Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಕ್ಷಣಾ ಕ್ಷೇತ್ರದಲ್ಲಿ ‘ಆತ್ಮನಿರ್ಭರ’ವನ್ನಾಗಿ ಮಾಡಲು ಎಲ್ಲಾ ಕ್ರಮ : ರಕ್ಷಣಾ ಸಚಿವ ರಾಜನಾಥ್ ಸಿಂಗ್
  • Bangalore
  • Front news
  • Politics
  • State

ರಕ್ಷಣಾ ಕ್ಷೇತ್ರದಲ್ಲಿ ‘ಆತ್ಮನಿರ್ಭರ’ವನ್ನಾಗಿ ಮಾಡಲು ಎಲ್ಲಾ ಕ್ರಮ : ರಕ್ಷಣಾ ಸಚಿವ ರಾಜನಾಥ್ ಸಿಂಗ್

admin February 10, 2025 1 minute read
Spread the love

ಬೆಂಗಳೂರು:  ಸೋಮವಾರ, ಫೆಬ್ರವರಿ 10, 2025*ಭಾರತೀಯ ರಕ್ಷಣಾ ಪರಿಸರ ವ್ಯವಸ್ಥೆಯು ನೀಡುವ ಅವಕಾಶಗಳನ್ನು ಬಳಸಿಕೊಂಡು ಇಂದಿನ ಸವಾಲುಗಳಿಗೆ ಪರಿಹಾರಗಳನ್ನು ಕಂಡುಕೊಳ್ಳುವಂತೆ ಜಾಗತಿಕ ಮೂಲ ಸಲಕರಣೆ ತಯಾರಕರುಗಳಿಗೆ (OEM) ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಕರೆ.

ದುರ್ಬಲವಾದ ಜಾಗತಿಕ ಭದ್ರತಾ ಪರಿಸ್ಥಿತಿಯ ನಡುವೆಯೂ ನಿರಂತರವಾಗಿ ಪರಿಹಾರಗಳನ್ನು ಅಳವಡಿಸಿಕೊಳ್ಳುವ ಮತ್ತು ಸುಧಾರಿಸುವ ಅಗತ್ಯತೆ ಪ್ರತಿಪಾದನೆ

“ಸರ್ಕಾರವು ಸಶಸ್ತ್ರ ಪಡೆಗಳನ್ನು ಸಜ್ಜುಗೊಳಿಸಲು ಮತ್ತು ರಾಷ್ಟ್ರವನ್ನು ರಕ್ಷಣಾ ಕ್ಷೇತ್ರದಲ್ಲಿ ‘ಆತ್ಮನಿರ್ಭರ’ವನ್ನಾಗಿ ಮಾಡಲು ಎಲ್ಲಾ ಕ್ರಮ”

ಭಾರತೀಯ ರಕ್ಷಣಾ ಪರಿಸರ ವ್ಯವಸ್ಥೆಯು ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಿರುವ ಹಿನ್ನೆಲೆಯಲ್ಲಿ ಇದು ನೀಡುತ್ತಿರುವ ಅವಕಾಶಗಳನ್ನು ಬಳಸಿಕೊಳ್ಳುವಂತೆ ಮತ್ತು ಇಂದಿನ ಅಸ್ಥಿರ ಭೌಗೋಳಿಕ ರಾಜಕೀಯ ಸ್ಥಿತಿಯಿಂದಾಗಿ ಉಂಟಾಗುತ್ತಿರುವ ಸವಾಲುಗಳಿಗೆ ಉದ್ದೇಶಿತ ಪರಿಹಾರಗಳನ್ನು ಕಂಡುಕೊಳ್ಳುವಂತೆ ಜಾಗತಿಕ ಮೂಲ ಸಲಕರಣೆ ತಯಾರಕರುಗಳಿಗೆ (OEM ) ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಕರೆ ಕೊಟ್ಟಿದ್ದಾರೆ.

ಅವರು ಫೆಬ್ರವರಿ 10, 2025 ರಂದು ಕರ್ನಾಟಕದ ಬೆಂಗಳೂರಿನಲ್ಲಿ ಏರೋ ಇಂಡಿಯಾ 2025 ರ ಭಾಗವಾಗಿ ಆಯೋಜಿಸಲಾದ ಸಿಇಒಗಳ ದುಂಡುಮೇಜಿನ ಸಭೆಯಲ್ಲಿ ಮಾತನಾಡುತ್ತಿದ್ದರು. ಭದ್ರತೆ ದುರ್ಬಲವಾಗಿದ್ದರೆ ಶಾಂತಿ ಸ್ಥಾಪಿಸಲು ಸಾಧ್ಯವಿಲ್ಲ. ಇಂದು ತಂತ್ರಜ್ಞಾನಗಳು ಹೊಸ ಅವಕಾಶಗಳ ಬಾಗಿಲನ್ನು ತೆರೆಯುತ್ತಿವೆ. ಇದರ ನಡುವೆಯೇ, ಭದ್ರತೆಗೆ ಸವಾಲಯ ಹಾಕುವ ಪರಿಸ್ಥಿತಿ ಇದ್ದು, ಇವುಗಳನ್ನು ಹಿಮ್ಮೆಟ್ಟಲು ನಿರಂತರವಾಗಿ ಪರಿಹಾರಗಳನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ. ಭದ್ರತೆಯನ್ನು ಬಲಿಷ್ಠವಾಗಿಸಿದರೆ ಮಾತ್ರ ನಾವು ಉತ್ತಮ ಜಗತ್ತಿಗಾಗಿ ಕೆಲಸ ಮಾಡಲು ಸಾಧ್ಯ ಎಂದು ರಕ್ಷಣಾ ಸಚಿವ ಹೇಳಿದರು.

“ಇಂದು, ಮಿಲಿಟರಿ ಕಾರ್ಯಾಚರಣೆಗಳಲ್ಲಿ ಸಂವಹನ ಮತ್ತು ದತ್ತಾಂಶ ಹಂಚಿಕೆಯ ಸ್ವರೂಪವು ಹೆಚ್ಚು ಸಂಕೀರ್ಣವಾಗುತ್ತಿದೆ. ಬಾಹ್ಯಾಕಾಶ ಆಧರಿತ ವ್ಯವಸ್ಥೆಗಳು, ಸಂವಹನ ಮತ್ತು ಕಣ್ಗಾವಲುಗಳ ಮೇಲೆ ಹೆಚ್ಚಿನ ಅವಲಂಬನೆಯನ್ನು ಹೊಂದಿವೆ. ಈ ಹಿನ್ನೆಲೆಯಲ್ಲಿ, ನಮ್ಮ ಕಾರ್ಯಾಚರಣೆಯ ಯೋಜನೆಗಳಲ್ಲಿ ಇವುಗಳ ಅಳವಡಿಕೆಯನ್ನು ಇನ್ನಷ್ಟು ಬಲಗೊಳಿಸಬೇಕಿದೆ. ಮಾನವಸಹಿತ, ಮಾನವರಹಿತ ಮತ್ತು ಸ್ವಾಯತ್ತ ಯುದ್ಧ ವ್ಯವಸ್ಥೆಗಳ ಸಮಗ್ರ ಪ್ರಯತ್ನಗಳ ಮೇಲೆ ಡ್ರೋನ್‌ಗಳ ಬಳಕೆಯ ಅಗತ್ಯತೆಯನ್ನು ಇತ್ತೀಚಿನ ಸಂಘರ್ಷಗಳು ನಮಗೆ ತೋರಿಸಿಕೊಟ್ಟಿವೆ. ಆದ್ದರಿಂದ, ನಮ್ಮ ರಕ್ಷಣಾ ಉತ್ಪಾದನೆಯು ಈ ಉದಯೋನ್ಮುಖ ಸವಾಲುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ನಡೆಯಬೇಕಿದೆ. ಇವುಗಳತ್ತ ನಾವು ದೃಷ್ಟಿ ಇಡಬೇಕಾಗಿದೆ ಎಂದು ಶ್ರೀ ರಾಜನಾಥ್ ಸಿಂಗ್ ಹೇಳಿದರು.

ಮಹಾನ್ ಭಾರತೀಯ ತಂತ್ರಜ್ಞ ಕೌಟಿಲ್ಯ ಅವರನ್ನು ಉಲ್ಲೇಖಿಸಿದ ರಕ್ಷಣಾ ಸಚಿವರು, “ನಮ್ಮ ಜನರು ಮತ್ತು ಪ್ರದೇಶವನ್ನು ಪ್ರತಿಕೂಲ ವಾತಾವರಣದಲ್ಲಿ ರಕ್ಷಿಸುವ ನೈತಿಕ ಜವಾಬ್ದಾರಿ ನಮಗಿದೆ. ಇದನ್ನು ಸಾಧಿಸಲು, ನಮ್ಮ ಸಶಸ್ತ್ರ ಪಡೆಗಳನ್ನು ಸಜ್ಜುಗೊಳಿಸಲು ಮತ್ತು ಬಲವಾದ, ಪರಿಣಾಮಕಾರಿ, ಸ್ಥಿತಿಸ್ಥಾಪಕ ಮತ್ತು ಭವಿಷ್ಯಕ್ಕೆ ಸಿದ್ಧವಾದ ರಕ್ಷಣಾ ಕೈಗಾರಿಕಾ ಪರಿಸರ ವ್ಯವಸ್ಥೆಯನ್ನು ಸ್ಥಾಪಿಸುವ ಮೂಲಕ ದೇಶವನ್ನು ರಕ್ಷಣಾ ಉತ್ಪಾದನೆಯಲ್ಲಿ ಸ್ವಾವಲಂಬಿಯನ್ನಾಗಿ ಮಾಡಲು ನಾವು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದು ನುಡಿದರು.

ಪ್ರಧಾನಿ ಶ್ರೀ ನರೇಂದ್ರ ಮೋದಿ ನೇತೃತ್ವದ ಭಾರತ ಸರ್ಕಾರವು ಪಾರದರ್ಶಕ ಮತ್ತು ಉದ್ಯಮ ಸ್ನೇಹಿ ನಿಯಮಗಳು, ಪ್ರಕ್ರಿಯೆಗಳು ಮತ್ತು ನೀತಿಗಳನ್ನು ಜಾರಿಗೆ ತಂದಿವೆ ಎಂದು ಶ್ರೀ ರಾಜನಾಥ್ ಸಿಂಗ್ ಪ್ರತಿಪಾದಿಸಿದರು. ಭಾರತೀಯ ರಕ್ಷಣಾ ಪರಿಸರ ವ್ಯವಸ್ಥೆಯು ಒದಗಿಸುವ ಅವಕಾಶಗಳು ರಕ್ಷಣಾ ಉತ್ಪಾದನೆಯಲ್ಲಿ ಸ್ವಾವಲಂಬನೆಯ ನೀತಿಗಳಿಂದ ನಡೆಸಲ್ಪಡುತ್ತವೆ, ಅನುಕೂಲಕರ ನೀತಿ ಆಡಳಿತದಿಂದ ಸುಗಮಗೊಳಿಸಲ್ಪಡುತ್ತವೆ ಎಂದು ಅವರು ಒತ್ತಿ ಹೇಳಿದರು.

 

About the Author

admin

Administrator

Visit Website View All Posts

Spread the love

Post navigation

Previous: 8ನೇ ವರ್ಷದ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮ
Next: ನಮ್ಮ ಮೆಟ್ರೋ ಶೇ. 46% ದರ ಹೆಚ್ಚಿಸಿದ್ದನ್ನು ಖಂಡಿಸಿ ಪ್ರತಿಭಟನೆ

Views:

16

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.