ಬೆಂಗಳೂರು: ರಾಜ್ಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಅತಿಥಿ ಶಿಕ್ಷಕರು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿಯನ್ನು ನೀಡಿದ್ದು, ಪ್ರಸ್ತುತ ನೀಡಲಾಗುತ್ತಿರುವ ಮಾನಸಿಕ ಗೌರವ ಧನವನ್ನು ತಲಾ ಎರಡು ಸಾವಿರ ರೂಪಾಯಿಯನ್ನು ಹೆಚ್ಚಿಸಲಾಗುವುದು ಎಂದು ಬಜೆಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಇದನ್ನೂ ಓದಿ:
ಇನ್ನು ರಾಜ್ಯದ ಅರ್ಹ 100 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು ಎಂದು ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ:
LKG ಯಿಂದ ದ್ವಿತೀಯ ಪಿ.ಯು.ಸಿ ವರೆಗಿನ ಎಲ್ಲಾ ತರಗತಿಗಳ ವಿದ್ಯಾರ್ಥಿಗಳು, ಆಯಾ ತರಗತಿಗೆ ತಕ್ಕಂತೆ ಕಲಿಕೆಯ ಮಟ್ಟವನ್ನು ಹೊಂದುವ ನಿಟ್ಟಿನಲ್ಲಿ3 ವರ್ಷಗಳ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುವುದು. ಈ ಮೂಲಕ SSLC ಮತ್ತು PUC ಪರೀಕ್ಷೆಗಳ ಫಲಿತಾಂಶದಲ್ಲಿ ಸುಧಾರಣೆ ತರಲಾಗುವುದು ಎಂದರು.
