ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದ್ದು ಈ ಯೋಜನೆಗಳು ಈಗಾಗಲೇ ರಾಜ್ಯದಲ್ಲಿರುವ ಜನತೆಯ ಮನ ಗೆದ್ದಿರುವ ಜೊತೆಗೆ ಬಡ ಹಾಗೂ ಮಾಧ್ಯಮ ಕುಟುಂಬದವರಿಗೆ ಎಷ್ಟೋ ಸಹಾಯವಾಗುತ್ತಿವೆ.
ಇನ್ನು ಇಂದು ನಡೆಯುತ್ತಿರುವ ಬಜೆಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದ ಉಚಿತ ಗ್ಯಾರಂಟಿಗಳಿಗೆ ಸುಮಾರು 51 ಸಾವಿರ ಕೋಟಿ ರೂ ಮೀಸಲಿಡಲಾಗಿದೆ ಎಂದು ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ಇದನ್ನೂ ಓದಿ:
ಹೌದು, ಇಂದು ನಡೆಯುತ್ತಿರುವ ಬಜೆಟ್ ಮಂಡನೆಯಲ್ಲಿ ಕರ್ನಾಟಕದ ಉಚಿತ ಗ್ಯಾರಂಟಿ ಯೋಜನೆಗಳಿಗೆ ಪ್ರಸಕ್ತ ಸಾಲಿಗೆ 51 ಸಾವಿರ ಕೋಟಿ ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಜತೆಗೆ ಕರ್ನಾಟಕದ ಬಜೆಟ್ ಗ್ಯಾರಂಟಿ ಯೋಜನೆಗಳ ಜತೆಗೆ ಅಭಿವೃದ್ಧಿಯ 6 ಅಂಶಗಳ ಮೇಲೆ ಕೇಂದ್ರೀಕರಿಸಲಿದೆ ಎಂದು ತಮ್ಮ ಬಜೆಟ್ ಭಾಷಣದಲ್ಲಿ ಸಿದ್ದರಾಮಯ್ಯ ತಿಳಿಸಿದ್ದಾರೆ.
