ದೆಹಲಿ: ಇಂದು ಕೇಂದ್ರ ಬಜೆಟ್ ಮಂಡನೆ ಆಗುತ್ತಿದ್ದು, ಈ ಬಜೆಟ್ ಮಂಡನೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಮಹಿಳೆಯರಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗಿದೆ.
ಉದ್ಯಮ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಹಿಳೆಯರು ಉನ್ನತ ಸ್ಥಾನಕ್ಕೆ ಏರಿಸುವ ಉದ್ದೇಶದಿಂದ ಬಜೆಟ್ ಮಂಡನೆಯಲ್ಲಿ ಮಹಿಳೆಯರಿಗೆಂದೇ ಹೊಸ ಯೋಜನೆಗಳನ್ನು ಜಾರಿಗೊಳಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ಇದು ಬಡವರ ಬಜೆಟ್: ಸೀತಾರಾಮನ್
ಹೌದು, ನಿರ್ಮಲಾ ಸೀತಾರಾಮನ್ ಇಂದು (ಶನಿವಾರ ಫೆಬ್ರವರಿ 01) ಬಜೆಟ್ ಮಂಡಿಸುತ್ತಿದ್ದಾರೆ. ಈ ಬಜೆಟ್ ನಲ್ಲಿ ಮಹಿಳೆಯರಿಗೆ ಹೆಚ್ಚು ಆದ್ಯತೆ ನೀಡಲಾಗಿದೆ. ಮುಂದಿನ 5ವರ್ಷಗಳಲ್ಲಿ 5 ಲಕ್ಷ ಮಹಿಳಾ ಉದ್ಯಮಿಗಳಿಗೆ 2 ಕೋಟಿ ರೂ ವರೆಗಿನ ಅವಧಿ ಸಾಲವನ್ನು ನೀಡಲು ಸರ್ಕಾರವು ಯೋಜಿಸಿದ್ದು, ಇದು ಮಹಿಳಾ ಉದ್ದಿಮೆದಾರರಿಗೆ ಅನುಕೂಲವಾಗಲಿದೆ.
ಈ ಯೋಜನೆಯು ಎಸ್ಸಿ/ಎಸ್ಟಿ ಹಾಗೂ ಮಹಿಳಾ ಉದ್ಯಮಿಗಳು ಹೊಸ ವ್ಯವಹಾರಗಳನ್ನು ಪ್ರಾರಂಭಿಸಲು ಸಾಲ ಸೌಲಭ್ಯ, ಸಬ್ಸಿಡಿಗಳು ಮತ್ತು ಮಾರ್ಕೆಟಿಂಗ್ ನೆರವು ಸೇರಿದಂತೆ ವಿವಿಧ ಪ್ರಯೋಜನಗಳನ್ನು ಇದು ಒದಗಿಸುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
