Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮಿನಿ ತಾರಾಲಯಕ್ಕೆ 12.88, ವಸತಿ ಶಾಲೆಗಳಿಗೆ 44 ಕೋಟಿ ವೆಚ್ಚಕ್ಕೆ ಅಸ್ತು: ಎಂ ಬಿ ಪಾಟೀಲ
  • Bangalore
  • Politics
  • State

ಮಿನಿ ತಾರಾಲಯಕ್ಕೆ 12.88, ವಸತಿ ಶಾಲೆಗಳಿಗೆ 44 ಕೋಟಿ ವೆಚ್ಚಕ್ಕೆ ಅಸ್ತು: ಎಂ ಬಿ ಪಾಟೀಲ

admin February 22, 2025 1 minute read
Spread the love

ಬೆಂಗಳೂರು: ವಿಜಯಪುರದಲ್ಲಿ ಉಪಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಕಿರು ತಾರಾಲಯ (ಮಿನಿ ಪ್ಲಾನೆಟೇರಿಯಂ) ಹಾಗೂ ಬಬಲೇಶ್ವರ ಮತ್ತು ವಿಜಯಪುರದಲ್ಲಿ 2 ಹಾಸ್ಟೆಲ್ ಗಳ ನಿರ್ಮಾಣಕ್ಕೆ ಒಟ್ಟು ₹56.88 ಕೋಟಿ ವ್ಯಯಿಸಲು ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರು, 2015-16ನೇ ಸಾಲಿನ ಬಜೆಟ್ಟಿನಲ್ಲೇ ವಿಜಯಪುರವೂ ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಉಪಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಕಿರು ತಾರಾಲಯ ಸ್ಥಾಪಿಸುವ ಘೋಷಣೆ ಮಾಡಲಾಗಿತ್ತು. ಆದರೆ ಕಾರಣಾಂತರಗಳಿಂದ ಇದು ಅನುಷ್ಠಾನಕ್ಕೆ ಬರಲಿಲ್ಲ. ಈಗ ₹12.88 ಕೋಟಿಗೆ ಪರಿಷ್ಕೃತ ಅಂದಾಜು ಪಟ್ಟಿ ಸಿದ್ಧಪಡಿಸಿದ್ದು, ಇದಕ್ಕೆ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಒಪ್ಪಿಗೆ ಕೊಡಲಾಗಿದೆ. ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಮೂಲಕ ಈ ಯೋಜನೆ ಕಾರ್ಯಗತಗೊಳ್ಳಲಿದೆ ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ನ ಸಿದ್ದಾಂತಗಳನ್ನು ಬಲಪಡಿಸಬೇಕು: ಮುನಿಯಪ್ಪ

ವಿಜಯಪುರದಲ್ಲಿ ಈ ಯೋಜನೆಯ ಕಾಮಗಾರಿಗೆ ಇದುವರೆಗೆ 1.44 ಕೋಟಿ ರೂ. ವೆಚ್ಚವಾಗಿದೆ. ತಾರಾಲಯದಲ್ಲಿ ಡೋಮ್, ಪ್ರೊಜಕ್ಷನ್ ಸಿಸ್ಟಂ, ಒಳಾಂಗಣ, ಹೊರಾಂಗಣ ವಿಜ್ಞಾನ ಪ್ರದರ್ಶಿಕೆಗಳು, ಆಡಿಯೋ ವ್ಯವಸ್ಥೆ, ಹವಾ ನಿಯಂತ್ರಣ ವ್ಯವಸ್ಥೆ ಎಲ್ಲವೂ ಇರಲಿದೆ. ಇದರ ಮೂಲಕ ಜಿಲ್ಲೆಯ ವಿದ್ಯಾರ್ಥಿಗಳಲ್ಲಿ ವಿಜ್ಞಾನದ ತಿಳಿವಳಿಕೆಯನ್ನು ಹೆಚ್ಚಿಸಲಾಗುವುದು. ನನೆಗುದಿಗೆ ಬಿದ್ದಿದ್ದ ಈ ಯೋಜನೆಯನ್ನು ಅನುಷ್ಠಾನಗೊಳಿಸುವಂತೆ ತಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನ ಸೆಳೆದಿದ್ದಾಗಿ ಅವರು ತಿಳಿಸಿದ್ದಾರೆ.

2 ವಸತಿ ಶಾಲೆಗಳಿಗೆ ಸ್ವಂತ ಕಟ್ಟಡ

ಬಬಲೇಶ್ವರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮಮದಾಪುರದಲ್ಲಿರುವ, ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಡಾ.ಬಿ ಆರ್ ಅಂಬೇಡ್ಕರ್ ವಸತಿ ಶಾಲೆ ಮತ್ತು ವಿಜಯಪುರದಲ್ಲಿರುವ ವಸತಿಸಹಿತ ಪದವಿಪೂರ್ವ ಕಾಲೇಜಿಗೆ ಸ್ವಂತ ಕಟ್ಟಡಕ್ಕಾಗಿ ತಲಾ 22 ಕೋಟಿ ರೂ.ಗಳಂತೆ ಒಟ್ಟು 44 ಕೋಟಿ ರೂ. ಒದಗಿಸಲು ಕೂಡ ಸಂಪುಟ ಸಭೆಯಲ್ಲಿ ಹಸಿರು ನಿಶಾನೆ ಸಿಕ್ಕಿದೆ ಎಂದು ಪಾಟೀಲ ತಿಳಿಸಿದ್ದಾರೆ.

ಈ ಎರಡೂ ವಸತಿ ಶಾಲೆಗಳು ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಮೀಸಲಾಗಿದ್ದು, ಇಲ್ಲಿ ತಲಾ 250ರಂತೆ ಒಟ್ಟು 500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈಗ ಇವು ಬಾಡಿಗೆ ಕಟ್ಟಡದಲ್ಲಿ ಇರುವುದರಿಂದ ಮೂಲಸೌಕರ್ಯ ಒದಗಿಸಲು ಸಾಧ್ಯವಾಗಿಲ್ಲ. ಹೊಸ ಕಟ್ಟಡಗಳಲ್ಲಿ ಶಾಲಾ ಕಟ್ಟಡ, ಬಾಲಕರ ಮತ್ತು ಬಾಲಕಿಯರ ಹಾಸ್ಟೆಲ್, ಭೋಜನಾಲಯ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ವಸತಿ ಗೃಹಗಳು, ರಂಗಮಂದಿರ, ಕಾಂಪೌಂಡ್, ಸೋಲಾರ್ ವಾಟರ್ ಹೀಟರ್, ಒಳಚರಂಡಿ ವ್ಯವಸ್ಥೆ ಮುಂತಾದವು ಇರಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

 

About the Author

admin

Administrator

Visit Website View All Posts

Spread the love

Post navigation

Previous: ಕಾಂಗ್ರೆಸ್ ನ ಸಿದ್ದಾಂತಗಳನ್ನು ಬಲಪಡಿಸಬೇಕು: ಮುನಿಯಪ್ಪ
Next: ಆಕಸ್ಮಿಕ ಅಗ್ನಿ ಅನಾಹುತಕ್ಕೆ ತುರ್ತಾಗಿ ಬೇಕಿದೆ ಜಲವಾಹನ

Views:

28

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.