Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬದ್ಧತೆ ಹಾಗೂ ಶಿಸ್ತಿನಿಂದ ಕಲಿತರೆ, ಸಿ.ವಿ ರಾಮನ್, ಕಲ್ಪನಾ ಚಾವ್ಲಾರಂತೆ ಸಾಧನೆ ಮಾಡಬಹುದು: ಡಿಸಿಎಂ
  • Bangalore
  • Politics
  • State

ಬದ್ಧತೆ ಹಾಗೂ ಶಿಸ್ತಿನಿಂದ ಕಲಿತರೆ, ಸಿ.ವಿ ರಾಮನ್, ಕಲ್ಪನಾ ಚಾವ್ಲಾರಂತೆ ಸಾಧನೆ ಮಾಡಬಹುದು: ಡಿಸಿಎಂ

admin February 28, 2025 1 minute read
Spread the love

ಬೆಂಗಳೂರು: ಜೀವನದಲ್ಲಿ ಬದ್ಧತೆ ಹಾಗೂ ಶಿಸ್ತಿನಿಂದ ವಿದ್ಯಾಭ್ಯಾಸ ಮಾಡಿದರೆ ನೀವೂ ಸಿ.ವಿ ರಾಮನ್, ಕಲ್ಪನಾ ಚಾವ್ಲಾ, ಸುನಿತಾ ವಿಲಿಯಮ್ಸ್, ರಾಕೇಶ್ ಶರ್ಮಾರಂತೆ ಸಾಧನೆ ಮಾಡಬಹುದು. ಗುರಿ ಮುಟ್ಟುವ ಆತ್ಮವಿಶ್ವಾಸ ಬೆಳೆಸಿಕೊಳ್ಳಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಕ್ಕಳಿಗೆ ಕಿವಿಮಾತು ಹೇಳಿದರು.

ಬೆಂಗಳೂರಿನ ನೆಹರೂ ತಾರಾಲಯದಲ್ಲಿ ನೂತನವಾಗಿ ನಿರ್ಮಿಸಿರುವ ಪ್ರೊ. ಯು.ಆರ್. ರಾವ್ ಭವನದ ಉದ್ಘಾಟನೆ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಮಾತನಾಡಿದರು.

ಇಲ್ಲಿ ನೀವೆಲ್ಲರೂ ಅನೇಕ ವಿಜ್ಞಾನಿಗಳನ್ನು ನೋಡಿದ್ದೀರಿ. ನೀವು ಕೂಡ ಅವರಂತೆಯೇ ಸಾಧನೆ ಮಾಡಬಹುದು. ಯಾರೂ ಯಾರಿಗಿಂತ ಕಡಿಮೆ ಇಲ್ಲ. ನೀವು ಯಶಸ್ಸು ಸಾಧಿಸಬೇಕಾದರೆ, ಸಾಧನೆಯ ಕನಸು ಕಾಣಬೇಕು, ಆ ಕನಸು ಈಡೇರಿಸಲು ಇಚ್ಚೆ ಇರಬೇಕು, ಬದ್ಧತೆ, ಶಿಸ್ತು ಹೊಂದಿರಬೇಕು. ಆಗ ಮಾತ್ರ ಸಾಧನೆ ಸಾಧ್ಯ. ಈಗ ಸಾಧನೆ ಮಾಡಿರುವ ಅನೇಕ ವಿಜ್ಞಾನಿಗಳು ನಿಮ್ಮಂತೆಯೇ ಹುಟ್ಟಿ ಬೆಳೆದವರು. ನಿಮಗೆ ಇರುವಷ್ಟು ಅವಕಾಶ, ಸೌಲಭ್ಯಗಳು ಅವರಿಗೆ ಇರಲಿಲ್ಲ. ಆದರೂ ಅವರು ಸಾಧನೆ ಮಾಡಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಯು.ಆರ್ ರಾವ್ ಭವನ ಉದ್ಘಾಟಣೆ

ಶುಭಂ ಕರೋತಿ ಕಲ್ಯಾಣಂ-ಆರೋಗ್ಯಂ ಧನಸಂಪಾದ | ಜ್ಞಾನಶಕ್ತಿ ಸ್ವರೂಪಸ್ಯ, ದೀಪ ಜ್ಯೋತಿ ಪ್ರಕಾಶಿತಂ ಎಂಬ ಶ್ಲೋಕದ ಆಶಯದಂತೆ ನಿಮ್ಮೆಲ್ಲರಿಗೂ ಮಂಗಳವಾಗಲಿ, ಜ್ಞಾನ ಹೆಚ್ಚಾಗಲಿ ಎಂದು ಈ ಕಾರ್ಯಕ್ರಮದಲ್ಲಿ ಈ ಜ್ಯೋತಿ ಬೆಳಗಿಸಲಾಗಿದೆ. ಗಾಂಧಿಜಿ ಅವರ ವಿಜ್ಞಾನದ ವಿಚಾರ ಹಾಗೂ ನೆಹರೂ ಅವರ ಚಿಂತನೆ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಈ ಭವನಕ್ಕೆ ಯು.ಆರ್. ರಾವ್ ಅವರ ಹೆಸರು ಇಡಲಾಗಿದೆ. ಸಿ.ವಿ. ರಾಮನ್ ಅವರನ್ನು ನಾವು ಸ್ಮರಿಸಿದ್ದೇವೆ. ನಾವು ನಮ್ಮ ಮೂಲವನ್ನು ಮರೆಯಬಾರದು. ಮರೆತರೆ ಫಲ ಸಿಗುವುದಿಲ್ಲ. ವಿಜ್ಞಾನ ಕ್ಷೇತ್ರದ ಮಹಾಸಾಧಕರು ಹಾಕಿಕೊಟ್ಟಿರುವ ಬುನಾದಿ ಮೇಲೆ ನಾವು ಮುಂದೆ ಸಾಗಬೇಕು” ಎಂದರು.

 

About the Author

admin

Administrator

Visit Website View All Posts

Spread the love

Post navigation

Previous: ಯು.ಆರ್ ರಾವ್ ಭವನ ಉದ್ಘಾಟಣೆ
Next: ಸಿಎಂ ಭೇಟಿ ಮಾಡಿದ ಬಿಜೆಪಿ ಶಾಸಕರು ಹಾಗೂ ಸಂಸದರು

Views:

13

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.