲ್ಲೆ, ದೂರು ದಾಖಲು

Views:

12

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.