ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಇಂದು (ಸೋಮವಾರ ಜ. 20) ರಂದು ಬೆಂಗಳೂರಿನ ಶ್ರೀಕ್ಷೇತ್ರ ಆದಿ ಚುಂಚನಗಿರಿ ಮಠಕ್ಕೆ ಭೇಟಿ ನೀಡಿ, ಪೀಠಾಧ್ಯಕ್ಷ ಪರಮಪೂಜ್ಯ ಡಾ. ಶ್ರೀಶ್ರೀಶ್ರೀ ನಿರ್ಮಲಾನಂದನಾಥ ಮಹಾಸ್ವಾಮಿಗಳವರ ಆಶೀರ್ವಾದ ಪಡೆದರು.
ನಾಡಿನ ಶೈಕ್ಷಣಿಕ, ಆಧ್ಯಾತ್ಮಿಕ ಸೇವೆಯ ಮೂಲಕ ಮಾರ್ಗದರ್ಶನ ನೀಡುತ್ತಿರುವ ಪರಮಪೂಜ್ಯರ ಆಶೀರ್ವಾದವು ಚೈತನ್ಯಪೂರ್ವಕ ಆತ್ಮವಿಶ್ವಾಸ ಮೂಡಿಸಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಕಾರ್ಯಕರ್ತರ ರಕ್ಷಣೆ ಮಾಡುವುದು ನನ್ನ ಮೊದಲ ಕರ್ತವ್ಯ: ಡಿಕೆಶಿ
ಮಾಜಿ ಸಚಿವ ಹಾಗೂ ಶಾಸಕ ಕೆ.ಗೋಪಾಲಯ್ಯ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ನಗರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಅವರು ಸೇರಿದಂತೆ ಸ್ಥಳೀಯ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
