ವರುಣ: ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸುತ್ತೂರು ಗ್ರಾಮದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಶ್ರೀ ಮಹರ್ಷಿ ವಾಲ್ಮೀಕಿ ಸಮುದಾಯ ಭವನದ ಶಂಕು ಸ್ಥಾಪನೆಯನ್ನು ಇಂದು (ಶುಕ್ರವಾರ ಜ. 31) ರಂದು ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯ ನೆರವೇರಿಸಿದರು. ಇದನ್ನೂ ಓದಿ: ನೂತನ ಬಿಜೆಪಿ ಜಿಲ್ಲಾಧ್ಯಕ್ಷ ವಿಭೂತಿಹಳ್ಳಿ ಕ್ಷಮೆಕೊರಬೇಕು
ಈ ಸಂದರ್ಭದಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಎಂ.ಬಿ.ಪಾಟೀಲ್, ಎಚ್.ಕೆ.ಪಾಟೀಲ್, ಎನ್.ಎಸ್.ಬೋಸರಾಜು, ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಶಾಸಕ ಮಂಜುನಾಥ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
