ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಂಕ್ಕೆ ಬಂದ ಮೇಲೆ ಬೆಂಗಳೂರು ನಗರವನ್ನು ಬ್ರಾಂಡ್ ಬೆಂಗಳೂರು ಮಾಡುತ್ತೇವೆ ಎಂದು ಈಗಾಗಲೇ ಹಲವಾರು ಕಾಮಗಾರಿಗಳನ್ನು ಮಾಡುತ್ತಿದ್ದು, ಇದರ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು (ಭಾನುವಾರ ಫೆ. 16) ರಂದು ವಿವಿಧಗಳಲ್ಲಿ ರೋಡ್ ಗಳ ಗುಣಮಟ್ಟವನ್ನು ಪರಿಶೀಲಿಸಿದ್ದಾರೆ.
ಹೌದು, ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಅವರು ಭಾನುವಾರ ಹಲವು ಏರಿಯಾಗಳಲ್ಲಿ ತಾವೇ ಟೇಪ್ ಹಿಡಿದು ವೈಟ್ ಟಾಪಿಂಗ್ ರೋಡ್ ಗಳ ಗುಣಮಟ್ಟವನ್ನು ಪರಿಶೀಲಿಸುವ ಮೂಲಕ ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ಕರೆದು ಮಾತುಕತೆ ನಡೆಸಿದ್ದಾರೆ. ಇದನ್ನೂ ಓದಿ: ಮಾತೃ ಪಕ್ಷಕ್ಕೆ ಸೇರ್ಪಡೆಯಾದ ಎಲ್ ಆರ್ ಶಿವರಾಮೇಗೌಡ
ಬ್ರ್ಯಾಂಡ್ ಬೆಂಗಳೂರಿನ ಪರಿಕಲ್ಪನೆಯಡಿಯಲ್ಲಿ ರಾಜಧಾನಿಯ ರಸ್ತೆಗಳನ್ನ ವೈಟ್ ಟಾಪಿಂಗ್ ಮಾಡಲು ಮುಂದಾಗಿತ್ತು. ಇತ್ತ ಕಳೆದ 2-3 ತಿಂಗಳ ಹಿಂದಷ್ಟೇ ಬೆಂಗಳೂರಿನ ಹಲವೆಡೆ ವೈಟ್ ಟಾಪಿಂಗ್ ಕಾಮಗಾರಿಗಳಿಗೆ ಚಾಲನೆ ನೀಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್, (ಫೆ.16) ರಂದು ಬಿಬಿಎಂಪಿಯ ಅಧಿಕಾರಿಗಳ ಜೊತೆ ಸೇರಿ ನಗರದ ಹಲವೆಡೆ ನಡೆಯುತ್ತಿರೋ ವೈಟ್ ಟಾಪಿಂಗ್ ಕಾಮಗಾರಿಗಳನ್ನ ಪರಿಶೀಲಿಸಿದರು.
