ಬೆಂಗಳೂರು: ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರ ಅನುದಾನದಿಂದ ಬೆಂಗಳೂರು ಸ್ಮಾರ್ಟ್ ಸಿಟಿ ಲಿ. ವತಿಯಿಂದ ಜವಾಹರ್ ಲಾಲ್ ನೆಹರು ತಾರಾಲಯ ಆವರಣದಲ್ಲಿ ನಿರ್ಮಿಸಿರುವ “ಯು.ಆರ್ ರಾವ್ ಭವನ” ವನ್ನು ಸನ್ಮಾನ್ಯ ಉಪ ಮುಖ್ಯ ಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವಾರದ ಡಿ.ಕೆ ಶಿವಕುಮಾರ್ ರವರು ಉದ್ಘಾಟಿಸಿದರು.
ಬೆಂಗಳೂರು ನಗರದ ಸಮೀಪವಿರುವ ಜವಹಾರ್ ಲಾಲ್ ನೆಹರು ತಾರಾಲಯವು ಭಾರತ ದೇಶದ ಐದು ತಾರಾಲಯಗಳ ಪೈಕಿ ಒಂದಾಗಿರುತ್ತದೆ. ಸ್ಮಾರ್ಟ್ ಸಿಟಿ ಮೀಷನ್ ಯೋಜನೆಯಡಿಯಲ್ಲಿ ಬೆಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ ಜವಾಹರ್ ಲಾಲ್ ನೆಹರು ತಾರಾಲಯದ ಆವರಣದಲ್ಲಿ ನೂತನವಾಗಿ ಐಜಿಬಿಸಿ ಗ್ರೀನ್ ಬಿಲ್ಡಿಂಗ್ ಪರಿಸರ ಸ್ನೇಹಿ ಮಾದರಿಯಲ್ಲಿ ಹೊಸ ಕಟ್ಟಡ ನಿರ್ಮಾಣಗೊಳಿಸಲಾಗಿದೆ. ಇದನ್ನೂ ಓದಿ: ಕೌಶಲ್ಯ ಅಭಿವೃದ್ಧಿ ನಿಗಮವತಿಯಿಂದ ಬೃಹತ್ ಉದ್ಯೋಗ ಮೇಳ
ಈ ವೇಳೆ ವಿಧಾನಸಭಾಧ್ಯಕ್ಷರಾದ ಶ್ರೀ ಯು ಟಿ ಖಾದರ್, ವಿಧಾನ ಪರಿಷತ್ ಸಭಾಪತಿಗಳಾದ ಶ್ರೀ ಬಸವರಾಜ ಹೊರಟ್ಟಿ, ಸಚಿವರುಗಳಾದ ಶ್ರೀ ಬೋಸರಾಜ್, ಶ್ರೀ ಕೃಷ್ಣ ಬೈರೇಗೌಡ, ಶ್ರೀ ಪ್ರಿಯಾಂಕ್ ಖರ್ಗೆ, ಡಾ. ಎಂ ಸಿ ಸುಧಾಕರ್, ಬೇಸ್ ಸಂಸ್ಥೆ ಅಧ್ಯಕ್ಷರಾದ ಶ್ರೀ ಕಿರಣ್ ಕುಮಾರ್, ಶಾಸಕರಾದ ಶ್ರೀ ರಿಜ್ವಾನ್ ಅರ್ಶದ್, ಶ್ರೀ ಸಲೀಂ ಅಹ್ಮದ್, ಆಡಳಿತಗಾರರಾದ ಉಮಾಶಂಕರ್, ಐಟಿ-ಬಿಟಿ ಇಲಾಖೆಯ ಕಾರ್ಯದರ್ಶಿಯಾದ ಏಕ್ ರೂಪ ಖೌರ್, ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಮತ್ತಿತರರು ಭಾಗವಹಿಸಿದ್ದರು.
