Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಿಎಂ 4 ಲಕ್ಷ ಕೋಟಿ ಬಜೆಟ್ ನ ಎಲ್ಲ ವರ್ಗದವರಿಗೂ ಸಮಾನವಾಗಿ ಹಂಚಿಕೆ ಮಾಡಿದ್ದಾರೆ: ಡಿಕೆಶಿ
  • Bangalore
  • Front news
  • Politics
  • State

ಸಿಎಂ 4 ಲಕ್ಷ ಕೋಟಿ ಬಜೆಟ್ ನ ಎಲ್ಲ ವರ್ಗದವರಿಗೂ ಸಮಾನವಾಗಿ ಹಂಚಿಕೆ ಮಾಡಿದ್ದಾರೆ: ಡಿಕೆಶಿ

admin March 8, 2025 1 minute read
Spread the love

ಕಲಬುರಗಿ: ಸಿಎಂ ಸಿದ್ದರಾಮಯ್ಯ ಅವರು 4 ಲಕ್ಷ ಕೋಟಿಗೂ ಹೆಚ್ಚಿನ ಮೊತ್ತದ ಐತಿಹಾಸಿಕ ಬಜೆಟ್ ಮಂಡನೆ ಮಾಡಿದ್ದಾರೆ. ಎಲ್ಲ ವರ್ಗದ ಜನರಿಗೂ ಸಮತೋಲನವಾಗಿ ಅನುದಾನ ಕೊಟ್ಟಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕಲಬುರಗಿಯಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಶನಿವಾರ ಮಾತನಾಡಿದ, ಹೆಣ್ಣು ಕುಟುಂಬದ ಕಣ್ಣು ಎಂದು ಭಾವಿಸಿ ಮಹಿಳೆಯರಿಗೆ ಹೆಚ್ಚು ಶಕ್ತಿ ತುಂಬಬೇಕು ಎಂಬ ಉದ್ದೇಶದಿಂದ ನಾವು ಅನೇಕ ಕಾರ್ಯಕ್ರಮಗಳನ್ನು ನೋಡಿದ್ದೇವೆ. ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತರ ಬದುಕಿನಲ್ಲಿ ಪ್ರೋತ್ಸಾಹ ನೀಡುವ ಪ್ರಯತ್ನ ಮಾಡಿದ್ದೇವೆ. ಚುನಾವಣೆಗೂ ಮುನ್ನ ನಾವು ಕೊಟ್ಟ ಮಾತಿನಂತೆ ಪ್ರತಿ ವರ್ಷ 5 ಸಾವಿರ ಕೋಟಿ ಕೊಡುತ್ತಿದ್ದೇವೆ. ಕಳೆದ ವರ್ಷವೂ ಕೊಟ್ಟಿದ್ದೆವು. ಈ ವರ್ಷವೂ ಕೊಟ್ಟಿದ್ದೇವೆ. ಇಂದು ಜೇವರ್ಗಿಯಲ್ಲಿ 1 ಸಾವಿರ ಕೋಟಿ ಮೊತ್ತದ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗುವುದು. ನೀರಾವರಿ ಯೋಜನೆ ಮೂಲಕ ಶಕ್ತಿ ತುಂಬಲು 27 ಸಾವಿರ ಕೋಟಿ ಹಣವನ್ನು ಮೀಸಲಿಡಲಾಗಿದೆ ಎಂದು ತಿಳಿಸಿದರು.

ಕಲ್ಯಾಣ ಕರ್ನಾಟಕಕ್ಕೆ ಸಂಬಂಧಿಸಿದಂತೆ ತುಂಗಭದ್ರಾ ಅಣೆಕಟ್ಟಿನಿಂದ ವ್ಯರ್ಥವಾಗುತ್ತಿರುವ 25-30 ಟಿಎಂಸಿ ನೀರನ್ನು ಉಳಿಸಿಕೊಳ್ಳಲು ಯೋಜನೆ ರೂಪಿಸುವ ಬಗ್ಗೆ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಹಾಗೂ ತೆಲಂಗಾಣ ಸಿಎಂ ರೇವಂತ ರೆಡ್ಡಿ ಅವರ ಸಮಯ ಕೇಳಿದ್ದೇನೆ. ನವಲಿ ಅಣೆಕಟ್ಟು ಹಾಗೂ ಇದಕ್ಕೆ ಪರ್ಯಾಯವಾಗಿ ಮತ್ತೊಂದು ಯೋಜನೆಯನ್ನು ಪ್ರಸ್ತಾಪಿಸಲಾಗಿದೆ. ಇನ್ನು ಸಿಎಂ ತಾಂತ್ರಿಕ ಸಲಹೆಗಾರರಾದ ಕನ್ಹಯ್ಯ ನಾಯ್ಡು ಅವರ ಬಳಿಯು ನಮ್ಮ ಅಧಿಕಾರಿಗಳು ಚರ್ಚೆ ಮಾಡಲು ಸೂಚಿಸಿದ್ದೇವೆ ಎಂದರು. ಇದನ್ನೂ ಓದಿ: ಮಹಿಳೆಯರು ಪುರುಷರಿಗೆ ಸಮಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ: ರಾಮಲಿಂಗಾರೆಡ್ಡಿ

ಆರೋಗ್ಯ ಇಲಾಖೆಯಿಂದ ಈ ಭಾಗದಲ್ಲಿ ಅನೇಕ ಯೋಜನೆ ಹಮ್ಮಿಕೊಳ್ಳಲಾಗಿದ್ದು, ಶಿಕ್ಷಣ ಕ್ಷೇತ್ರದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಗ್ರಾಮೀಣ ಪ್ರದೇಶದಲ್ಲಿ ಕಟ್ಟಲು ಮುಂದಾಗಿದ್ದೇವೆ. ಇನ್ನು ದೇವಾಲಯದ ಅರ್ಚಕರಿಗೆ ನೀಡುವ ವೇತನ ಹೆಚ್ಚಿಸಿದ್ದೇವೆ. ಆದರೂ ಬಿಜೆಪಿಯವರು ಟೀಕೆ ಮಾಡುತ್ತಾರೆ. ಗ್ರಾಮೀಣ ಭಾಗದಲ್ಲಿ ಹೊಸ ಆಸ್ಪತ್ರೆ ನಿರ್ಮಾಣಕ್ಕೆ ಆದ್ಯತೆ ನೀಡಿದ್ದೇವೆ. ಎಲ್ಲಾ ವರ್ಗದವರನ್ನು ಗಮನದಲ್ಲಿಟ್ಟುಕೊಂಡು ನಾವು ಬಜೆಟ್ ಮಂಡಿಸಿದ್ದೇವೆ ಎಂದು ಹೇಳಿದರು.

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಮುಸಲ್ಮಾನರಿಗೆ ಎದೆ ಸೀಳಿದರೆ ನಾಲ್ಕು ಅಕ್ಷರ ಇಲ್ಲ. ಪಂಚರ್ ಹಾಕಿಕೊಂಡು ಇರುತ್ತಾರೆ ಎಂದು ಹೇಳಿದ್ದರು. ಮುಸಲ್ಮಾನರಲ್ಲಿ ವಿದ್ಯಾವಂತರು, ಬುದ್ಧಿವಂತರು, ಪ್ರಜ್ಞಾವಂತರು ಇದ್ದಾರೆ ಎಂದು ಅವರಿಗೂ ಅರ್ಥವಾಗಬೇಕಲ್ಲವೇ. ಗುತ್ತಿಗೆಯಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ನೀಡಿರುವಂತೆ ಮುಸಲ್ಮಾನರಿಗೂ ಶೇ.4ರಷ್ಟು ಮೀಸಲಾತಿ ನೀಡಲಾಗಿದೆ. ಅವರಿಗೂ ಆದ್ಯತೆ ನೀಡಿ ಆರ್ಥಿಕ ಶಕ್ತಿ ತುಂಬಲು ಈ ನಿರ್ಧಾರ ಮಾಡಿದ್ದೇವೆ ಎಂದು ತಿಳಿಸಿದರು.

 

About the Author

admin

Administrator

Visit Website View All Posts

Spread the love

Post navigation

Previous: ಮಹಿಳೆಯರು ಪುರುಷರಿಗೆ ಸಮಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ: ರಾಮಲಿಂಗಾರೆಡ್ಡಿ
Next: ಬಿಜೆಪಿಯವರು ಸುಳ್ಳು ಹೇಳದೆ ಇನ್ನೇನು ಮಾಡಲು ಸಾಧ್ಯ?: ಡಿಸಿಎಂ

Views:

15

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.