ಬೆಂಗಳೂರು: ಸರ್ವೋದಯ ದಿನಾಚರಣೆ ಅಂಗವಾಗಿ ಮಾನ್ಯ ಆಡಳಿತಗಾರರಾದ ಎಸ್.ಆರ್ ಉಮಾಶಂಕರ್, ಮಾನ್ಯ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ನಗರದ ಮಹಾತ್ಮ ಗಾಂಧೀಜಿ ರಸ್ತೆಯಲ್ಲಿರುವ ಗಾಂಧೀಜಿ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.
ಸರ್ವಧರ್ಮ ಪ್ರಾರ್ಥನಾ ಕಾರ್ಯಕ್ರಮದಲ್ಲಿ ಪ್ರತಿಭಾ ಬಾಲಮಂದಿರ ಮಕ್ಕಳಿಂದ ಗೀತ ವಾಚನ, ದೀಪಿಕಾ ಶ್ರೀಕಾಂತ್ ರವರಿಂದ ವೈಷ್ಣವ ಜನತೋ, ಹಡ್ಸನ್ ಚರ್ಚಿನ ಫಾದರ್ ರೆವೆರೆಂಡ್ ಆಲ್ಫ್ರೆಡ್ ಸುದರ್ಶನ್ ಮತ್ತು ತಂಡದಿಂದ ಬೈಬಲ್ ವಾಚನ, ಗುರುದ್ವಾರದ ಶ್ರೀ ಗುರುಸಿಂಗ್ ಸಭಾ ಮತ್ತು ತಂಡದವರಿಂದ ಗುರು ಗ್ರಂಥ ವಾಚನ, ಮೌಲ್ವಿ ಹಫೀಜ್ ಶಾಬೀರ್ ಹುಸೇನ್ ರವರಿಂದ ಖುರಾನಿನ ವಾಚನ ಮಾಡಲಾಯಿತು. ಇದನ್ನೂ ಓದಿ: ಸರಿಗಮಪ ಶೋಗೆ ಎಂಟ್ರಿ ಕೊಟ್ಟ ಹ್ಯಾಟ್ರಿಕ್ ಹೀರೋ
ಈ ವೇಳೆ ಮಾಜಿ ಸಚಿವರಾದ ಶ್ರೀ ರಾಮಚಂದ್ರಗೌಡ, ಮಾಜಿ ಮಹಾಪೌರರಾದ ಶ್ರೀ ರಾಮಚಂದ್ರ, ಶ್ರೀ ಹುಚ್ಚಪ್ಪ, ಶ್ರೀ ಬಿ.ಎಸ್ ಸತ್ಯನಾರಾಯಣ, ಶ್ರೀಮತಿ ಪದ್ಮಾವತಿ, ವಿಶೇಷ ಆಯುಕ್ತರಾದ ಡಾ. ಕೆ ಹರೀಶ್ ಕುಮಾರ್, ವಲಯ ಆಯುಕ್ತರಾದ ಸ್ನೇಹಲ್, ಜಂಟಿ ಆಯುಕ್ತರಾದ ಸರೋಜಾ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
