ಉತ್ತರ ಪ್ರದೇಶ: ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕುಟುಂಬ ಸಮೇತರಾಗಿ ಭಾಗಿಯಾಗಿದ್ದು, ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ.
144 ವರ್ಷಗಳಿಗೊಮ್ಮೆ ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಾಗಿಯಾಗಿದ್ದು, ಇಂದು(ಫೆಬ್ರವರಿ 09) ಪತ್ನಿ ಉಷಾ ಅವರ ಜೊತೆಯಲ್ಲಿ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು. ಈಗಾಗಲೇ ಡಿಕೆಶಿ ಪುತ್ರಿ ಐಶ್ವರ್ಯಾ ಅವರು ಪ್ರಯಾಗ್ರಾಜ್ಗೆ ತೆರಳಿ ಪವಿತ್ರ ಸ್ನಾನ ಮಾಡಿದ್ದರು. ಈಗ ಡಿಕೆಶಿ ದಂಪತಿ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದ್ದಾರೆ.
