Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನೀವು ಅನಧಿಕೃತ ಜಾಹೀರಾತು ಅಂಟಿಸ್ತೀರಾ? ಹಾಗಿದ್ರೆ ಇನ್ಮುಂದೆ ಹುಷಾರ್..!
  • Bangalore
  • State

ನೀವು ಅನಧಿಕೃತ ಜಾಹೀರಾತು ಅಂಟಿಸ್ತೀರಾ? ಹಾಗಿದ್ರೆ ಇನ್ಮುಂದೆ ಹುಷಾರ್..!

admin January 27, 2025 1 minute read
Spread the love

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳನ್ನು ಅಳವಡಿಸಿರುವವರ ಮೇಲೆ ಎಫ್.ಐ.ಆರ್ ದಾಖಲಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಇಂದು (ಸೋಮವಾರ ಜ. 27) ರಂದು ಪಾಲಿಕೆ ಕೇಂದ್ರ ಕಛೇರಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳನ್ನು ತಡೆಯಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಾಲಿಕೆಯ ಎಲ್ಲಾ 8 ವಲಯಗಳಲ್ಲಿಯೂ ಅನಧಿಕೃತ ಜಾಹೀರಾತುಗಳನ್ನು ಅಳವಡಿಸಿರುವುದನ್ನು ಗುರುತಿಸಿ ಕೂಡಲೆ ಅದನ್ನು ತೆರವುಗೊಳಿಸಬೇಕು. ಜೊತೆಗೆ ಅನಧಿಕೃತ ಜಾಹೀರಾತು ಅಳವಡಿಸಿರುವವರ ಮೇಲೆ ಎಫ್.ಐ.ಆರ್ ದಾಖಲಿಸಬೇಕೆಂದು ಸೂಚಿಸಲಾಯಿತು. ಇದನ್ನೂ ಓದಿ: ಕ್ಯಾಲೆಂಡರ್ ನಲ್ಲಿ ಜಲಮಂಡಳಿಯ 60ವರ್ಷಗಳ ಸಾರ್ಥಕ ಸೇವೆಯ ಅನಾವರಣ

ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡಿ:

ಪಾಲಿಕೆ ವ್ಯಾಪ್ತಿಯ 8 ವಲಯಗಳಲ್ಲಿ ಸಮೀಕ್ಷೆಯ ಮೂಲಕ 27655 ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸಲಾಗಿದೆ. ಗುರುತಿಸಿರುವ ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡಿ ಅವರಿಗೆ ನಿಗದಿಪಡಿಸಿರುವ ಸ್ಥಳದಲ್ಲೇ ಮಾರಾಟ ಮಾಡಲು ಕ್ರಮವಹಿಸಬೇಕೆಂದು ಸೂಚನೆ ನೀಡಲಾಯಿತು.

ಒಂಟಿ ಮನೆ ಯೋಜನೆ ಅನುಷ್ಠಾನ:

ನಗರದಲ್ಲಿ ಒಂಟಿ ಮನೆ ಯೋಜನೆಗಳಿಗೆ ಅರ್ಜಿಗಳನ್ನು ಸಲ್ಲಿಸಿರುವ ಪೈಕಿ, ಅರ್ಹ ಫಲಾನುಭವಿಗಳನ್ನು ಕೂಡಲೆ ಗುರುತಿಸಬೇಕು. ಅನಂತರ ಹಂತ-ಹಂತವಾಗಿ ಅನುದಾನ ಬಿಡುಗಡೆಗೊಳಿಸಲು ಅಗತ್ಯ ಕ್ರಮವಹಿಸಬೇಕೆಂದು ಸೂಚನೆ ನೀಡಲಾಯಿತು.

ಈ ವೇಳೆ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಡಾ. ಕೆ ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಅವಿನಾಶ್ ಮೆನನ್ ರಾಜೇಂದ್ರನ್, ಪ್ರಿತಿ ಗೆಹ್ಲೋಟ್, ವಲಯ ಆಯುಕ್ತರಾದ ಸತೀಶ್, ಅರ್ಚನಾ, ಸ್ನೇಹಲ್, ವಿನತ್ ಪ್ರಿಯಾ, ರಮ್ಯಾ, ರಮೇಶ್, ಕರೀಗೌಡ, ಪ್ರಧಾನ ಅಭಿಯಂತರರು, ಮುಖ್ಯ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

About the Author

admin

Administrator

Visit Website View All Posts

Spread the love

Post navigation

Previous: ಕ್ಯಾಲೆಂಡರ್ ನಲ್ಲಿ ಜಲಮಂಡಳಿಯ 60ವರ್ಷಗಳ ಸಾರ್ಥಕ ಸೇವೆಯ ಅನಾವರಣ
Next: ಬಿಬಿಕೆ 11ರ ಟ್ರೋಫಿ ಗೆದ್ದಿರುವ ಹನುಮಂತನಿಗೆ ಕೂಡಿಬಂತಾ ಕಂಕಣ ಭಾಗ್ಯ?

Views:

14

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.