ಬೆಂಗಳೂರು: ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಅನಾರೋಗ್ಯದಿಂದ ಕಳೆದ ತಿಂಗಳು ವಿದೇಶಕ್ಕೆ ಹೋಗಿ ತಮ್ಮ ಶಸ್ತ್ರ ಚಿಕಿತ್ಸೆ ಮುಗಿಸಿಕೊಂಡು ಕೆಲ ದಿನಗಳ ಹಿಂದೆ ಕರ್ನಾಟಕಕ್ಕೆ ಆಗಮಿಸಿದ್ದಾರೆ.
ಇನ್ನು ಆರೋಗ್ಯ ಸಮಸ್ಯೆಯಿಂದ ಹೊರ ಬಂದಿರುವ ನಟ ಶಿವರಾಜ್ ಕುಮಾರ್ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಸಂಪೂರ್ಣವಾಗಿ ಚೇತರಿಸಿಕೊಂಡ ಶಿವರಾಜಕುಮಾರ್ ರವರು ಇದೀಗ ಸರಿಗಮಪ ರಿಯಾಲಿಟಿ ಶೋಗೆ ಆಗಮಿಸಿದ್ದು, ಶಿವರಾಜ್ ಕುಮಾರ್ ಅವರ ಅಭಿಮಾನಿಗಳಿಗೆ ಫುಲ್ ಖುಷಿಯಾಗಿದೆ. ಇದನ್ನೂ ಓದಿ: ಕೇಂದ್ರ ರಾಜ್ಯ ಸೇರಿ ಹೊಸ ಕೃಷಿ ಆರ್ಥಿಕ ನೀತಿ ತರಬೇಕು: ಬೊಮ್ಮಾಯಿ
ಹೌದು, ನಟ ಶಿವರಾಜ್ ಕುಮಾರ್ ಅವರು ಜೀ ಕನ್ನಡದಲ್ಲಿ ಪ್ರಸಾರವಾಗುವ ಸರಿಗಮಪ ಕಾರ್ಯಕ್ರಮಕ್ಕೆ ಆಗಮಿಸಿದ್ದು ಈ ವೇದಿಕೆಯಲ್ಲಿ ನಟ ಶಿವರಾಜ್ ಕುಮಾರ್ ಅವರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು ಹೇಳಿಕೊಂಡಿದ್ದಾರೆ.
ಇನ್ನು ಶಿವರಾಜ್ಕುಮಾರ್ ಜೀ ಕನ್ನಡದ ಜೊತೆ ಒಳ್ಳೆಯ ಒಡನಾಟ ಇದೆ. ಈ ಮೊದಲು ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ರಿಯಾಲಿಟಿ ಶೋಗೆ ಅವರು ಜಡ್ಜ್ ಆಗಿದ್ದರು.
ಸರಿಗಮಪ ವೇದಿಕೆ ಮೇಲೆ ಶಿವರಾಜ್ಕುಮಾರ್, ಗೀತಾ ಶಿವರಾಜ್ಕುಮಾರ್ ಆಗಮಿಸಿದ್ದಾರೆ. ‘ಜೀವನವನ್ನು ಗೆದ್ದು ಬಂದತಹ ನಿಜವಾದ ಗೆಲುವಿನ ಸರದಾರರು’ ಎಂದು ಅನುಶ್ರೀ ಅವರು ಶಿವಣ್ಣನ ಎಂಟ್ರಿಗೆ ಡೈಲಾಗ್ ಹೊಡೆದಿದ್ದಾರೆ. ಶಿವರಾಜ್ಕುಮಾರ್ ಅವರು ಆಗಮಿಸುತ್ತಿದ್ದಂತೆ ವೇದಿಕೆ ಮೇಲಿದ್ದ ತಾರಾ, ಶ್ರುತಿ ಆ್ಯಂಕರ್ ಅನುಶ್ರೀ ಕಣ್ಣೀರು ಹಾಕಿದ್ದಾರೆ. ಅವರನ್ನು ತಬ್ಬಿ ಸ್ವಾಗತಿಸಿದ್ದಾರೆ. ಅವರ ಆರೋಗ್ಯ ವಿಚಾರಿಸಿಕೊಂಡಿದ್ದಾರೆ.
