ಬೆಂಗಳೂರು: ನಾಡಿನಾದ್ಯಂತ ಮಹಾಶಿವರಾತ್ರಿ ಹಬ್ಬವನ್ನು ಬಹಳ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಬೆಂಗಳೂರಿನ ನಗರದಾದ್ಯಂತ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸುವ ಮೂಲಕ ಮಹಾಶಿವರಾತ್ರಿ ಹಬ್ಬವನ್ನು ಆಚರಿಸಲಾಯಿತು.
ಇನ್ನು ಸರ್ಜಾಪುರ ರೋಡ್ ಅಗರ ಗ್ರಾಮದಲ್ಲಿರುವಂತಹ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಇದನ್ನೂ ಓದಿ: ಮಹಾ ಶಿವರಾತ್ರಿ ಸಂಭ್ರಮ
ಈ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತಾದಿಗಳು ಸರತಿ ಸಾಲಿನಲ್ಲಿ ನಿಂತು ದೇವರ ಆಶೀರ್ವಾದ ಪಡೆದರು. ಶಿವನ ಮೂರ್ತಿಗೆ ಹಾಲಿನ ಅಭಿಷೇಕ ಮಾಡುವ ಮೂಲಕ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಇನ್ನು ಎಲ್ಲ ಬಂದಂತಹ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆಯನ್ನು ಕೂಡ ಮಾಡಲಾಗಿತ್ತು.
